ಎಲ್ಲರಿಗೂ ಧನ್ಯವಾದ ಹೇಳಿದ ಯಶ್
Team Udayavani, Nov 12, 2018, 11:20 AM IST
ಆರಂಭದಿಂದಲೂ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿರುವ ಯಶ್ ಅಭಿನಯದ “ಕೆಜಿಎಫ್’ ಚಿತ್ರದ ಮೊದಲ ಟ್ರೇಲರ್ ಬಿಡುಗಡೆಯಾಗಿದೆ. ಕಳೆದ ಮೂರು ದಿನಗಳ ಹಿಂದಷ್ಟೇ ಬಿಡುಗಡೆಯಾದ ಟ್ರೇಲರ್‌ಗೆ ಎಲ್ಲೆಡೆಯಿಂದ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. “ಕೆಜಿಎಫ್’ ಚಿತ್ರದ ಟ್ರೇಲರ್‌ನ ವಿಶೇಷವೆಂದರೆ, ಏಕಕಾಲಕ್ಕೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಿ ಜೋರು ಸುದ್ದಿಯಾಗಿರುವುದು.
ಸಾಮಾಜಿಕ ತಾಣಗಳಲ್ಲಂತೂ “ಕೆಜಿಎಫ್’ ಟ್ರೇಲರ್‌ಗೆ ನಿರೀಕ್ಷೆ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಟ್ರೇಲರ್ ಬಿಡುಗಡೆಯಾದ ಒಂದೇ ದಿನದಲ್ಲಿ ಸುಮಾರು 3.5 ಮಿಲಿಯನ್ ವೀಕ್ಷಣೆಯಾಗಿದ್ದಲ್ಲದೆ, ಕನ್ನಡಕ್ಕಿಂತ ಬೇರೆ ಭಾಷೆಯಲ್ಲೇ ಟ್ರೇಲರ್ ಹೆಚ್ಚು ಸದ್ದು ಮಾಡುತ್ತಿರುವುದು ವಿಶೇಷತೆಗಳಲ್ಲೊಂದು. ಇನ್ನೂ ಒಂದು ಖುಷಿಯ ವಿಷಯವೆಂದರೆ, ಯು ಟ್ಯೂಬ…ನಲ್ಲಿ ತೆಲುಗು ಭಾಷೆಯ “ಕೆಜಿಎಫ್’ ಟ್ರೇಲರ್ ಟ್ರೆಂಡಿಂಗ್ ಲಿಸ್ಟ್‌ನಲ್ಲಿದೆ.
ಇವೆಲ್ಲದರ ನಡುವೆ ಅಭಿಮಾನಿಗಳು ಮಾತ್ರವಲ್ಲದೆ ಬಾಲಿವುಡ್‌ನಿಂದ, ಸ್ಯಾಂಡಲ್‌ವುಡ್‌ವರೆಗೆ ಎಲ್ಲಾ ಚಿತ್ರರಂಗದ ಸೆಲೆಬ್ರಿಟಿಗಳು, ಚಿತ್ರೋದ್ಯಮದ ಗಣ್ಯರು “ಕೆಜಿಎಫ್’ ಟ್ರೇಲರ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ ಚಿತ್ರ ನೋಡುವ ಕುತೂಹಲ ಬಗ್ಗೆ ಹೇಳಿಕೊಂಡಿದ್ದಾರೆ. ಇನ್ನು, “ಕೆಜಿಎಫ್’ ಟ್ರೇಲರ್‌ಗೆ ಸಿಕ್ಕ ಪ್ರತಿಕ್ರಿಯೆ ಬಗ್ಗೆ ಸಾಕಷ್ಟು ಸಂತಸದಲ್ಲಿರುವ ಯಶ್, ತಮ್ಮ ಅಭಿಮಾನಿಗಳು ಸೇರಿದಂತೆ, ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗು ಹಿಂದಿ ಭಾಷೆಯ ಜನರಿಗೆ ಹಾಗು ಚಿತ್ರದ ಕುರಿತು ಬೆಂಬಲವಾಗಿ ನಿಲ್ಲುತ್ತಿರುವವರಿಗೆ ಪ್ರೀತಿಯಿಂದ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತಂತೆ ತಮ್ಮ “ಮುಖಪುಟ’ದಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಯಶ್, “ಕೆಜಿಎಫ್’ ಚಿತ್ರದ ಟ್ರೇಲರ್ ವೀಕ್ಷಿಸಿ, ಅದನ್ನು ಸ್ವೀಕರಿಸಿರುವ ರೀತಿ ನೋಡಿ ತುಂಬಾ ಖುಷಿಯಾಗಿದೆ. ಎರಡು ವರ್ಷದಿಂದ ನಾವು ಏನೆಲ್ಲಾ ಕಷ್ಟಪಟ್ಟು ಕೆಲಸ ಮಾಡಿ¨ªೆವೋ ಅದನ್ನ ನಿಮಗೆ ತೋರಿಸಬೇಕು ಅಂತ ಕಾಯುತ್ತಿದ್ದೆವು. ಅದನ್ನ ಟ್ರೇಲರ್ ಮೂಲಕ ತೋರಿಸಿದ್ದೇವೆ. ನೀವು ಅದನ್ನು ಮೆಚ್ಚಿರುವ ರೀತಿ ನೋಡಿ ನನಗೆ ಸಾರ್ಥಕತೆ ಫೀಲ್ ಆಗುತ್ತಿದೆ.
ನೀವು ನೀಡುತ್ತಿರುವ ಬೆಂಬಲದಿಂದ ನಮಗೆ ಇನ್ನಷ್ಟು ಕೆಲಸ ಮಾಡಬೇಕು ಎಂಬ ಹುಮ್ಮಸ್ಸು ಬರುತ್ತಿದೆ. ನಿಮ್ಮೆಲ್ಲರಿಗೂ ಧನ್ಯವಾದಗಳು. ಆದಷ್ಟು ಬೇಗ ಚಿತ್ರವನ್ನು ನಿಮ್ಮ ಮುಂದೆ ತರಲಿದ್ದೇವೆ. ನಿಮ್ಮ ಬೆಂಬಲ, ಸಹಕಾರ ಹೀಗೆ ಇರಲಿ’ ಎಂದು ಅಭಿಮಾನಿಗಳು, ಚಿತ್ರರಂಗದ ಕಲಾವಿದರು, ತಂತ್ರಜ್ಞರು, ನಿರ್ಮಾಪಕರು, ನಿರ್ದೇಶಕರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಸದ್ಯ “ಕೆಜಿಎಫ್’ ಚಿತ್ರದ ಟ್ರೇಲರ್ ವೀಕ್ಷಣೆಯಲ್ಲಿ ಮೊದಲ ಸ್ಥಾನದಲ್ಲಿ ಹಿಂದಿ ಹಾಗೂ ಎರಡನೇ ಸ್ಥಾನದಲ್ಲಿ ತೆಲುಗು, ಮೂರನೇ ಸ್ಥಾನದಲ್ಲಿ ಕನ್ನಡವಿದ್ದು, ಇನ್ನುಳಿದಂತೆ ತಮಿಳು ಹಾಗೂ ಮಲಯಾಳಂ ನಂತರದ ಸ್ಥಾನಗಳಲ್ಲಿದೆ ಎಂಬುದೇ ಈ ಹೊತ್ತಿನ ವಿಶೇಷ. ಬರೀ ಟ್ರೇಲರ್ ನೋಡಿ ಇಷ್ಟೊಂದು ಮೆಚ್ಚುಗೆ ವ್ಯಕ್ತಪಡಿಸಿರುವ ಜನರಿಗೆ, ಸಿನಿಮಾ ನೋಡುವ ಕುತೂಹಲ ಹೆಚ್ಚಿರುವುದಂತೂ ಸುಳ್ಳಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.