ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ
Team Udayavani, Nov 30, 2024, 12:59 PM IST
ಮುಂಬಯಿ: ಮೊಬೈಲ್ ಆ್ಯಪ್ ಮೂಲಕ ಅಶ್ಲೀಲ ಚಿತ್ರಗಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸು ಅಕ್ರಮ ವರ್ಗಾವಣೆ ಕೇಸಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಶುಕ್ರವಾರ(ನ.29) ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು ಇದರ ಬೆನ್ನಲ್ಲೇ ರಾಜ್ ಕುಂದ್ರಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಶನಿವಾರ ಬೆಳಿಗ್ಗೆ ತಮ್ಮ ಇನ್ಸ್ಟಾಗ್ರಾಮ್ ಸ್ಟೋರೀಸ್ಗೆ ರಾಜ್ ಕುಂದ್ರಾ ಅವರು ಪೋಸ್ಟ್ ಹಾಕಿದ್ದು ಅದರಲ್ಲಿ ನನ್ನ ಮೇಲಿರುವ ಆರೋಪಗಳು ಶುದ್ಧ ಸುಳ್ಳು ಒಂದಲ್ಲಾ ಒಂದು ದಿನ ಸತ್ಯ ಹೊರಗೆ ಬಂದೇ ಬರುತ್ತದೆ ಆದರೆ ಸಂಬಂಧವಿಲ್ಲದ ವಿಚಾರದಲ್ಲಿ ನನ್ನ ಹೆಂಡತಿಯ ಹೆಸರನ್ನು ಪದೇ ಪದೇ ಎಳೆದು ತರಬೇಡಿ ಎಂದು ಹೇಳಿದ್ದಾರೆ. ನಾನು ಎಲ್ಲ ರೀತಿಯ ತನಿಖೆಗೂ ಸಹಕಾರ ನೀಡುತ್ತಿದ್ದೇನೆ ಆದರೆ ಮಾಧ್ಯಮಗಳು ನನ್ನ ಪತ್ನಿಯ ಹೆಸರನ್ನು ಎಳೆದು ತರುತ್ತಿವೆ ಎಂದು ಆರೋಪಿಸಿದ್ದಾರೆ. ನನ್ನ ಹೇಳಿಕೆ ಯಾರಿಗೆ ಅನ್ವಯವಾಗುತ್ತದೆ ಎಂದು ಸಂಬಂಧಪಟ್ಟವರೇ ಅರಿತುಕೊಳ್ಳಲಿ ಎಂದು ಹೇಳಿದ್ದಾರೆ.
ಅಷ್ಟು ಮಾತ್ರವಲ್ಲದೆ ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ತನಿಖೆಗೆ ನಾನು ಸಹಕಾರ ನೀಡುತ್ತಿದ್ದೇನೆ ಎಲ್ಲೂ ತಲೆಮರೆಸಿಕೊಂಡಿಲ್ಲ ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂಬುದು ನನಗೆ ಗೊತ್ತಿದೆ ಆದರೆ ಕೊನೆಗೆ ಸತ್ಯ ಹೊರಗೆ ಬರಲೇ ಬೇಕು ಎಂದು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamilnadu: ಫೆಂಗಲ್ ಚಂಡಮಾರುತದ ಅಬ್ಬರ-ಚೆನ್ನೈ ವಿಮಾನ ನಿಲ್ದಾಣ ಬಂದ್, ರೆಡ್ ಅಲರ್ಟ್
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Maharashtra; ಗೊಂಡಿಯಾ ಬಸ್ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.