ಅಂಜನಾದ್ರಿಗೆ ಡಾ|ರಾಜ್ ಮೊಮ್ಮಗ ಯುವರಾಜ್ ಕುಮಾರ್ ಭೇಟಿ
ಪುನೀತ್ ನೆನದು ಭಾವುಕರಾದ ಕುಟುಂಬ ಸದಸ್ಯರು
Team Udayavani, Apr 17, 2022, 12:42 PM IST
ಗಂಗಾವತಿ: ಕಿಷ್ಕಿಂದಾ ಅಂಜನಾದ್ರಿಗೆ ಡಾ|ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ ಯುವರಾಜ್ ಕುಮಾರ್ ಪತ್ನಿ ಮತ್ತು ಕುಟುಂಬ ಸದಸ್ಯರು ಸಮೇತ ರವಿವಾರ ಭೇಟಿ ನೀಡಿ ಶ್ರೀಆಂಜನೇಯಸ್ವಾಮಿ ದರ್ಶನ ಪಡೆದರು. ದೇವಾಲಯ ಸಮಿತಿಯಿಂದ ಯುವರಾಜ್ ಕುಮಾರ್ ಹಾಗೂ ಪತ್ನಿಯನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಯುವರಾಜ್ ಕುಮಾರ್ ತಮ್ಮ ಚಿಕ್ಕಪ್ಪ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ನೆನದು ಭಾವುಕರಾದರು. ಈ ಭಾಗದಲ್ಲಿ ಪುನೀತ್ ರಾಜ್ ಕುಮಾರ್ ಅವರು ಜನರ ಪ್ರೀತಿ ಗಳಿಸಿದ್ದಾರೆ. ಇಲ್ಲಿ ರಣವಿಕ್ರಮ, ಜೇಮ್ಸ್ ಸೇರಿ ಅನೇಕ ಚಿತ್ರಗಳು ಹಂಪಿ, ಅಂಜನಾದ್ರಿ, ಜಿಂದಾಲ್, ರಾಯಚೂರು, ಬಾಗಲಕೋಟೆ ಭಾಗದಲ್ಲಿ ಚಿತ್ರೀಕರಣವಾಗಿದ್ದು ಈ ಸಂದರ್ಭದಲ್ಲಿ ಅನೇಕ ಸಾಮಾಜಿಕ ಕಾರ್ಯ ಮಾಡಿದ್ದಾರೆ. ಅಂಜನಾದ್ರಿ ಎಂದರೆ ಪುನೀತ್ ಅವರಿಗೆ ಇಷ್ಟವಾದ ಪ್ರದೇಶ. ಕುಟುಂಬದ ಯಾವುದೇ ಕಾರ್ಯಕ್ರಮವಾದರೂ ಅಂಜನಾದ್ರಿ ಬಗ್ಗೆ ಅವರು ಮಾತನಾಡುತ್ತಿದ್ದರು. ಆದ್ದರಿಂದ ಅಪ್ಪ ಅಂಜನಾದ್ರಿಗೆ ಹೋಗಿ ಬರುವಂತೆ ಹೇಳಿದ್ದರಿಂದ ತಾವು ಬಂದಿದ್ದು ಈ ಕ್ಷೇತ್ರ ಶಕ್ತಿಯುತವಾಗಿದೆ. ಪ್ರಕೃತಿ ಸೌಂದರ್ಯದಿಂದ ಕೂಡಿದೆ. ಅಭಿವೃದ್ಧಿಯ ಹೆಸರಿನಲ್ಲಿ ಪ್ರಕೃತಿ ಸೌಂದರ್ಯ ಹಾಳು ಮಾಡದೇ ಉಳಿಸಿಕೊಂಡು ಮೂಲಸೌಕರ್ಯ ಕಲ್ಪಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ, ಸಿಪಿಐ ಉದಯರವಿ ಸೇರಿ ಅನೇಕರಿದ್ದರು.
ಇದನ್ನೂ ಓದಿ:ಅಯೋಧ್ಯೆಯಂತೆ ಅಂಜನಾದ್ರಿ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ: ಸಂಸದ ಪ್ರತಾಪ್ ಸಿಂಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.