“ಬೆಟ್ಟದ ಹೂವು’ ಶೂಟಿಂಗ್ ಸ್ಪಾಟ್ನಲ್ಲಿ ಪುನೀತ್ ಏನಂದ್ರು?: Watch
Team Udayavani, Nov 9, 2018, 1:21 PM IST
“ಬೆಟ್ಟದ ಹೂ’ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವೃತ್ತಿ ಜೀವನಕ್ಕೆ ದೊಡ್ಡ ತಿರುವು ಕೊಟ್ಟ ಸಿನಿಮಾ. ಈ ಚಿತ್ರಕ್ಕೆ ಅವರು ನ್ಯಾಷನಲ್ ಅವಾರ್ಡ್ ಪಡೆದಿದ್ದು ಗೊತ್ತೇ ಇದೆ. 1985ರಲ್ಲಿ ನಿರ್ಮಾಣವಾದ ಈ ಸಿನಿಮಾ ಇಂದಿಗೂ ಎವರ್ಗ್ರೀನ್. ಇಡೀ ಸಿನಿಮಾದ ಶೂಟಿಂಗ್ ಚಿಕ್ಕಮಗಳೂರಿನ ಅತ್ತಿಗುಂಡಿಯಲ್ಲಿ ನಡೆದಿತ್ತು. ಇದೀಗ ಆ ಚಿತ್ರವನ್ನು ಪುನೀತ್ ರಾಜಕುಮಾರ್ ಮತ್ತೊಮ್ಮೆ ನೆನಪು ಮಾಡಿದ್ದಾರೆ.
ಹೌದು! ಇತ್ತೀಚೆಗೆ “ನಟಸಾರ್ವಭೌಮ’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಚಿಕ್ಕಮಗಳೂರಿನಲ್ಲಿ ಅತ್ತಿಗುಂಡಿ ಕಡೆಯಿಂದ ಪ್ರಯಾಣಿಸುತ್ತಿದ್ದರಂತೆ. ಆಗ ಅವರಿಗೆ “ಬೆಟ್ಟದ ಹೂವು’ ಸಿನಿಮಾದ ಚಿತ್ರೀಕರಣ ನಡೆದ ಸ್ಥಳದ ನೆನಪಾಗಿದೆ. ಕೂಡಲೇ ಕಾರನ್ನು ಅತ್ತಿಗುಂಡಿ ಕಡೆ ತಿರುಗಿಸಿದ ಪುನೀತ್ ಅಲ್ಲಿಗೆ ಹೋಗಿ ಶೂಟಿಂಗ್ ಸ್ಥಳ, ಸೆಟ್ ಎಲ್ಲಿ ಹಾಕಿದ್ದು, ಯಾರ್ಯಾರಿದ್ದರು ಎಂಬುದರ ಬಗ್ಗೆ ಮಾತನಾಡಿದ್ದಾರೆ.
ಸುಮಾರು 30 ವರ್ಷಗಳ ಹಿಂದೆ ಬಿಡುಗಡೆಯಾದ ಚಿತ್ರದ ಚಿತ್ರೀಕರಣದ ಸಂದರ್ಭಗಳನ್ನು ಮೆಲುಕು ಹಾಕಿದ್ದಾರೆ. ಅಷ್ಟೇ ಅಲ್ಲದೆ, ಅತ್ತಿಗುಂಡಿಯ ಗ್ರಾಮಸ್ಥರನ್ನು ಭೇಟಿಯಾಗಿ ಚಿತ್ರೀಕರಣದ ಸ್ಥಳಗಳ, ದೃಶ್ಯಗಳ ಬಗ್ಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಇದೀಗ ಈ ವೀಡಿಯೋವನ್ನು ತಮ್ಮ ಫೇಸ್ ಬುಕ್ ಅಕೌಂಟ್’ನಲ್ಲಿ ಪುನೀತ್ ರಾಜಕುಮಾರ್ ಶೇರ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.