“ಯಾನ’ ಮುಂದುವರೆದಿದೆ
Team Udayavani, Oct 23, 2017, 10:58 AM IST
ವಿಜಯಲಕ್ಷ್ಮೀ ಸಿಂಗ್ “ಯಾನ’ ಎಂಬ ಚಿತ್ರವನ್ನು ಶುರು ಮಾಡಿದ್ದು ನೆನಪಿರಬಹುದು. ಕಳೆದ ವರ್ಷ ಈ ಚಿತ್ರ ಪ್ರಾರಂಭವಾಗಿತ್ತು. ಆ ನಂತರ ಯಾವುದೇ ಸುದ್ದಿ ಇರಲಿಲ್ಲ. ಈಗ ಚಿತ್ರವು ಕೊನೆಯ ಹಂತಕ್ಕೆ ಬಂದಿದ್ದು, ಸದ್ಯದಲ್ಲೇ ಚಿತ್ರದ ಪ್ರೋಮೋ ಹಾಡು ಬಿಡುಗಡೆಯಾಗಲಿದೆ.
ಹೌದು, “ಯಾನ’ ಚಿತ್ರದ ಪ್ರೋಮೋ ಹಾಡು ನಾಡಿದ್ದು ಮಂಗಳವಾರ ಬಿಡುಗಡೆಯಾಗಲಿದೆ. ಹಾಡನ್ನು ಬಿಡುಗಡೆ ಮಾಡುತ್ತಿರುವವರು ಸುದೀಪ್. ಈ ಪ್ರೋಮೋ ಸಾಂಗ್ ಬಿಡುಗಡೆಯಾದ ನಂತರ ಕೆಲವೇ ತಿಂಗಳಲ್ಲಿ ಚಿತ್ರ ಸಹ ಬಿಡುಗಡೆಯಾಗುವ ಸಾಧ್ಯತೆ ಇದೆ.
ಅಂದ ಹಾಗೆ, “ಯಾನ’ ಚಿತ್ರದಲ್ಲಿ ಜೈಜಗದೀಶ್ ಮತ್ತು ವಿಜಯಲಕ್ಷ್ಮೀ ಸಿಂಗ್ ತಮ್ಮ ಮಕ್ಕಳಾದ ವೈಭವಿ, ವೈನಿಧಿ ಮತ್ತು ವೈಸಿರಿಯನ್ನು ನಾಯಕಿಯರನ್ನಾಗಿ ಪರಿಚಯಿಸುತ್ತಿದ್ದಾರೆ. ಈ ಮೂವರೂ, “ಕೋತಿಗಳು ಸಾರ್ ಕೋತಿಗಳು’ ಚಿತ್ರದಲ್ಲಿ ರಮೇಶ್ ಅರವಿಂದ್ ಅವರ ಮಕ್ಕಳಾಗಿ ನಟಿಸಿದ್ದರು.
ಈಗ ಮೊದಲ ಬಾರಿಗೆ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಟೀನೇಜ್ ಹುಡುಗಿಯರ ಬದುಕನ್ನು ಬಿಂಬಿಸುವ ಈ ಚಿತ್ರಕ್ಕೆ ವಿಜಯಲಕ್ಷ್ಮೀ ಸಿಂಗ್ ಅವರೇ ಕಥೆ ಮತ್ತು ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಇನ್ನು “ಸಿಂಪಲ್’ ಸುನಿ ಸಂಭಾಷಣೆಗಳನ್ನು ರಚಿಸಿದ್ದಾರೆ.
ಚಿತ್ರಕ್ಕೆ ಕರಂ ಚಾವ್ಲಾ ಛಾಯಾಗ್ರಹಣ ಮಾಡಿದರೆ, ಜೋಶ್ವಾ ಶ್ರೀಧರ್ ಸಂಗೀತ ಸಂಯೋಜಿಸಿದ್ದಾರೆ. ಈ ಚಿತ್ರದ ನಿರ್ಮಾಣದಲ್ಲಿ ವಿಜಯಲಕ್ಷ್ಮೀ ಸಿಂಗ್ ಮತ್ತು ಜೈಜಗದೀಶ್ ಜೊತೆಗೆ ಹರೀಶ್ ಶೇರಿಗಾರ್ ಮತ್ತು ಶರ್ಮಿಳಾ ಶೇರಿಗಾರ್ ಕೈಜೋಡಿಸಿದ್ದಾರೆ.
ಇದಕ್ಕೂ ಮುನ್ನ ಹರೀಶ್ ಮತ್ತು ಶರ್ಮಿಳಾ ಶೇರಿಗಾರ್, ಕೋಡ್ಲು ರಾಮಕೃಷ್ಣ ನಿರ್ದೇಶನದ “ಮಾರ್ಚ್ 22′ ಚಿತ್ರ ನಿರ್ಮಿಸಿದ್ದರು. ಚಿತ್ರ ಕೆಲವು ತಿಂಗಳ ಹಿಂದೆ ಬಿಡುಗಡೆಯಾಗಿತ್ತು. ಈಗ ಈ ಚಿತ್ರದ ನಿರ್ಮಾಣದಲ್ಲೂ ಅವರು ತೊಡಗಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.