ಮೂರು ತಾಸು ನಿದ್ದೆ ಹೋಯ್ತು ,ಕಣ್ತುಂಬ ನಿದ್ದೆ ಬಂತು

ಗಾಯಕ ವಿಜಯಪ್ರಕಾಶ್‌ ಫ್ಯಾಮಿಲಿ ಸ್ಟೋರಿ

Team Udayavani, Apr 21, 2020, 9:34 AM IST

cinema-tdy-1

ಲಾಕ್‌ಡೌನ್‌ ಕೆಲವರಿಗೆ ಬೇಸರ ತರಿಸಿದರೆ, ಇನ್ನು ಕೆಲವರಿಗಂತೂ ಖುಷಿ ತರಿಸಿರುವುದು ಸುಳ್ಳಲ್ಲ. ಪ್ರತಿಯೊಬ್ಬರೂ ತಿಂಗಳಿಗೂ ಹೆಚ್ಚು ದಿನಗಳ ಕಾಲ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮನೆಯಲ್ಲೇ ಇದ್ದಾರೆ. ಮಾತಾಡು, ಆಟ ಆಡು, ಮನೆಯವರನ್ನು ರಂಜಿಸು, ಟಿವಿಯಲ್ಲಿ ನ್ಯೂಸ್‌ ನೋಡು, ಸಿನಿಮಾ ನೋಡು ಹೀಗೆ ಕಾಲ ಕಳೆಯುವಂತಾಗಿದೆ. ಇದಕ್ಕೆ ಸಿನಿಮಾ ನಟ,ನಟಿಯರೂ ಹೊರತಲ್ಲ.

ಅದೇನೆ ಇರಲಿ, ಇಷ್ಟು ದಿನ ತುಂಬಾ ಬಿಝಿಯಾಗಿ, ಹೊರಗಡೆಯೇ ದುಡಿಯುತ್ತಿದ್ದ ಮಂದಿ ಮನೆಯವರ ಜೊತೆ ಇದ್ದಾರೆ. ಗಾಯಕ ವಿಜಯಪ್ರಕಾಶ್‌ ಅವರಂತೂ, ಸಿಕ್ಕಾಪಟ್ಟೆ ಬಿಝಿ ಇದ್ದವರು. ಹಾಡುವುದು, ರಿಯಾಲಿಟಿ ಶೋಗಳಲ್ಲಿ ಭಾಗವಹಿಸುವುದು ಸೇರಿದಂತೆ ಇತ್ಯಾದಿ ಕಾರ್ಯಕ್ರಮ ಕೊಡುವ ಮೂಲಕ ಬಿಝಿಯಾಗಿದ್ದರು. ಬೆಂಗಳೂರಿಗಿಂತ ಮುಂಬೈನಲ್ಲೇ ಹೆಚ್ಚು ಓಡಾಟ ನಡೆಸುತ್ತಿದ್ದ ಅವರಿಗೆ ಬಿಡುವಿರಲಿಲ್ಲ. ಮನೆಯವರಂತೂ ವಿಜಯಪ್ರಕಾಶ್‌ ಅವರು ಮನೆಯಲ್ಲಿ ಹೆಚ್ಚು ಸಮಯ ಸಿಗಲ್ಲ ಎಂಬ ಕಾರಣಕ್ಕೆ ಬೇಸರಗೊಂಡಿದ್ದೂ ಉಂಟು. ಆದರೆ, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಿಜಯಪ್ರಕಾಶ್‌ ಈಗ ಮನೆ ಬಿಟ್ಟು ಎಲ್ಲೂ ಹೊರಗೆ ಹೋಗಿಲ್ಲ. ಮನೆಯಲ್ಲೆ ಅಮ್ಮ, ಪತ್ನಿ ಹಾಗು ಮಗಳ ಜೊತೆ ಕಾಲ ಕಳೆಯುತ್ತಿದ್ದಾರೆ.

ಅದರಲ್ಲೂ ಅವರು ದಿನಕ್ಕೆ ಸುಮಾರು 4 ತಾಸು ಮಾತ್ರ ನಿದ್ದೆ ಮಾಡುತ್ತಿದ್ದರಂತೆ. ಆದರೆ, ಈಗಂತೂ ಅವರು, ಕಣ್ತುಂಬಾ ನಿದ್ದೆ ಮಾಡುತ್ತಿದ್ದಾರಂತೆ. ಅಷ್ಟೇ ಅಲ್ಲ, ಅವರು ಕಾರ್ಯಕ್ರಮಗಳಿಗಾಗಿ ಹೊರಗಡೆ ಸುತ್ತಾಡುತ್ತಿದ್ದೇ ಹೆಚ್ಚು. ಹೋದಲೆಲ್ಲಾ ಹಲವು ರೆಸ್ಟೋರೆಂಟ್‌ಗಳಲ್ಲೇ ಊಟ ಮಾಡುತ್ತಿದ್ದರು. ಈಗ ಮನೆಯಲ್ಲಿ ಪತ್ನಿ ಮಾಡುವ ಅಡುಗೆ ರುಚಿ ಸವಿಯುವ ಮೂಲಕ ಹ್ಯಾಪಿಯಾಗಿದ್ದಾರಂತೆ. ಇನ್ನು, ವಿಜಯಪ್ರಕಾಶ್‌ ಮನೆಯಲ್ಲಿ ಸುಮ್ಮನೆ ಕೂರದೆ, ಪತ್ನಿಗೆ ಸಹಾಯ ಮಾಡಲು ಮನೆಯಲ್ಲಿ ಮಗಳ ಜೊತೆ ಕಸ ಗುಡಿಸುತ್ತಾರಂತೆ. ಇನ್ನು, ಮನೆಯವರೆಲ್ಲ ಸೇರಿ ಚೌಕಬಾರ ಆಡುತ್ತಿದ್ದಾರಂತೆ. ಇವೆಲ್ಲವನ್ನೂ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುವ ಮೂಲಕ ಇಷ್ಟು ವರ್ಷಗಳಲ್ಲಿ ನಾನು ಫ್ಯಾಮಿಲಿ ಜೊತೆ ಇದ್ದು ಎಂಜಾಯ್‌ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.