ಅಭಿಮಾನಿಗಳ ಸಮ್ಮುಖದಲ್ಲಿ ಯಶ್ ಹುಟ್ಟುಹಬ್ಬ
Team Udayavani, Jan 9, 2018, 11:09 AM IST
ನಟ ಯಶ್ ಅವರು ಸೋಮವಾರ ತಮ್ಮ 32ನೇ ಹುಟ್ಟುಹಬ್ಬವನ್ನು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಂಡರು. ಭಾನುವಾರ ಮಧ್ಯರಾತ್ರಿಯೇ ಯಶ್ ಅವರ ಮನೆಯ ಮುಂದೆ ಅಭಿಮಾನಿಗಳು ಜಮಾಯಿಸಿ, ಅವರಿಗೆ ಜೈ ಹಾಕುವ ಮೂಲಕ ಕೇಕ್ ಕತ್ತರಿಸಿ, ಸಂಭ್ರಮಿಸಿದರು.
ಸೋಮವಾರ ಬೆಳಗ್ಗೆಯಿಂದಲೇ ಯಶ್ ಮನೆಯ ಮುಂದೆ ಸಾಲುಗಟ್ಟಿದ್ದ ಅಭಿಮಾನಿಗಳು, ಯಶ್ ಅವರಿಗೆ ಹಾರ ಹಾಕುವ ಮೂಲಕ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಹೇಳಿದರು. ಅಭಿಮಾನಿಗಳು ಪ್ರೀತಿಯಿಂದ ತಂದಿದ್ದ ಕೇಕ್ ಕತ್ತರಿಸಿದ ಯಶ್, ಅವರ ಜೊತೆ ಫೋಟೋ ತೆಗೆಸಿಕೊಂಡು ಅವರ ಖುಷಿಯಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಯಶ್ ಪತ್ನಿ ರಾಧಿಕಾ ಪಂಡಿತ್ ಕೂಡ ಯಶ್ ಅವರಿಗೆ ಕೇಕ್ ತಿನ್ನಿಸುವ ಮೂಲಕ ಶುಭಕೋರಿದರು. ರಾಜ್ಯದ ಹಲವು ನಗರಗಳಿಂದ ಆಗಮಿಸಿದ್ದು ಯಶ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಯಶ್‌ಗೆ ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ, ಹುಟ್ಟುಹಬ್ಬ ಆಚರಿಸಿ ಸಂತಸಪಟ್ಟರು.
ಇನ್ನು, ಯಶ್ ಹುಟ್ಟುಹಬ್ಬದ ಅಂಗವಾಗಿ, ಹೊಂಬಾಳೆ ಪ್ರೊಡಕ್ಷನ್ಸ್‌ನಲ್ಲಿ ತಯಾರಾಗುತ್ತಿರುವ “ಕೆಜಿಎಫ್’ ಚಿತ್ರದ ಟೀಸರ್ ಕೂಡ ಬಿಡುಗಡೆಯಾಗಿದೆ. ಪ್ರಶಾಂತ್ ನೀಲ್ ನಿರ್ದೇಶನದ “ಕೆಜಿಎಫ್’ ಚಿತ್ರದ ಮೊದಲ ಪೋಸ್ಟರ್ ನೋಡಿ ಕುತೂಹಲಗೊಂಡಿದ್ದ ಅಭಿಮಾನಿಗಳು, ಸೋಮವಾರ ರಿಲೀಸ್ ಆದ ಟೀಸರ್ ನೋಡಿ ಖುಷಿಗೊಂಡಿದ್ದಾರೆ.
ಚಿತ್ರರಂಗದ ಅನೇಕ ನಟ,ನಟಿಯರು, ನಿರ್ದೇಶಕ, ನಿರ್ಮಾಪಕರು ಯಶ್ ಹುಟ್ಟುಹಬ್ಬಕ್ಕೆ ಶುಭಾಶಯ ಹೇಳಿದ್ದಾರೆ. ಮುಂದಿನ ಚಿತ್ರ ನಿರ್ಮಾಪಕರಾದ ಜಯಣ್ಣ, ಭೋಗೇಂದ್ರ ಸೇರಿದಂತೆ ಹಲವು ನಿರ್ಮಾಪಕ, ನಿರ್ದೇಶಕರು ಯಶ್ ಅವರ ಮನೆಗೆ ಹೋಗಿ, ಶುಭಾಶಯ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಸಾಲ ವಾಪಸ್ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
Fraud Case: ಸಾಫ್ಟ್ ವೇರ್ ಕಂಪನಿಗೆ 56 ಲಕ್ಷ ರೂಪಾಯಿ ವಂಚನೆ: 6 ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.