ನನ್ನ ಚಿಕ್ಕಪ್ಪನ ಧ್ವನಿ ಎಂದಿಗೂ ಸತ್ಯದ ಪರವೇ: ಯುವರಾಜ್ ಖಡಕ್ ಪತ್ರ
Team Udayavani, Dec 23, 2022, 10:03 AM IST
ಹೊಸಪೇಟೆಯಲ್ಲಿ ದರ್ಶನ್ ಮೇಲೆ ಕಿಡಿಗೇಡಿಯೊಬ್ಬ ಚಪ್ಪಲಿ ಎಸೆದ ಘಟನೆ ಕುರಿತಾಗಿ ಸೋಶಿಯಲ್ ಮೀಡಿಯಾ ದಲ್ಲಿ ವಾದ-ವಿವಾದ ನಡೆಯುತ್ತಲೇ ಇದೆ. ಈ ನಡುವೆಯೇ ಒಂದಷ್ಟು ಮಂದಿ ರಾಜ್ ಕುಟುಂಬ, ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಎಳೆದು ತಂದು, ಕಾಮೆಂಟ್ ಮಾಡುತ್ತಿದ್ದಾರೆ. ಈಗ ರಾಘವೇಂದ್ರ ರಾಜ್‌ಕುಮಾರ್ ಪುತ್ರ ಯುವ ರಾಜ್‌ಕುಮಾರ್ ಪತ್ರವೊಂದನ್ನು ಬರೆದು ಟ್ವೀಟರ್‌ನಲ್ಲಿ ಹಾಕಿ ದ್ದಾರೆ. ಅವರ ಪತ್ರ ಹೀಗಿದೆ;
ನಡೆಯುತ್ತಿರುವ ಘಟನೆಗಳ ಬಗ್ಗೆ ಮಾತನಾಡಲು ನಾನು ತುಂಬಾ ಚಿಕ್ಕವನು. ಆದ್ರೆ, ತುಂಬಾ ಹೆಮ್ಮೆಯಿಂದ ಒಂದು ವಿಷಯ ಹೇಳಬೇಕಂದ್ರೆ.. ನಮ್ಮ ಕುಟುಂಬದ ಅಭಿಮಾನಿಗಳು ನಮ್ಮ ತಾತನವರ ಕಾಲದಿಂದ, ಇವತ್ತಿನವರಿಗೂ ಕನ್ನಡ ಚಿತ್ರರಂಗದ ಪ್ರತಿ ಕಲಾವಿದರಿಗೂ ಬೆಂಬಲವಾಗಿ ನಿಂತಿದ್ದಾರೆ. ಎಲ್ಲಾ ಸಂದರ್ಭದಲ್ಲೂ ಸಭ್ಯತೆ ಮತ್ತು ಘನತೆಯಿಂದಲೇ ನಡೆದುಕೊಂಡಿದ್ದಾರೆ. ಪ್ರತಿಯೊಬ್ಬರನ್ನು ಗೌರವದಿಂದ ಕಾಣುವ, ಪ್ರೀತಿ ವಿಶ್ವಾಸವನ್ನು ಹಂಚುವ ಸಂಸ್ಕೃತಿಯುಳ್ಳ ಅಭಿಮಾನಿಗಳೇ ದೇವರು. ಆದರೆ, ಗೌರವ ಯಾವಾಗಲೂ ಪರಸ್ಪರ ಅಲ್ವಾ..? ಅಪ್ಪು ಚಿಕ್ಕಪ್ಪನ ನಡವಳಿಕೆ, ಸಾಮಾಜಿಕ ಪ್ರಜ್ಞೆ, ಮಹಿಳೆಯರನ್ನು ಗೌರವಿಸುವುದು, ಎಲ್ಲರನ್ನೂ ಪ್ರೀತಿಸುವ ಅವರ ವ್ಯಕ್ತಿತ್ವದ ಬಗ್ಗೆ ಪ್ರತಿಯೊಬ್ಬರಿಗೂ ಚೆನ್ನಾಗಿಯೇ ತಿಳಿದಿದೆ. ಅವರ ವ್ಯಕ್ತಿತ್ವ ಎಂದೆಂದಿಗೂ ಎಲ್ಲರಿಗೂ ಮಾದರಿಯಾಗಿ ಇರುತ್ತದೆ. ಅವರ ಬಗ್ಗೆ ಅಗೌರವದಿಂದ ಅವಹೇಳನಕಾರಿಯಾಗಿ ಮಾತನಾಡಿ ಅವರ ಅಭಿಮಾನಿಗಳನ್ನು ಕೆಣಕಿದರೆ, ಅವರ ಭಾವನೆಗಳನ್ನು ನೋಯಿಸಿದರೆ, ಅಭಿಮಾನಿಗಳು ನಿರ್ದಿಷ್ಟ ರೀತಿಯಲ್ಲಿ ಪ್ರತಿಕ್ರಿಯಿಸುವುದು “ಬಹಿರಂಗವಾಗಿಯೇ’ ವಿನಃ ನಡೆಯುವ ಪ್ರತಿಯೊಂದು ಘಟನೆಗೂ ಅವರೇ ಕಾರಣ ಕರ್ತರು ಆಗೋದಿಲ್ಲ. ನಡೆದಿರುವ ಕೃತ್ಯ ಖಂಡನೀಯ. ಯಾರೋ ಮಾಡಿದ ತಪ್ಪನ್ನು ಮತ್ತೂಬ್ಬರ ಮೇಲೆ ಹಾಕುವುದರಿಂದ ಸುಳ್ಳು ಸತ್ಯವಾಗುವುದಿಲ್ಲ. ಪೊಲೀಸ್ ತನಿಖೆ ನಡೆಯುತ್ತಿದೆ, ತಪ್ಪಿತಸ್ಥ ಯಾರೇ ಆಗಿದ್ದರೂ ಅವರಿಗೆ ಶಿಕ್ಷೆ ಖಂಡಿತ ಆಗುತ್ತದೆ. ಕಾಣದ ಕೈಗಳು ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರೂ.. ಕಾಣುವ ಬುದ್ಧಿ ನಮ್ಮದಾಗಿರಲಿ.. ನನ್ನ ಚಿಕ್ಕಪ್ಪನ ಧ್ವನಿ ಎಂದಿಗೂ ಸತ್ಯದ ಪರವೇ, ಅವರ ಧ್ವನಿ ನಮ್ಮೆಲ್ಲರ ಶಕ್ತಿ. ಗುರುರಾಯರ ಆಶೀರ್ವಾದ ಎಲ್ಲರ ಮೇಲೆ ಸದಾ ಸಂಪೂರ್ಣವಾಗಿ ಇರಲಿ…ಜೈ ಹಿಂದ್ ಜೈ ಕರ್ನಾಟಕ ಮಾತೆ..’
ಸದ್ಯ ಯುವರಾಜ್‌ಕುಮಾರ್ ಬರೆದಿರುವ ಪತ್ರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನಟ ವಿಜಯ್ ಮನವಿ: ನಟ ದುನಿಯಾ ವಿಜಯ್ ಕೂಡಾ ರಾಜ್ ಕುಟುಂಬವನ್ನು ಗುರಿಯನ್ನಾಗಿಸಿ ಕೆಲವರು ಮಾಡುತ್ತಿರುವ ಕಾಮೆಂಟ್ ಬಗ್ಗೆ ಬೇಸರ ವ್ಯಕ್ತಪಡಿಸಿ ಪತ್ರವೊಂದನ್ನು ಬರೆದಿದ್ದಾರೆ. “ನಾನು ದರ್ಶನ್ ಅವರಲ್ಲಿ ಕೇಳಿಕೊಳ್ಳುವುದು ಒಂದೇ ಮಾತು…. ಅಂತಹ ಪರಿಸ್ಥಿತಿಯಲ್ಲೂ “ಪರ್ವಾಗಿಲ್ಲ ಬಿಡು ಚಿನ್ನ’ ಎಂಬ ಸಹನೆಯ ಮಾತಾಡಿ ಹೃದಯವನ್ನೇ ಗೆದ್ದಿದ್ದೀರಿ. ಇನ್ನೊಂದು ಮಾತು ನಿಮ್ಮನ್ನು ಇಷ್ಟಪಡುವ ಮತ್ತು ನಿಮ್ಮ ಮಾತನ್ನು ಎಂದೂ ದಾಟದ ನಿಮ್ಮ ಅಭಿಮಾನಿಗಳಿಗೆ ಹೇಳಿದರೆ ಎಲ್ಲವೂ ಸರಿಹೋಗುತ್ತದೆ..’ ಎಂದು ಪತ್ರದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.