‘ಕರಟಕ ದಮನಕ’ ಶಿವಣ್ಣ – ಪ್ರಭುದೇವ ಚಿತ್ರದ ಟೈಟಲ್ ರಿವೀಲ್; ತಲೆಗೆ ಹುಳ ಬಿಟ್ಟ ಭಟ್ರು
Team Udayavani, Sep 3, 2022, 12:17 PM IST
ಬೆಂಗಳೂರು: ಯೋಗರಾಜ್ ಭಟ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಡೈರೆಕ್ಟ್ ಮಾಡುತ್ತಿರುವ ವಿಷಯ ಕೆಲ ದಿನಗಳ ಹಿಂದೆ ರಿವೀಲ್ ಆಗಿತ್ತು. ಈಗ ಚಿತ್ರ ತಂಡದಿಂದ ಮತ್ತೊಂದು ಅಪ್ ಡೇಟ್ ಹೊರ ಬಿದ್ದಿದೆ.
ʼಗಾಳಿಪಟ-2ʼ ಬಳಿಕ ಯೋಗರಾಜ್ ಭಟ್ ಶಿವರಾಜ್ ಕುಮಾರ್ ಅವರಿಗೆ ನಿರ್ದೇಶನ ಮಾಡುತ್ತಿರುವ ಚಿತ್ರದ ಮುಹೂರ್ತ ನೆರವೇರಿತ್ತು. ಕೆಲ ಸಮಯದ ಬಳಿಕ ಚಿತ್ರೀಕರಣವೂ ಸದ್ದಿಲ್ಲದೇ ಆರಂಭಿಸಿದ್ದ ಭಟ್ & ಟೀಮ್ ಈಗ ಚಿತ್ರದ ಟೈಟಲ್ ರಿವೀಲ್ ಮಾಡಿದೆ.
ಶಿವಣ್ಣ ಹಾಗೂ ಪ್ರಭುದೇವ ಇಬ್ಬರು ಚಿತ್ರದಲ್ಲಿ ಜೊತೆಯಾಗಿ ನಟಿಸಲಿದ್ದಾರೆ. ಇಬ್ಬರದ್ದೂ ಚಿತ್ರದಲ್ಲಿ ಪ್ರಧಾನ ಪಾತ್ರಗಳೇ. ಕೆಲ ದಿನಗಳ ಹಿಂದೆ ಶಿವಣ್ಣ – ಪ್ರಭುದೇವ ಶೂಟಿಂಗ್ ಸೆಟ್ ನಲ್ಲಿದ್ದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಚಿತ್ರೀಕರಣ ಆರಂಭಿಸಿದ್ದ ಯೋಗರಾಜ್ ಭಟ್ ಚಿತ್ರದ ಟೈಟಲ್ ಫಿಕ್ಸ್ ಮಾಡಿರಲಿಲ್ಲ. ಈಗ ಚಿತ್ರದ ಟೈಟಲ್ ರಿವೀಲ್ ಮಾಡಿದ್ದು, ‘ಕರಟಕ ದಮನಕ’ ಎಂದು ಭಿನ್ನವಾದ ಶೀರ್ಷಿಕೆಯನ್ನಿಟ್ಟು ಪ್ರೇಕ್ಷಕರ ತಲೆಗೆ ಕುತೂಹಲದ ಹುಳು ಬಿಟ್ಟಿದ್ದಾರೆ ಯೋಗರಾಜ್ ಭಟ್.
ರಾಕ್ ಲೈನ್ ಪ್ರೂಡಕ್ಷನ್ಸ್ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.ಚಿತ್ರದ ನಾಯಕಿ ಹಾಗೂ ಇತರ ಪಾತ್ರ ವರ್ಗದ ಬಗ್ಗೆ ಇನ್ನಷ್ಟೇ ಮಾಹಿತಿ ಹೊರ ಬೀಳಬೇಕಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್ ಸಿಂಗ್
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.