ಅಮೆಜಾನ್ ಪ್ರೈಮ್ ನಲ್ಲಿ ವಿಶ್ವಾದ್ಯಂತ ತೆರೆ:ನಾಗತಿಹಳ್ಳಿ ಸಿನಿಮಾಕ್ಕೆ ಮೆಚ್ಚುಗೆ
ಇಂಗ್ಲೆಂಡಿನಲ್ಲಿ ಜತೆಗೆ ಭಾರತದುದ್ದಗಲಕ್ಕೂ ಚಿತ್ರೀಕರಣಗೊಂಡಿರುವ ಈ ಚಿತ್ರದಲ್ಲಿ ನಾಡಗೀತೆಯೂ ರಾಷ್ಟ್ರಗೀತೆಯೂ ಬೇರೆ ಸ್ವರೂಪದಲ್ಲಿವೆ.
Team Udayavani, Apr 4, 2020, 6:23 PM IST
ಬೆಂಗಳೂರು: ನಾಗತಿಹಳ್ಳಿ ಚಂದ್ರಶೇಖರ್ ಅವರ “ಇಂಡಿಯಾ ವರ್ಸಸ್ ಇಂಗ್ಲೆಂಡ್’ ಚಿತ್ರವು ಅಮೆಜಾನ್ ಪ್ರೈಮ್ ನಲ್ಲಿ ವಿಶ್ವಾದ್ಯಂತ ತೆರೆ ಕಂಡಿದೆ. ಕೊರೊನಾ ದಾಳಿಯಿಂದ ಮನೆಯಲ್ಲಿ ಕುಳಿತಿರುವವರಿಗೆ ಮನರಂಜನೆಯ ಸುಗ್ಗಿ! ಅಸಂಖ್ಯಾತ ಅನಿವಾಸಿ ಕನ್ನಡಿಗರು ಅಮೆರಿಕಾ, ಇಂಗ್ಲೆಂಡ್ ಮುಂತಾದ ದೇಶಗಳಿಂದ ಪ್ರಶಂಸೆಯ ಮಹಾಪೂರವನ್ನೇ ಕಳುಹಿಸುತ್ತಿದ್ದಾರೆ. ಇದೀಗ ಭಾರತದಲ್ಲೂ ಪ್ರದರ್ಶನ ಕಂಡು ಅಪಾರ ಮೆಚ್ಚುಗೆ ಗಳಿಸುತ್ತಿದೆ.
ಬಹುಭಾಗ ಇಂಗ್ಲೆಂಡಿನಲ್ಲಿ ಜತೆಗೆ ಭಾರತದುದ್ದಗಲಕ್ಕೂ ಚಿತ್ರೀಕರಣಗೊಂಡಿರುವ ಈ ಚಿತ್ರದಲ್ಲಿ ನಾಡಗೀತೆಯೂ ರಾಷ್ಟ್ರಗೀತೆಯೂ ಬೇರೆ ಸ್ವರೂಪದಲ್ಲಿವೆ. ಅರ್ಜುನ್ ಜನ್ಯ ಐದು ಹಾಡುಗಳ ಮೂಲಕ ಮನಸೂರೆಗೊಂಡಿದ್ದಾರೆ.
ವಸಿಷ್ಠ ಸಿಂಹ, ಮಾನ್ವಿತಾ, ಪ್ರಕಾಶ್ ಬೆಳವಾಡಿ, ಅನಂತ ನಾಗ್, ಸಾಧು ಕೋಕಿಲಾ, ಸುಮಲತಾ ಅಂಬರೀಷ್ ಅವರನ್ನೊಳಗೊಂಡ ಅದ್ದೂರಿ ತಾರಾಗಣವಿದೆ. ಮನೆಯಲ್ಲೇ ಮನೆಮಂದಿ ಎಲ್ಲಾ ಕುಳಿತು ಮನರಂಜನೆ ಪಡೆಯಲು ನಿಮ್ಮಮನೆ ಬಾಗಿಲಿಗೇ ಬಂದಿದೆ “ಇಂಡಿಯಾ ವರ್ಸಸ್ ಇಂಗ್ಲೆಂಡ್”.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.