ಟೀಸರ್‌ನಲ್ಲಿ ಎಂಟ್ರಿಕೊಟ್ಟ ಇವನು ‘ಯಾರ್ ಮಗ’?
Team Udayavani, Mar 21, 2021, 12:28 PM IST
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ “ಯಾರ್ ಮಗ?’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಈಗಾಗಲೇ ಅರ್ಧಕ್ಕೂ ಹೆಚ್ಚು ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ ಇತ್ತೀಚೆಗೆ ಚಿತ್ರದ ಮೊದಲ ಟೀಸರ್ ಬಿಡುಗಡೆ ಮಾಡಿದೆ.
ನವನಟ ರಘು ಪಡುಕೋಟೆ ಮೊದಲ ಬಾರಿಗೆ ನಾಯಕನಾಗಿ, ಅಭಿನಯಿಸಿ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಸುಕೃತಾ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಕಾಕ್ರೋಚ್ ಸುಧಿ, ಬಲರಾಜವಾಡಿ, ಅಶ್ವಿನಿ, ತಾರಾ ಅನುರಾಧ, ಕಾರ್ತಿಕ್, ಗಣೇಶ್ ರಾವ್ ಕೇಸರ್ಕರ್ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಇದನ್ನೂ ಓದಿ:ಕಲಬುರಗಿಯಲ್ಲಿ ಪುನೀತ್: ‘ಯುವರತ್ನ’ ಚಿತ್ರ ತಂಡಕ್ಕೆ ಭರ್ಜರಿ ಸ್ವಾಗತ
ಇನ್ನು “ಯಾರ್ ಮಗ?’ ಚಿತ್ರದ ಟೈಟಲ್ ಮತ್ತು ಕಥಾಹಂದರದ ಬಗ್ಗೆ ಮಾತನಾಡುವ ನಾಯಕ ನಟ ರಘು ಪಡುಕೋಟೆ, “ಇದೊಂದು ಕಂಪ್ಲೀಟ್ ಕಮರ್ಷಿಯಲ್ ಎಂಟರ್‌ಟೈನ್ಮೆಂಟ್ ಸಿನಿಮಾ. ಇದರಲ್ಲಿ ಲವ್, ಆ್ಯಕ್ಷನ್, ಮದರ್ ಸೆಂಟಿಮೆಂಟ್ ಹೀಗೆ ಎಲ್ಲ ಅಂಶಗಳೂ ಇದೆ. ಅನಾಥಾಶ್ರಮದಿಂದ ಹೊರಬಂದ ಹುಡುಗನೊಬ್ಬ ಭೂಗತ ಲೋಕಕ್ಕೆ ಎಂಟ್ರಿಯಾಗಿ ಅದರಲ್ಲಿ ಹೇಗೆ ಸಿಲುಕಿಕೊಳ್ಳುತ್ತಾನೆ. ಅದರಿಂದ ಹೇಗೆ ಹೊರಗೆ ಬರುತ್ತಾನೆ ಅನ್ನೋದೇ ಚಿತ್ರದ ಕಥಾಹಂದರ’ ಎಂದರು.
ಇದನ್ನೂ ಓದಿ: ರುಕ್ಮಿಣಿ ವಸಂತ್ ಕಣ್ಣಲ್ಲಿ ಸಪ್ತ ಕನಸು
“ಯಾರ್ ಮಗ?’ ಚಿತ್ರದಲ್ಲಿ ಪ್ರೀತಿ, ಪ್ರೇಮದ ಜೊತೆಗೆ ಈಗಿನ ಹುಡಗರ ಚಟುವಟಿಕೆ, ಡ್ರಗ್ಸ್ ಮಾಫಿಯಾ, ಮಾದಕ ಜಾಲದಲ್ಲಿ ಹುಡುಗರು ಹೇಗೆ ಹಾಳಾಗುತ್ತಾರೆ ಎಂಬ ಅಂಶಗಳಿದ್ದು, ಚಿತ್ರದಲ್ಲಿ ಕೊನೆಗೆ ಒಂದು ಮೆಸೇಜ್ ಇದೆ’ ಎನ್ನುತ್ತದೆ ಚಿತ್ರತಂಡ. “ಪಡುಕೋಟೆ ಪ್ರೊಡಕ್ಷನ್ಸ್’ ಬ್ಯಾನರ್ ಅಡಿಯಲ್ಲಿ ಬಸವರಾಜ್ ಪಡುಕೋಟೆ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.