Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Team Udayavani, Mar 29, 2024, 6:39 PM IST
ಅರುಣ್ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬಂದಿರುವ “ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಕೆಲವು ದಿನಗಳ ಹಿಂದಷ್ಟೇ “ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಮೋಷನ್ ಪೋಸ್ಟರ್ ಮೂಲಕ ಚಿತ್ರತಂಡ ಸಿನಿಮಾದ ಕೆಲ ಪಾತ್ರಗಳ ದರ್ಶನ ಮಾಡಿಸಿತ್ತು.
ಚಿತ್ರದಲ್ಲಿ ಚಂದನ್ ಶೆಟ್ಟಿ, ಭಾವನಾ ಅಪ್ಪು, ಅಮರ್, ಮನಸ್ವಿ, ವಿವಾನ್, ಸುನಿಲ್ ಪುರಾಣಿಕ್, ಅರವಿಂದ ರಾಜ್ ಪ್ರಶಾಂತ್ ಸಂಬರ್ಗಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಮಾನಸಿ, ಭವ್ಯ, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಕಾಕ್ರೋಚ್ ಸುಧಿ ಮುಂತಾದವರು ಇತರ ಪಾತ್ರಗಳಲ್ಲಿ ನಟಿಸಿದ್ದಾ.
ಇದೊಂದು ಟೀನೇಜ್ ಕಲ್ಟ್ ಸಿನಿಮಾ ಎಂಬುದನ್ನು ಚಿತ್ರತಂಡ ಹೇಳಿಕೊಂಡಿದೆ. ನಿರ್ದೇಶಕ ಅರುಣ್ ಅಮುಕ್ತ ಪಕ್ಕಾ ಪ್ಲಾನ್ ಮಾಡಿಕೊಂಡು, ಅಂದುಕೊಂಡಂತೆಯೇ ಚಿತ್ರೀಕರಣ ಮುಗಿಸಿಕೊಂಡಿ ¨ªಾರೆ. ಐವತ್ತು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ ಎಂದು ಕಾರ್ಯಕಾರಿ ನಿರ್ಮಾಪಕ ಶ್ರೀಕಾಂತ್ ಜಿ ಕಶ್ಯಪ್ ಮಾಹಿತಿ ನೀಡಿದರು. ವಿದ್ಯಾರ್ಥಿ ವಿದ್ಯಾರ್ಥಿ ನಿಯರೇ ಚಿತ್ರದಲ್ಲಿ ಚಂದನ್ ಶೆಟ್ಟಿ ಅವರದ್ದು ಭಿನ್ನ ಶೇಡ್ ಗಳನ್ನು ಹೊಂದಿರುವ ಪಾತ್ರವಂತೆ. ಅವರ ಪಾತ್ರಕ್ಕೆ ಮೂರು ಆಯಾಮಗಳಿವೆ. ಆ ಮೂರೂ ಪಾತ್ರಗಳಿಗಾಗಿ ಅವರು ತಿಂಗಳುಗಟ್ಟಲೆ ಶ್ರಮವಹಿಸಿ ತಯಾರಿ ನಡೆಸಿದ್ದಾ. ಆ ಮೂರೂ ಶೇಡ್‌ಗಳು ಒಂದಕ್ಕೊಂದು ತದ್ವಿರುದ್ಧವಾಗಿವೆ ಯಂತೆ. ಚಂದನ್ ಅಸಲೀ ವ್ಯಕ್ತಿತ್ವಕ್ಕೆ ವಿರುದ್ಧವಾಗಿರೋ ಆ ಪಾತ್ರಗಳನ್ನು ನಿಭಾಯಿಸೋದು ಸವಾಲಾಗಿತ್ತಂತೆ. ಸುಬ್ರಮಣ್ಯ ಕುಕ್ಕೆ ಮತ್ತು ಶಿವಲಿಂಗೇಗೌಡ “ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.