Ekka: ಯುವ ರಾಜಕುಮಾರ್ ಹೊಸ ಸಿನಿಮಾ ʼಎಕ್ಕʼ ಮುಹೂರ್ತ
Team Udayavani, Nov 29, 2024, 3:49 PM IST
ಯುವ ರಾಜಕುಮಾರ್ ಅವರ ಹೊಸ ಸಿನಿಮಾ “ಎಕ್ಕ’ ಕೆಲ ದಿನಗಳ ಹಿಂದೆ ಘೋಷಣೆಯಾಗಿತ್ತು. ಈಗ ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ಮುಗಿದು, ಶೂಟಿಂಗ್ ಆರಂಭವಾಗಿದೆ. ಇತ್ತೀಚೆಗೆ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆಯಿತು.
ಚಿತ್ರದ ಮೊದಲ ಶಾಟ್‌ನ್ನು ಡಾಲಿ ಧನಂಜಯ್ ನಿರ್ದೇಶನ ಮಾಡಿದರು. ಪಿಆರ್‌ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್ ಹಾಗೂ ಕೆಆರ್‌ಜಿ ಸ್ಟುಡಿಯೋಸ್ ಸಹಯೋಗದಲ್ಲಿ ಮೂಡಿಬರುತ್ತಿರುವ ಎಕ್ಕ ಚಿತ್ರಕ್ಕೆ ರೋಹಿತ್ ಪದಕಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ಈ ಸಂದರ್ಭದಲ್ಲಿ ರೋಹಿತ್ ಮಾತನಾಡಿ, “ಎಕ್ಕ ಒಬ್ಬ ಯುವಕನ ಕಥೆ ಹೇಳುತ್ತದೆ. ಒಬ್ಬ ಮನುಷ್ಯ ಭೂಗತ ಲೋಕಕ್ಕೆ ತುತ್ತಾದಾಗ, ಆತನಿಗೆ ಆಗುವ ಅನುಭವಗಳನ್ನು ಇಲ್ಲಿ ಹೇಳಲಾಗಿದೆ. ಕಾಶ್ಮೀರ, ಬೆಂಗಳೂರು, ಮೈಸೂರು, ದೆಹಲಿ, ಕೋಲ್ಕತ್ತಾ, ಮುಂಬೈ ಸೇರಿ ಹಲವೆಡೆ ಚಿತ್ರೀಕರಣ ನಡೆಸಲು ಯೋಜಿಸಲಾಗಿದೆ. ಜನರ ಮೇಲೆ ಆಳವಾದ ಭಾವನಾತ್ಮಕ ಪ್ರಭಾವ ಬೀರುವ ಈ ಚಿತ್ರವನ್ನು ನಿರ್ದೇಶಿಸುತ್ತಿರುವುದು ನನಗೆ ಹೆಮ್ಮೆಯ ಸಂಗತಿ’ ಎಂದರು.
ಚಿತ್ರದ ನಾಯಕ ನಟ ಯುವ ರಾಜಕುಮಾರ್ “ತಾಯಿ ಹಾಗೂ ಅಪ್ಪು ಚಿಕ್ಕಪ್ಪನ ಆಶೀರ್ವಾದದೊಂದಿಗೆ ಎಕ್ಕ ಚಿತ್ರ ಆರಂಭಿಸಿದ್ದೇವೆ. ಮೂರು ಹೆಸರಾಂತ ನಿರ್ಮಾಣ ಸಂಸ್ಥೆಗಳು, ರೋಹಿತ್ ಪದಕಿ ಅವರೊಡನೆ ಕೆಲಸ ಮಾಡುತ್ತಿರುವುದು ಖುಷಿಯ ವಿಚಾರ’ ಎಂದರು.
ಎಕ್ಕ ಸಿನಿಮಾಗೆ ಸಂಪದಾ ನಾಯಕ ನಟಿ, ಉಳಿದಂತೆ ಅತುಲ್ ಕುಲಕರ್ಣಿ, ಶೃತಿ ಕೃಷ್ಣ, ರಾಹುಲ್ ದೇವ್ ಶೆಟ್ಟಿ ಮತ್ತಿತರರು ನಟಿಸಲಿದ್ದಾರೆ. ರೋಹಿತ್ ಪದಕಿ ಹಾಗೂ ವಿಕ್ರಮ್ ಹತ್ವಾರ್ ಚಿತ್ರಕಥೆ ಬರೆದಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ, ವಿ. ನಾಗೇಂದ್ರ ಪ್ರಸಾದ್, ಡಾಲಿ ಧನಂಜಯ್, ನಾಗಾರ್ಜುನ ಶರ್ಮ ಅವರ ಸಾಹಿತ್ಯ, ಸತ್ಯ ಹೆಗ್ಡೆ ಛಾಯಾಗ್ರಹಣ, ದೀಪು ಎಸ್. ಕುಮಾರ್ ಅವರ ಸಂಕಲನ ಚಿತ್ರಕ್ಕಿದೆ. 2025 ಜೂನ್ 6ರಂದು ಎಕ್ಕ ಸಿನಿಮಾ ತೆರೆಗೆ ಬರುವುದಾಗಿ ಚಿತ್ರತಂಡ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.