ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಸುದೀಪ್ -ಪ್ರಿಯಾ ದಂಪತಿ
Team Udayavani, Oct 19, 2021, 2:36 PM IST
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಪ್ರಿಯಾ ಸುದೀಪ್ ಅವರಿಗೆ ಇಂದು ವಿಶೇಷವಾದ ದಿನ. ಸಂಭ್ರಮಕ್ಕೆ ಕಾರಣ ಈ ದಂಪತಿ ವಿವಾಹಕ್ಕೆ 20 ವಸಂತಗಳು ತುಂಬಿರುವುದು.
ಸುದೀಪ್ ಹಾಗೂ ಪ್ರಿಯಾ ಅವರು 20ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ. ಇತ್ತ ಅವರ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಶುಭ ಹಾರೈಸಿದ್ದಾರೆ.
ಸುದೀಪ್ -ಪ್ರಿಯಾ 2001ರ ಅಕ್ಟೋಬರ್ 18ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ದಂಪತಿಗೆ 17 ವರ್ಷದ (ಸಾನ್ವಿ) ಮಗಳಿದ್ದಾಳೆ. ಇದೀಗ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 20 ವರ್ಷ ಕಳೆದಿದ್ದು, ಈ ಹಿನ್ನೆಲೆ ಸಾನ್ವಿ ಸೇರಿದಂತೆ ಅಭಿಮಾನಿಗಳು ಸುದೀಪ್ ದಂಪತಿಗೆ ಶುಭ ಕೋರಿದ್ದಾರೆ.
20 already!!!!!! ?
Time fliessssss….
Happy 20 priii @iampriya06
❤?
Thank u for everythn.
Thank you Tas&Chan for this lovely poem❤??. https://t.co/JsenPed483 pic.twitter.com/RAH2wtyJlE— Kichcha Sudeepa (@KicchaSudeep) October 19, 2021
ಕೋವಿಡ್ ಕಾರಣದಿಂದಾಗಿ ಸುದೀಪ್ ದಂಪತಿ ವಿವಾಹ ವಾರ್ಷಿಕೋತ್ಸವವನ್ನು ಸರಳವಾಗಿ ಆಚರಿಸಿಕೊಂಡಿದ್ದು, ಇದೀಗ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.
ತಮ್ಮ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿರುವ ಸುದೀಪ್ ಅವರು ಟ್ವೀಟ್ ಮಾಡಿದ್ದು, 20 ವರ್ಷಗಳು ಕಳೆದಿದ್ದೆ ಗೊತ್ತಾಗಲಿಲ್ಲ ಎಂದಿದ್ದಾರೆ.
ಇನ್ನು ಕಿಚ್ಚ ಸುದೀಪ್ ಅವರು ಮತ್ತೊಂದು ಸಂಭ್ರಮದಲ್ಲಿದ್ದಾರೆ. ಅದು ‘ಕೋಟಿಗೊಬ್ಬ 3’ ಚಿತ್ರದ ಯಶಸ್ಸು. ಈ ತಿಂಗಳು 15 ರಂದು ಚಿತ್ರಮಂದಿರಗಳಿಗೆ ಬಿಡುಗಡೆಯಾಗಿರುವ “ಕೋಟಿಗೊಬ್ಬ 3” ಸಿನಿಮಾ ಅಭಿಮಾನಿಗಳು ಹೃದಯವನ್ನು ಗೆದ್ದಿದೆ. ರಾಜ್ಯಾದ್ಯಂತ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.