ಏಪ್ರಿಲ್ 1ಕ್ಕೆ ಯುವರತ್ನ ರಿಲೀಸ್
ಅಧಿಕೃತವಾಗಿ ಡೇಟ್ ಅನೌನ್ಸ್ ಮಾಡಿದ ವರ್ಷದ ಮೊದಲ ಸ್ಟಾರ್ ಸಿನಿಮಾ
Team Udayavani, Jan 2, 2021, 12:43 PM IST
ಪವರ್ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಹೊಸಚಿತ್ರ “ಯುವರತ್ನ’ದ ಬಿಡುಗಡೆಗೆ ಅಂತೂ ಮುಹೂರ್ತ ನಿಗಧಿಯಾಗಿದೆ.
“ಯುವರತ್ನ’ ಚಿತ್ರದ ಬಿಡುಗಡೆ ಯಾವಾಗ ಎಂದು ಕಾದು ಕುಳಿತಿದ್ದ ಅಪ್ಪು ಅಭಿಮಾನಿಗಳಿಗೆ ಚಿತ್ರತಂಡ ವರ್ಷದ ಮೊದಲ ದಿನವೇ ಗುಡ್ ನ್ಯೂಸ್ ಕೊಟ್ಟಿದೆ. ಹೌದು, “ಯುವರತ್ನ’ ಚಿತ್ರವನ್ನು ಇದೇ ಏಪ್ರಿಲ್ 1 ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. ನಟ ಪುನೀತ್ ರಾಜಕುಮಾರ್, ನಿರ್ದೇಶಕ ಸಂತೋಷ್ ಆನಂದರಾಮ್ ಟ್ವಿಟ್ಟರ್ನಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಅಂದಹಾಗೆ, ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ “ಯುವರತ್ನ’ ಚಿತ್ರವನ್ನು ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.
ಇದನ್ನೂ ಓದಿ: ಬಾ ಗುರು ಸಿನಿಮಾ ನೋಡೋಣ… : ಬೇವು ತಿಂದಾಯ್ತು ಬೆಲ್ಲ ಸವಿಯುವ ಸಮಯ
“ಯುವರತ್ನ’ ಚಿತ್ರದಲ್ಲಿ ಪುನೀತ್ ರಾಜಕುಮಾರ್ಗೆ ಸಯೇಷಾ ಸೈಗಲ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. “ಯುವರತ್ನ’ ಚಿತ್ರದ ಬಿಡುಗಡೆಯ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿದ್ದರೂ, ಇಲ್ಲಿಯವರೆಗೆ ಚಿತ್ರತಂಡ ಮಾತ್ರ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿರಲಿಲ್ಲ. ಆದರೆ ಕಳೆದ ಒಂದು ತಿಂಗಳಿನಿಂದ ಚಿತ್ರದ ಟೀಸರ್, ಮತ್ತು ಹಾಡುಗಳನ್ನು ಬಿಡುಗಡೆಗೊಳಿಸಿ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ “ಯುವರತ್ನ’ ಚಿತ್ರತಂಡ, ಈಗ “ಯುವರತ್ನ’ ಚಿತ್ರದ ರಿಲೀಸ್ ಡೇಟ್ ಅನ್ನು ಅಧಿಕೃತವಾಗಿ ಅನೌನ್ಸ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ
Chowkidar Movie: ಶೂಟಿಂಗ್ ಮುಗಿಸಿದ ಚೌಕಿದಾರ್
KD Movie: ಪ್ರೇಮ್ ಕೆಡಿಗೆ ಅಜಯ್ ದೇವಗನ್ ಸಾಥ್; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.