ವರಮಹಾಲಕ್ಷ್ಮೀ ಹಬ್ಬಕ್ಕೆ ವಿಕ್ರಂ ರವಿಚಂದ್ರನ್ ಚಿತ್ರ ಶುರು
ನಾಯಕಿ ಹುಡುಕಾಟದಲ್ಲಿ ಚಿತ್ರತಂಡ ಓಡಾಟ
Team Udayavani, Jun 13, 2019, 3:00 AM IST
ಈ ಹಿಂದೆ ರವಿಚಂದ್ರನ್ ಅವರ ಎರಡನೇ ಪುತ್ರ ವಿಕ್ರಮ್ ರವಿಚಂದ್ರನ್ ಅವರು ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ ಎಂದು ಸುದ್ದಿಯಾಗಿತ್ತು. ಆ ಚಿತ್ರವನ್ನು ಸಹನಾಮೂರ್ತಿ ನಿರ್ದೇಶನ ಮಾಡಲಿದ್ದಾರೆ ಎಂಬ ಬಗ್ಗೆಯೂ ಹೇಳಲಾಗಿತ್ತು. ಆಗ ಆ ಚಿತ್ರ ಯಾವಾಗ ಶುರುವಾಗುತ್ತೆ ಎಂಬುದಕ್ಕೆ ಉತ್ತರ ಇರಲಿಲ್ಲ. ಈಗ ವರಮಹಾಲಕ್ಷ್ಮೀ ಹಬ್ಬದಂದು ಚಿತ್ರಕ್ಕೆ ಚಾಲನೆ ಸಿಗುತ್ತಿರುವುದು ಪಕ್ಕಾ ಆಗಿದೆ.
ಈ ಹಿಂದೆ ಪ್ರೇಮಿಗಳ ದಿನದಂದು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಚಿತ್ರತಂಡ ನಿರ್ಧರಿಸಿತ್ತು. ಆ ಬಳಿಕ ಯುಗಾದಿ ಹಬ್ಬದಂದು ಚಿತ್ರಕ್ಕೆ ಚಾಲನೆ ಸಿಗಲಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಕಾರಣಾಂತರಗಳಿಂದ ಮುಂದಕ್ಕೆ ಹೋದ ಚಿತ್ರ, ಈಗ ವರಮಹಾಲಕ್ಷ್ಮೀ ಹಬ್ಬಕ್ಕೆ ಶುರುವಾಗುವುದು ಪಕ್ಕಾ ಆಗಿದೆ. ಈ ಚಿತ್ರದ ಮೂಲಕ ವಿಕ್ರಮ್ ರವಿಚಂದ್ರನ್ ನಾಯಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ ಎಂಬುದು ವಿಶೇಷ.
ಈ ಹಿಂದೆ “ರೋಸ್’ ಮತ್ತು “ಮಾಸ್ ಲೀಡರ್’ ಚಿತ್ರಗಳನ್ನು ನಿರ್ದೇಶಿಸಿದ್ದ ಸಹನಾಮೂರ್ತಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸದ್ಯಕ್ಕೆ ಸ್ಕ್ರಿಪ್ಟ್ ಕೆಲಸ ಮುಗಿಸಿರುವ ನಿರ್ದೇಶಕರು, ವಿಕ್ರಮ್ ಅವರಿಗೆ ನಾಯಕಿಯನ್ನು ಹುಡುಕುತ್ತಿದ್ದಾರೆ. ಈ ಚಿತ್ರದ ನಾಯಕಿ ಸ್ಥಾನವನ್ನು ಹೊಸ ಪ್ರತಿಭೆಗೆ ಅವಕಾಶ ಕೊಡಲು ನಿರ್ದೇಶಕರು ನಿರ್ಧರಿಸಿದ್ದಾರೆ. ನಾಯಕಿಯ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.
ಅಂದಹಾಗೆ, ಇದೊಂದು ಸ್ವಮೇಕ್ ಕಥೆಯಾಗಿದ್ದು, ಪಕ್ಕಾ ಲವ್‌ಸ್ಟೋರಿ ಇರಲಿದೆ. ತಾಯಿ ಸೆಂಟಿಮೆಂಟ್, ಎಮೋಷನ್ಸ್ ಹಾಗೂ ಒಂದಷ್ಟು ಗೆಳೆತನ ಇತ್ಯಾದಿ ವಿಷಯಗಳು ಹೈಲೈಟ್ ಆಗಿರಲಿದೆಯಂತೆ. ಚಿತ್ರದ ಪಾತ್ರಕ್ಕಾಗಿ ವಿಕ್ರಮ್ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರಂತೆ.
ರವಿಚಂದ್ರನ್ ಅವರ ಪುತ್ರ ಎಂಬ ಕಾರಣಕ್ಕೆ ಇಲ್ಲಿ ಅವರ ಯಾವುದೇ ಶೇಡ್ ಇರುವುದಿಲ್ಲ ಎಂಬುದು ಚಿತ್ರತಂಡದ ಮಾತು. ಇನ್ನು, ಈ ಚಿತ್ರವನ್ನು ಗೌರಿ ಎಂಟರ್ ಟೈನರ್ಸ್ ಬ್ಯಾನರ್‌ನಲ್ಲಿ ಸೋಮಣ್ಣ ಮತ್ತು ಸುರೇಶ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ರವಿವರ್ಮ ಅವರ ಸಾಹಸ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…
Bengaluru: ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ
Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು
Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್
Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್ ತಾತ್ಕಾಲಿಕ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.