ಸಂಕ್ರಾಂತಿಗೆ “ಯಜಮಾನ’ ಗಿಫ್ಟ್
Team Udayavani, Jan 11, 2019, 6:11 AM IST
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಮುಂಬರುವ ಚಿತ್ರ “ಯಜಮಾನ’ ತೆರೆಗೆ ಬರುವ ಸನ್ನಾಹದಲ್ಲಿದೆ. ಸದ್ಯಕ್ಕೆ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳ ಅಂತಿಮ ಹಂತದಲ್ಲಿರುವ “ಯಜಮಾನ’ ಚಿತ್ರದ ಪ್ರಮೋಷನ್ ಕೆಲಸಗಳಿಗೆ ಚಾಲನೆ ನೀಡಲು ಸಿದ್ಧತೆ ನಡೆಸಿರುವ ಚಿತ್ರತಂಡ, ಇದೇ ಸಂಕ್ರಾಂತಿ ಹಬ್ಬದಂದು “ಯಜಮಾನ’ನ ಮೊದಲ ಹಾಡನ್ನು ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆ.
ಈ ಮೂಲಕ ಸಂಕ್ರಾಂತಿ ಹಬ್ಬದ ಸಡಗರದ ನಡುವೆಯೇ “ಯಜಮಾನ’ನ ಪ್ರಮೋಷನ್ ಕೆಲಸಗಳು ಶುರುವಾಗಲಿವೆ. ಕಳೆದ ಡಿಸೆಂಬರ್ ಅಂತ್ಯಕ್ಕೆ “ಯಜಮಾನ’ ಚಿತ್ರದ ಬಹುಭಾಗದ ಚಿತ್ರೀಕರಣ ಮುಗಿಸಿದ್ದ ಚಿತ್ರತಂಡ, ಬಾಕಿಯಿದ್ದ ಹಾಡಿನ ಚಿತ್ರೀಕರಣವನ್ನೂ ಜನವರಿ ಮೊದಲ ವಾರ ಪೂರ್ಣಗೊಳಿಸಿದೆ. ಹೀಗಾಗ ಸಂಕ್ರಾಂತಿ ವೇಳೆಗೆ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದರೆ, ಚಿತ್ರವನ್ನು ಮುಂಬರುವ ಫೆಬ್ರವರಿ ಅಂತ್ಯಕ್ಕೆ ತೆರೆಗೆ ತರಬಹುದು ಎಂಬುದು ಚಿತ್ರತಂಡದ ಲೆಕ್ಕಾಚಾರ.
ಅಂದಹಾಗೆ, “ಯಜಮಾನ’ ದರ್ಶನ್ ಮತ್ತು ವಿ. ಹರಿಕೃಷ್ಣ ಕಾಂಬಿನೇಷನ್‌ನ 25ನೇ ಚಿತ್ರವಾಗಿದ್ದು, ಚಿತ್ರದ ಹಾಡುಗಳು ಹಿಂದೆಂದಿಗಿಂತಲೂ ವಿಭಿನ್ನವಾಗಿರಲಿವೆ ಎಂದು ದರ್ಶನ್ ಮತ್ತು ವಿ. ಹರಿಕೃಷ್ಣ ಇಬ್ಬರೂ ವಿಶ್ವಾಸ ವ್ಯಕ್ತಪಡಿಸಿರುವುದರಿಂದ, ಅಭಿಮಾನಿಗಳಿಗೂ “ಯಜಮಾನ’ನ ಹಾಡುಗಳ ಮೇಲೆ ನಿರೀಕ್ಷೆ, ಕುತೂಹಲ ಹೆಚ್ಚಾಗಿಯೇ ಇದೆ. ಇನ್ನು ಜ. 15ರ ಸಂಕ್ರಾಂತಿಗೆ “ಯಜಮಾನ’ ಚಿತ್ರದ “ಶಿವನಂದಿ…’ ಎಂಬ ಮೊದಲ ಮೊದಲ ಹಾಡು ಬಿಡುಗಡೆಯಾಗಲಿದ್ದು, ಬಹದ್ದೂರ್ ಚೇತನ್ ಸಾಹಿತ್ಯವಿರುವ ಈ ಹಾಡಿಗೆ ವಿ. ಹರಿಕೃಷ್ಣ ಸಂಗೀತವಿದೆ.
ಡಿ-ಬೀಟ್ಸ್ ಯೂ ಟ್ಯೂಬ್ ಚಾನಲ್‌ನಲ್ಲಿ ಈ ಹಾಡು ಬಿಡುಗಡೆಯಾಗಲಿದೆ. ಸಂಕ್ರಾಂತಿ ಬಳಿಕ ಪ್ರತಿ ಎರಡು-ಮೂರು ದಿನಗಳ ಅಂತರದಲ್ಲಿ ಬಾಕಿ ಇರುವ ಹಾಡಿಗಳನ್ನು ಒಂದೊಂದಾಗಿ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆಯಂತೆ ಚಿತ್ರತಂಡ. “ಯಜಮಾನ’ ಚಿತ್ರಕ್ಕೆ ಪಿ. ಕುಮಾರ್ ಮತ್ತು ವಿ. ಹರಿಕೃಷ್ಣ ಅವರ ಜಂಟಿ ನಿರ್ದೇಶನವಿದ್ದು, ಶೈಲಜಾ ನಾಗ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ನಾಯಕ ದರ್ಶನ್ ಅವರಿಗೆ ನಾಯಕಿಯರಾಗಿ ರಶ್ಮಿಕಾ ಮಂದಣ್ಣ ಮತ್ತು ತಾನ್ಯಾ ಹೋಪ್ ಜೋಡಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.