![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 17, 2020, 7:02 AM IST
“ಎಲ್ಲಿಗೆ ಪಯಣ ಯಾವುದೋ ದಾರಿ…” ಎನ್ನುವ ಹಾಡನ್ನು ನೀವೆಲ್ಲ ಕೇಳಿರುತ್ತೀರಿ. ಈ ಜನಪ್ರಿಯ ಚಿತ್ರಗೀತೆಯ ಸಾಲು ಈಗ ಚಿತ್ರವೊಂದರ ಶೀರ್ಷಿಕೆಯಾಗಿ ತೆರೆಮೇಲೆ ಬರುತ್ತಿದೆ. ಕಿರಣ್ ಸೂರ್ಯ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಹಿರಿಯ ನಟ ಕಂ ನಿರ್ದೇಶಕ ಕಾಶಿನಾಥ್ ಪುತ್ರ ಅಭಿಮನ್ಯು ಕಾಶಿನಾಥ್ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ.
ಸ್ಪೂರ್ತಿ ಉಡಿಮನೆ ಚಿತ್ರದ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಬಾಲ ರಾಜವಾಡಿ, ವಿಜಯಶ್ರೀ, ಗಣೇಶ್ ನಾರಾಯಣ್, ರವಿಕುಮಾರ್, ಶೋಭನ್, ಕಿಶೋರ್, ಅಶ್ವಿನಿ ಮುಂತಾದವರು ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದ ಎರಡು ಹಾಡುಗಳಿಗೆ ಗಣೇಶ್ ನಾರಾಯಣ್ ಸಂಗೀತ ಸಂಯೋಜಿಸುತ್ತಿದ್ದಾರೆ.
ಚಿತ್ರಕ್ಕೆ ಗೌತಮ್ ಮನು ಛಾಯಾಗ್ರಹಣ ಹಾಗೂ ರವಿಚಂದ್ರನ್, ಗಣೇಶ್ ಸಂಕಲನ ಕಾರ್ಯವಿದೆ. ಈಗಾಗಲೇ ಚಿತ್ರಕ್ಕೆ ಮಡಿಕೇರಿ ಹಾಗೂ ವಿರಾಜಪೇಟೆ ಸುತ್ತಮುತ್ತ ಸುಮಾರು ನಲವತ್ತು ದಿನಗಳ ಕಾಲ ಈ ಚಿತ್ರ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ ಸದ್ಯಕ್ಕೆ ಚಿತ್ರೀಕರಣಕ್ಕೆ ಬ್ರೇಕ್ ನೀಡಿದೆ.
“ಸುದರ್ಶನ್ ಆರ್ಟ್ಸ್” ಲಾಂಛನದಲ್ಲಿ ನಂದೀಶ್ ಎಂ.ಸಿ ಗೌಡ ಹಾಗೂ ಜತಿನ್ ಜಿ. ಪಟೇಲ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಒಟ್ಟಾರೆ ಕನ್ನಡ ಚಿತ್ರರಂಗದಲ್ಲಿ ಹಿಂದಿನ ಸುಮಧುರ ಹಾಡುಗಳ ಮೊದಲ ಸಾಲು ಸಾಕಷ್ಟು ಚಿತ್ರದ ಶೀರ್ಷಿಕೆಗಳಾಗಿ ಹೊರಬರುತ್ತಿದ್ದು, ಈಗ ಅ ಸಾಲಿಗೆ ಮತ್ತೂಂದು ಚಿತ್ರದ ಹೆಸರು ಸೇರ್ಪಡೆಯಾದಂತಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.