ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್ ಶೋ
Team Udayavani, Jul 6, 2024, 1:18 PM IST
ಅರುಣ್ ಅಮುಕ್ತ ನಿರ್ದೇಶನದ “ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಜು.19ರಂದು ತೆರೆಕಾಣುತ್ತಿದೆ. ಅದಕ್ಕೂ ಮುನ್ನ ಚಿತ್ರದ ಪ್ರೀಮಿಯರ್ ಶೋ ನಡೆಯಲಿದೆ. ಸಾಮಾನ್ಯವಾಗಿ ಬೆಂಗಳೂರು, ಮೈಸೂರಿನಲ್ಲಿ ಸಿನಿಮಾಗಳ ಪ್ರೀಮಿಯರ್ ಶೋ ನಡೆಯುತ್ತದೆ. ಆದರೆ, “ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಪ್ರೀಮಿಯರ್ ಶೋ ದುಬೈನಲ್ಲಿ ಆಯೋಜನೆಯಾಗಿದೆ.
ಜುಲೈ 14ರಂದು ದುಬೈನಲ್ಲಿ ಈ ಚಿತ್ರದ ಪ್ರೀಮಿರ್ಯ ಶೋ ನಡೆಯಲಿದ್ದು, ಪ್ರತಿಷ್ಠಿತ ಒಎಂಜಿ ಕಂಪೆನಿ ದುಬೈ ನಲ್ಲಿ ಈ ಚಿತ್ರದ ವಿತರಣಾ ಹಕ್ಕು ಪಡೆದುಕೊಂಡಿದೆ. ಇದಕ್ಕೆ ಬೇಕಾದ ಎಲ್ಲ ತಯಾರಿಗಳನ್ನೂ ಚಿತ್ರತಂಡ ಮಾಡಿಕೊಳ್ಳುತ್ತಿದೆ.
ಇದು ಟೀನೇಜ್ ಕಲ್ಟ್ ಜಾನರ್‌ಗೆ ಸೇರಿದ ಸಿನಿಮಾ. ಕನ್ನಡಕ್ಕೆ ಇದು ಅಪರೂಪ. ಯೂತ್‌ಫುಲ್ ಕಥೆ ಹೊಂದಿ ದೆ. ಇಂತಹ ಸಿನಿಮಾಗಳನ್ನು ಜನ ಇಷ್ಟಪಡುತ್ತಾರೆ. ಇಲ್ಲಿ ನಾವು ಕಾಮಿಡಿ ಮಾಡಲು ಹೋಗಿಲ್ಲ. ಬದಲಾಗಿ ಗಂಭೀರ ವಿಚಾರಗಳನ್ನು ಎಂಟರ್‌ಟೈನ್ ಆಗಿ ಹೇಳಿದ್ದೇವೆ. ಚಿತ್ರ ದ ಲ್ಲೊಂದು ಸಂದೇಶವಿದೆ. ಅದರಲ್ಲೂ ವಿದ್ಯಾರ್ಥಿಗಳ ಜೊತೆ ಅವರ ಪಾಲಕರು ಕೂಡಾ ಈ ಸಿನಿಮಾವನ್ನು ನೋಡಬೇಕು ಎನ್ನುವುದು ನಿರ್ದೇಶಕರ ಮಾತು.
ಚಿತ್ರದಲ್ಲಿ ಚಂದನ್ ಶೆಟ್ಟಿ, ಭಾವನಾ ಅಪ್ಪು, ಅಮರ್, ಮನಸ್ವಿ, ವಿವಾನ್, ಸುನಿಲ್ ಪುರಾಣಿಕ್, ಅರವಿಂದ ರಾಜ್, ಮಾನಸಿ, ಭವ್ಯ, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಈ ಚಿತ್ರವನ್ನು ಸುಬ್ರಮಣ್ಯ ಕುಕ್ಕೆ ಮತ್ತು ಶಿವಲಿಂಗೇಗೌಡ ನಿರ್ಮಾಣ ಮಾಡಿದ್ದಾರೆ. ಅಂದಹಾಗೆ, ಚಿತ್ರ ಜು.19ರಂದೇ ಕೇರಳದಲ್ಲೂ ಬಿಡುಗಡೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.