ಫೆಬ್ರವರಿ 1ರಿಂದ ಸಂಪೂರ್ಣವಾಗಿ ತೆರೆಯಲಿವೆ ಚಿತ್ರಮಂದಿರಗಳು
Team Udayavani, Jan 31, 2021, 8:35 PM IST
ನವದೆಹಲಿ: ದೇಶದಲ್ಲಿನ ಚಿತ್ರಮಂದಿರಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸಿದ್ದು, ಈ ಮಾರ್ಗಸೂಚಿ ಅನ್ವಯ ಮುಂಬರುವ ಫೆಬ್ರವರಿ 1 ರಿಂದ ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರು ಸಿನಿಮಾ ನೊಡಲು ಅವಕಾಶ ಕಲ್ಪಿಸಿದೆ.
ಕೇಂದ್ರ ಗೃಹ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ಸೂಕ್ತ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಿನಿಮಾ ಪ್ರದರ್ಶನ ಮಾಡುವಂತೆ ತಿಳಿಸಿದ್ದು, ಕಂಟೈನ್ ಮೆಂಟ್ ವಲಯಗಳಲ್ಲಿ ಮಾತ್ರ ಹಿಂದೆ ಇದ್ದ ನಿಯಮಗಳೇ ಮುಂದುವರೆಯಲಿದೆ ಎಂದಿದೆ.
ಇದನ್ನೂ ಓದಿ: “ಹಾರ್ಮ್ ಫುಲ್ ಕಂಟೆಂಟ್ ಗಳನ್ನು ನಿಯಂತ್ರಿಸಲು ಹೊಸ ತಂತ್ರ” : ಫೇಸ್ ಬುಕ್
ಚಿತ್ರಮಂದಿರಗಳಲ್ಲಿ ಮಾಸ್ಕ್ ಬಳಕೆ, ತಾಪಮಾನ ಪರೀಕ್ಷೆ, ಸಾಮಾಜಿಕ ಅಂತರಗಳನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದ್ದು, ಇದರ ಜೊತೆಗೆ ಸ್ಯಾನಿಟೈಸರ್ ಬಳಕೆ ಹಾಗೂ ಡಿಜಿಟಲ್ ಪೇಮೆಂಟ್, ವ್ಯವಸ್ಥೆಗಳನ್ನೂ ಕೂಡಾ ಕಡ್ಡಾಯವಾಗಿ ಪಾಲಿಸುವಂತೆ ಮತ್ತು ಆನ್ ಲೈನ್ ಮೂಲಕವೇ ಸೀಟು ಕಾಯ್ದಿರಿಸುವಂತೆ ಸೂಚನೆ ಹೊರಡಿಸಲಾಗಿದೆ.
ಇದನ್ನೂ ಓದಿ:ಸಮಾಜಘಾತುಕ ಕೃತ್ಯದಲ್ಲಿ ತೊಡಗಿದರೆ ನಿರ್ದಾಕ್ಷಿಣ್ಯ ಕ್ರಮ: ಎನ್. ಶಶಿಕುಮಾರ್ ಖಡಕ್ ಎಚ್ಚರಿಕೆ
ಕೋವಿಡ್ ಆರಂಭಗೊಂಡ ಬಳಿಕ ಸಂಪೂರ್ಣ ಬಂದ್ ಆಗಿದ್ದ ಚಿತ್ರಮಂದಿರಗಳಿಗೆ ಕಳೆದ ಅಕ್ಟೋಬರ್ ನಲ್ಲಿ ಶೇ. 50ರಷ್ಟು ಜನರನ್ನು ಒಳಗೊಂಡಂತೆ ಸಿನಿಮಾ ಪ್ರದರ್ಶನ ಮಾಡಲು ಅವಕಾಶ ಒದಗಿಸಲಾಗಿತ್ತು. ಕೆಲ ದಿನಗಳ ಹಿಂದೆ ಚಿತ್ರಮಂದಿರಗಳಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದು ಕೇಂದ್ರ ಗೃಹಸಚಿವಾಲಯ ತಿಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.