ಕಿಚ್ಚ, ದರ್ಶನ್ ಮುನಿಸು; ಅಂಬಿ ಮಧ್ಯಸ್ಥಿಕೆ ಬಗ್ಗೆ ಸುಮಲತಾ ಹೇಳೋದೇನು?
Team Udayavani, Mar 13, 2017, 4:17 PM IST
ಬೆಂಗಳೂರು: ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಕಿಚ್ಚ ಸುದೀಪ್ ಹಾಗೂ ತೂಗುದೀಪ್ ದರ್ಶನ್ ನಡುವಿನ ವಿವಾದಕ್ಕೆ ಸಂಬಂಧಿಸಿದಂತೆ ಹಿರಿಯ ನಟ ಅಂಬರೀಶ್ ಅವರು ಮಧ್ಯಸ್ಥಿಕೆ ವಹಿಸಬೇಕೆಂಬ ಅಭಿಮಾನಿಯೊಬ್ಬರ ಟ್ವೀಟ್ ಗೆ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ.
ಸುದೀಪ್ ಹಾಗೂ ದರ್ಶನ್ ಸರಿ, ತಪ್ಪು ನಿರ್ಧಾರಗಳನ್ನು ಕೈಗೊಳ್ಳಲು ಸ್ವತಂತ್ರರು. ಇಬ್ಬರೂ ಸರಿ, ತಪ್ಪು ನಿರ್ಧಾರ ಕೈಗೊಳ್ಳುವಷ್ಟು ಬುದ್ಧಿವಂತರು ಎಂದು ಉತ್ತರಿಸುವ ಮೂಲಕ ವಿವಾದದಲ್ಲಿ ಅಂಬರೀಶ್ ಮಧ್ಯಪ್ರವೇಶಿಸದಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅವರ ನಿರ್ಧಾರಗಳನ್ನು ನಾವು ಗೌರವಿಸಬೇಕು ಎಂದು ತಿಳಿಸಿದ್ದಾರೆ.
ಅಂಬರೀಶ್ ಮಧ್ಯಸ್ಥಿಕೆ ವಹಿಸುವಂತೆ ಹೇಳಿ ಎಂಬ ಅಭಿಮಾನಿಯೊಬ್ಬರ ಟ್ವೀಟ್ ಗೆ ಅಂಬರೀಶ್ ಪತ್ನಿ ಸುಮಲತಾ ಅವರು ಟ್ವೀಟ್ ನಲ್ಲಿ ಈ ರೀತಿ ಉತ್ತರ ನೀಡಿದ್ದಾರೆ.
ಇತ್ತೀಚೆಗಷ್ಟೇ ನಟ ದರ್ಶನ್, ನಾನು ಮತ್ತು ಸುದೀಪ್ ಇನ್ಮುಂದೆ ಗೆಳೆಯರಲ್ಲ, ಸ್ಯಾಂಡಲ್ ವುಡ್ ನ ನಟರು ಅಷ್ಟೇ ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಕಿಚ್ಚ ಸುದೀಪ್, ಗಿವ್ ರೆಸ್ಪೆಕ್ಟ್ ಅಂಡ್ ಟೇಕ್ ರೆಸ್ಪೆಕ್ಟ್ ಎಂದು ತಿರುಗೇಟು ನೀಡಿದ್ದರು. ಇಬ್ಬರ ನಡುವಿನ ಸಂಬಂಧ ಹಳಸಿರುವುದಕ್ಕೆ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಇಬ್ಬರ ನಡುವೆ ಸಂಧಾನ ನಡೆಸಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಅಂಬರೀಶ್ ಅವರನ್ನು ಅಭಿಮಾನಿಗಳು ಒತ್ತಾಯಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Suri Loves Sandhya: ಟೀಸರ್ನಲ್ಲಿ ಸೂರಿ ಲವ್ ಸ್ಟೋರಿ
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.