“ತಾಯಿಗೆ ತಕ್ಕ ಮಗ’ನಿಗೆ ಸುದೀಪ್ ಹೇಳಿದ್ದೇನು ಗೊತ್ತಾ?
Team Udayavani, Nov 17, 2018, 4:39 PM IST
ಶಶಾಂಕ್ ನಿರ್ದೇಶನದ ಅಜೇಯ್ ರಾವ್ ಅಭಿನಯದ “ತಾಯಿಗೆ ತಕ್ಕ ಮಗ’ ಚಿತ್ರ ಶುಕ್ರವಾರವಷ್ಟೇ ತೆರೆಕಂಡಿದ್ದು, ಅಭಿಮಾನಿಗಳಿಂದ ಚಿತ್ರಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೇ ಈಗಾಗಲೇ ಚಿತ್ರವನ್ನು ಚಂದನವನದ ತಾರೆಯರು ವೀಕ್ಷಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಇದೀಗ ಚಿತ್ರಕ್ಕೆ ಕನ್ನಡದ ಆರಡಿ ಕಟೌಟ್ ಕಿಚ್ಚ ಸುದೀಪ್ ಕೂಡ ಬೆಸ್ಟ್ ವಿಶಸ್ ಮಾಡಿದ್ದಾರೆ.
ಹೌದು, ಕಿಚ್ಚ ಸುದೀಪ ತಮ್ಮ ಟ್ವೀಟರ್ ಖಾತೆಯಲ್ಲಿ ಚಿತ್ರದ ಬಗ್ಗೆ ಟ್ವೀಟ್ ಮಾಡುವುದರ ಮೂಲಕ ಚಿಯರ್ಸ್ ಹೇಳಿದ್ದಾರೆ. “ಮೊದಲ ಬಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದೀರಾ. ನಿಮಗೆ ನನ್ನ ಶುಭಾಶಯಗಳು. ನೀವು ನಿರ್ಮಾಪಕನ ವೃತ್ತಿಯಲ್ಲಿ ಯಶಸ್ವಿಯಾಗುತ್ತೀರಾ ಎಂಬ ನಂಬಿಕೆ ನನಗಿದೆ’ ಎಂದು ಟ್ವೀಟ್ ಮಾಡಿದ್ದಾರೆ. ಈ ಹಿಂದೆ ಕಿಚ್ಚ ಸುದೀಪ್ ಅಭಿನಯದ “ಬಚ್ಚನ್’ ಚಿತ್ರವನ್ನೂ ಕೂಡ ಶಶಾಂಕ್ ಅವರೇ ನಿರ್ದೇಶನ ಮಾಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಇನ್ನು ಅಜೇಯ್ ರಾವ್‍ರ 25 ಸಿನಿಮಾವಾಗಿ ತೆರೆಗೆ ಬರುತ್ತಿರುವ ಈ ಚಿತ್ರವು ಶಶಾಂಕ್ ನಿರ್ಮಾಣದಲ್ಲಿ ಮೂಡಿಬರುತ್ತಿದ್ದು, ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಚಿತ್ರವು ಎರಡು ಟ್ರ್ಯಾಕ್‌ನಲ್ಲಿ ಸಾಗುವ ಕಥೆಯಾಗಿದ್ದು, ಅಜೇಯ್ ರಾವ್ ಎದುರಿಗೆ ನಾಯಕಿಯಾಗಿ ಆಶಿಕಾ ನಟಿಸಿದ್ದು, ಸುಮಲತಾ ಅಂಬರೀಶ್ ತಾಯಿಯಾಗಿ ನಟಿಸಿದ್ದಾರೆ. ಅಲ್ಲದೇ ಚಿತ್ರಕ್ಕೆ ಕಿಚ್ಚ ಸುದೀಪ ಹಿನ್ನಲೆ ಧ್ವನಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್ ವೈದ್ಯ…
Moodbidri: ಜಿಲ್ಲಾ ಕಂಬಳ ಸಮಿತಿ ತುರ್ತು ಸಭೆ: ನಿಯಮ ಉಲ್ಲಂಘಿಸಿದರೆ ನಿಷೇಧ
Sandalwood: ತೆರೆ ಮೇಲೆ ಗನ್ಸ್ ಆ್ಯಂಡ್ ರೋಸಸ್
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.