‘ತ್ರಿಬಲ್ ರೈಡ್’ ಮಾಡಲು ಬಂದ ಗೋಲ್ಡನ್ ಸ್ಟಾರ್
Team Udayavani, Sep 20, 2022, 10:13 AM IST
ಇತ್ತೀಚೆಗಷ್ಟೇ “ಗಾಳಿಪಟ-2′ ಸಿನಿಮಾದ ಸಕ್ಸಸ್ ಖುಷಿಯಲ್ಲಿರುವ ನಟ ಗೋಲ್ಡನ್ ಸ್ಟಾರ್ ಗಣೇಶ್ ಸದ್ಯ “ತ್ರಿಬಲ್ ರೈಡಿಂಗ್’ಗೆ ರೆಡಿಯಾಗುತ್ತಿದ್ದಾರೆ. ಹೌದು, ಗಣೇಶ್, ಅದಿತಿ ಪ್ರಭುದೇವಾ, ಮೇಘಾ ಶೆಟ್ಟಿ, ರಚನಾ ಇಂದರ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ “ತ್ರಿಬಲ್ ರೈಡಿಂಗ್’ ಸಿನಿಮಾ, ಬಿಡುಗಡೆಗೆ ತಯಾರಾಗಿದೆ.
ಸದ್ಯ ನಿಧಾನವಾಗಿ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ “ತ್ರಿಬಲ್ ರೈಡಿಂಗ್’ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಿದೆ.
ಇನ್ನು ಬಿಡುಗಡೆಯಾಗಿರುವ “ತ್ರಿಬಲ್ ರೈಡಿಂಗ್’ ಸಿನಿಮಾದ “ಯಟ್ಟಾ ಯಟ್ಟಾ…’ ಎಂಬ ಹಾಡಿಗೆ ಚಂದನ್ ಶೆಟ್ಟಿ ಹಾಗೂ ಮಂಗ್ಲಿ ಧ್ವನಿಯಾಗಿದ್ದು, ಸಾಯಿ ಕಾರ್ತಿಕ್ ಸಂಗೀತ ಸಂಯೋಜನೆ, ಚಂದನ್ ಶೆಟ್ಟಿ ಸಾಹಿತ್ಯದಲ್ಲಿ ಈ ಹಾಡು ಮೂಡಿಬಂದಿದೆ.
ಇದೇ ವೇಳೆ ಮಾತನಾಡಿದ ನಿರ್ದೇಶಕ ಮಹೇಶ್ ಗೌಡ, “ನಾನು ಮುಂಗಾರು ಮಳೆ ಸಮಯದಿಂದ ಗಣೇಶ್ ಅವರನ್ನು ಬಲ್ಲೆ. ಆಗಿನಿಂದಲೂ ಅವರಿಗೊಂದು ಸಿನಿಮಾ ಮಾಡುವ ಆಸೆ ನನಗಿತ್ತು. ಕಾಲ ಈಗ ಕೂಡಿ ಬಂದಿದೆ. “ತ್ರಿಬಲ್ ರೈಡಿಂಗ್’ ಸ್ವಮೇಕ್ ಚಿತ್ರ. ಆ್ಯಕ್ಷನ್, ಥ್ರಿಲ್ಲರ್, ಕಾಮಿಡಿ, ಸೆಂಟಿಮೆಂಟ್ ಹಾಗೂ ಸಸ್ಪೆನ್ಸ್ ಎಲ್ಲವೂ ಈ ಸಿನಿಮಾದಲ್ಲಿದೆ. ಸಿನಿಮಾದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು, ಅದರಲ್ಲಿ ಒಂದು ಹಾಡು ಈಗ ಬಿಡುಗಡೆಯಾಗಿದೆ. ಇನ್ನೂ ಮೂರು ಹಾಡುಗಳು ಒಂದಕ್ಕಿಂತ ಒಂದು ಚೆನ್ನಾಗಿದೆ. ಶೀಘ್ರದಲ್ಲಿಯೇ ಉಳಿದ ಹಾಡುಗಳನ್ನೂ ಬಿಡುಗಡೆ ಮಾಡಲಿದ್ದೇವೆ’ ಎಂದರು.
ಇದನ್ನೂ ಓದಿ:ಟಿಕ್ ಟಾಕ್ ಮತ್ತು ಪಬ್ ಜಿ ಆ್ಯಪ್ ಗಳ ನಿಷೇಧಕ್ಕೆ ಮುಂದಾದ ತಾಲಿಬಾನ್; ಕಾರಣವೇನು ಗೊತ್ತಾ?
ಚಿತ್ರದ ಬಗ್ಗೆ ಮಾತನಾಡಿದ ನಟ ಗಣೇಶ್, “ನಿರ್ದೇಶಕ ಮಹೇಶ್ “ಮುಂಗಾರು ಮಳೆ’ ಸಿನಿಮಾದಲ್ಲಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದರು. ಆಗಲೇ ನನಗೊಂದು ಕಥೆ ಮಾಡುತ್ತೀನಿ ಎಂದಿದ್ದರು.
14 ವರ್ಷಗಳ ನಂತರ ಕಥೆ ಮಾಡಿಕೊಂಡು ಬಂದು ನನಗೊಂದು ಒಳ್ಳೆಯ ಪಾತ್ರ ಕೊಟ್ಟಿದ್ದಾರೆ. ಸಿನಿಮಾದ ಆರಂಭದಿಂದ ಕೊನೆಯವರೆಗೂ ಸಾಕಷ್ಟು ಟ್ವಿಸ್ಟ್, ಟರ್ನ್ಗಳಿರುತ್ತವೆ. ಇದೊಂದು ಪಕ್ಕಾ ಕಾಮಿಡಿ ಸಿನಿಮಾ. ಅದರಲ್ಲೂ ಚಿತ್ರದ ಕೊನೆಯ ಇಪ್ಪತ್ತು ನಿಮಿಷ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತದೆ. “ತ್ರಿಬಲ್ ರೈಡಿಂಗ್’ ಹೋದರೆ ಏನೆಲ್ಲಾ ತೊಂದರೆ ಆಗಬಹುದು ಎನ್ನುವುದನ್ನು ಇದರಲ್ಲಿ ನೋಡಬಹುದು. ಸಿನಿಮಾದಲ್ಲಿ ಮೂವರು ನಾಯಕಿಯರಿದ್ದು, ಎಲ್ಲರ ಅಭಿನಯ ತುಂಬಾ ಚೆನ್ನಾಗಿದೆ’ ಎಂದರು.
ನಾಯಕಿಯರಾದ ಮೇಘಾ ಶೆಟ್ಟಿ, ರಚನಾ ಇಂದರ್ “ತ್ರಿಬಲ್ ರೈಡಿಂಗ್’ ಸಿನಿಮಾದಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ನಿರ್ಮಾಪಕ ರಾಮ್ ಗೋಪಾಲ್ ವೈ. ಎಂ, ಸಂಗೀತ ನಿರ್ದೇಶಕ ಸಾಯಿಕಾರ್ತಿಕ್, ಗಾಯಕ ಚಂದನ್ ಶೆಟ್ಟಿ ಸೇರಿದಂತೆ ಚಿತ್ರತಂಡದ ಸದಸ್ಯರು ಸಿನಿಮಾದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.