Rakshit Shetty; ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಬಿಡುಗಡೆ ಮತ್ತೆ ಮುಂದೆ ಹಾಕಿದ್ಯಾಕೆ?
Team Udayavani, Oct 22, 2023, 12:57 PM IST
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ರಕ್ಷಿತ್ ಶೆಟ್ಟಿ ನಟನೆಯ “ಸಪ್ತಸಾಗರದಾಚೆ ಎಲ್ಲೋ -ಸೈಡ್ ಬಿ’ ಚಿತ್ರ ಅಕ್ಟೋಬರ್ 20ಕ್ಕೆ ತೆರೆಕಾಣಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ಬಿಡುಗಡೆಯನ್ನು ಮುಂದಕ್ಕೆ ದೂಡಿದ್ದ ಚಿತ್ರತಂಡ ಅ.27ಕ್ಕೆ ಬರುವುದಾಗಿ ಘೋಷಿಸಿಕೊಂಡಿತ್ತು. ಆದರೆ, ಈಗ ಇದರಲ್ಲೂ ಬದಲಾವಣೆಯಾಗಿದೆ. ಚಿತ್ರದ ಬಿಡುಗಡೆಯನ್ನು ಚಿತ್ರತಂಡ ಮತ್ತೆ ಮುಂದಕ್ಕೆ ಹಾಕಿದ್ದು ನವೆಂಬರ್ 17 ಕ್ಕೆ ತೆರೆಕಾಣಲಿದೆ.
ಈ ಬಾರಿಯ ವಿಶೇಷವೆಂದರೆ “ಸಪ್ತಸಾಗರದಾಚೆ ಎಲ್ಲೋ’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಒಟ್ಟಿಗೆ ಬಿಡುಗಡೆಯಾಗುತ್ತಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಏಕಕಾಲಕ್ಕೆ ನ.17ರಂದೇ ತೆರೆಕಾಣಲಿದೆ. ಪ್ಯಾನ್ ಇಂಡಿಯಾ ರಿಲೀಸ್ ತಯಾರಿ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆಯನ್ನು ಮುಂದಕ್ಕೆ ಹಾಕಲಾಗಿದೆ ಎನ್ನಲಾಗಿದೆ.
ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಮೊದಲ ಭಾಗ ಹಿಟ್‌ಲಿಸ್ಟ್ ಸೇರಿದೆ. ಒಂದು ಇಂಟೆನ್ಸ್ ಲವ್‌ಸ್ಟೋರಿಯಜೊತೆಗೆ ಒಂದು ಕರಾಳ ಜಗತ್ತಿನ ಅನಾವರಣವನ್ನು ಮಾಡಲಾಗಿತ್ತು. ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಅವರ ನಟನೆಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿತ್ತು. ಈಗ ಚಿತ್ರದ ಮುಂದುವರೆದ ಭಾಗದ ಮೇಲಿನ ನಿರೀಕ್ಷೆ ಕೂಡಾ ಹೆಚ್ಚಿದೆ. ಈ ಭಾಗದಲ್ಲಿ ಮಾಸ್ ಅಂಶಗಳ ಜೊತೆಗೆ ನಾಯಕನ ಹೊಸ ಲೋಕ ಹಾಗೂ ಹೊಸ ಬದುಕಿನ ಅನಾವರಣ ಆಗಲಿದೆ. ಈ ಭಾಗದಲ್ಲಿ ಚೈತ್ರಾ ಆಚಾರ್ ಪಾತ್ರಕ್ಕೂ ಹೆಚ್ಚಿನ ಮಹತ್ವವಿದೆ ಎನ್ನಲಾಗಿದೆ.
ಇನ್ನು, ಈ ಚಿತ್ರವನ್ನು ರಕ್ಷಿತ್ ಶೆಟ್ಟಿ ತಮ್ಮ ಪರಂವ ಪಿಕ್ಚರ್ಸ್ ಬ್ಯಾನರ್‌ನಡಿ ನಿರ್ಮಿಸಿದ್ದು, ಹೇಮಂತ್ ರಾವ್ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತವಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.