![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 30, 2022, 9:02 AM IST
ಎಲ್ಲಾ ಅಂದುಕೊಂಡಂತೆ ಆಗಿದ್ದರೆಕಿಚ್ಚ ಸುದೀಪ್ ಅಭಿನಯದ ಬಹುನೀರಿಕ್ಷಿತ ಚಿತ್ರ “ವಿಕ್ರಾಂತ ರೋಣ’ ಈಗಾಗಲೇ ರಿಲೀಸ್ ಆಗಬೇಕಿತ್ತು. ಕೋವಿಡ್ ಅಡೆತಡೆಗಳ ಪರಿಣಾಮ “ವಿಕ್ರಾಂತ ರೋಣ’ ತನ್ನ ರಿಲೀಸ್ ಡೇಟ್ ಮುಂದಕ್ಕೆ ಹಾಕಿತ್ತು. “ಕೋಟಿಗೊಬ್ಬ3′ ನಂತರ ತಮ್ಮ ನೆಚ್ಚಿನ ನಟನನ್ನು ಕಣ್ ತುಂಬಿಕೊಳ್ಳಲುಕಿಚ್ಚ ಸುದೀಪ್ ಅಭಿಮಾನಿ ಬಳಗ ಕಾತರದಿಂದ ಕಾದಿದೆ.
“ವಿಕ್ರಾಂತ ರೋಣ’ನ ಆರ್ಭಟಕ್ಕೆಕಾದಿರುವ ಅಭಿಮಾನಿಗಳ ಪಾಲಿಗೆ ಇದೀಗ ಚಿತ್ರ ತಂಡ ಯುಗಾದಿ ಬೆಲ್ಲವನ್ನು ನೀಡಲು ಹೊರಟಿದೆ. ಇದೇ ಏ.02 ಯುಗಾದಿಯಂದು ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಲಿದ್ದು, ಟೀಸರ್ ಮೂಲಕ ಪ್ರೇಕ್ಷಕನ ಕಾತುರವನ್ನು ಇಮ್ಮಡಿಗೊಳಿಸಲಿದೆ. ಏ.2 ರಂದು ಬೆಳಿಗ್ಗೆ 9.55ಕ್ಕೆ ಟೀಸರ್ ಮೂಲಕ ಬಿಡುಗಡೆ ದಿನಾಂಕವನ್ನು ಘೋಷಿಸಲು ಚಿತ್ರ ತಂಡ ಸಜ್ಜಾಗಿದೆ.
ಈ ಮೊದಲು ದುಬೈನ ಬುರ್ಜ್ ಖಲೀಫಾದಲ್ಲಿ ಚಿತ್ರದ ಪೋಸ್ಟರ್ ರಿಲೀಸ್ ಮಾಡುವ ಮೂಲಕ ದಾಖಲೆ ಬರೆದಿದ್ದ ಚಿತ್ರ, ಕನ್ನಡ, ಹಿಂದಿ, ತೆಲುಗು,ತಮಿಳು ಸೇರಿದಂತೆ ಒಟ್ಟೂ10ಕ್ಕೂ ಹೆಚ್ಚು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಪ್ಯಾನ್ ಇಂಡಿಯಾ ಚಿತ್ರವಾಗಿ ಹೊರಹೊಮ್ಮಿರುವ ಈ ಚಿತ್ರ3ಡಿ ಮೂಲಕವೂ ತೆರೆಗೆ ಬರಲಿದೆ. ಚಿತ್ರದ ಹಾಡೊಂದರಲ್ಲಿ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಸುದೀಪ್ ಜೊತೆ ಹೆಜ್ಜೆ ಹಾಕಿದ್ದಾರೆ.
Announcing the arrival of the Devil! #VikrantRonaReleaseTeaser at 9:55 AM on Apr 2nd. #VikrantRona @KicchaSudeep @nirupbhandari @neethaofficial@Asli_Jacqueline @JackManjunath @shaliniartss @Alankar_Pandian @ZeeStudios_ pic.twitter.com/0OY1dBuAh4
— Anup Bhandari (@anupsbhandari) March 29, 2022
ಶಾಲಿನಿ ಜಾಕ್ ಮಂಜು ಹಾಗೂ ಅಲಂಕಾರ್ ಪಾಂಡಿಯನ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ನಿರೂಪ್ ಭಂಡಾರಿ, ನೀತಾ ಅಶೋಕ್, ರವಿಶಂಕರ್ ಗೌಡ, ಮಧುಸೂಧನ್ ರಾವ್ ಎಂಬ ದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ. ಅನೂಪ್ ಭಂಡಾರಿ ನಿರ್ದೇಶನ, ಬಿ. ಅಜನೀಶ್ ಲೋಕ್‌ನಾಥ್ ಸಂಗೀತ ಸಂಯೋಜನೆ, ವಿಲಿಯಂ ಡೇವಿಡ್ ಛಾಯಾಗ್ರಹಣ, ಆಶಿಕ್ ಕುಸುಗೊಳ್ಳಿ ಸಂಕಲನ ಚಿತ್ರಕ್ಕಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.