ಬಾಲಿವುಡ್ ನಟಿ ಮಲೈಕಾ ಅರೋರಾ ಕಾರು ಅಪಘಾತ: ಆಸ್ಪತ್ರೆಗೆ ದಾಖಲಾದ ನಟಿ
Team Udayavani, Apr 3, 2022, 9:25 AM IST
ಮುಂಬೈ: ಹೆಸರಾಂತ ಬಾಲಿವುಡ್ ನಟಿ ಮಲೈಕಾ ಅರೋರಾ ಶನಿವಾರ ಮಧ್ಯಾಹ್ನ ಪುಣೆಯಲ್ಲಿ ನಡೆದ ಫ್ಯಾಷನ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಟಿಯ ಹಣೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ನವಿ ಮುಂಬೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
“ನಟಿ ಮಲೈಕಾ ಅವರ ಹಣೆಯ ಮೇಲೆ ಸಣ್ಣ ಗಾಯಗಳಾಗಿವೆ. ಸಿಟಿ ಸ್ಕ್ಯಾನ್ ನಡೆಸಲಾಗಿದ್ದು, ಪ್ರಸ್ತುತ ಅವರು ಆರೋಗ್ಯವಾಗಿದ್ದಾರೆ. ಅವರನ್ನು ರಾತ್ರಿ ನಿಗಾದಲ್ಲಿ ಇರಿಸಲಾಗುತ್ತದೆ ಮತ್ತು ರವಿವಾರ ಬೆಳಿಗ್ಗೆ ಡಿಸ್ಚಾರ್ಜ್ ಮಾಡಲಾಗುತ್ತದೆ” ಎಂದು ಅಪೋಲೋ ಆಸ್ಪತ್ರೆ ಶನಿವಾರ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಭೂಮಿಗೆ ಪ್ರವೇಶಿಸಿದ ಚೀನಿ ರಾಕೆಟ್; ಮಹಾರಾಷ್ಟ್ರದಲ್ಲಿ ಉಲ್ಕಾಪಾತದಂತೆ ಗೋಚರ: ವಿಡಿಯೋ ನೋಡಿ:
“ಮಲೈಕಾ ಆಸ್ಪತ್ರೆಯಲ್ಲಿದ್ದಾರೆ. ಆರೋಗ್ಯ ಸ್ಥಿರವಾಗಿದ್ದಾರೆ” ಎಂದು ಸಹೋದರಿ ಅಮೃತಾ ಅರೋರಾ ತಿಳಿಸಿದ್ದಾರೆ.
Actor Malaika Arora received minor injuries after her car met with an accident near Khalapur Toll Plaza in Mumbai, earlier today. She was hospitalized at Apollo hospital in Navi Mumbai. pic.twitter.com/OeTJGOk1EJ
— ANI (@ANI) April 2, 2022
ಮುಂಬೈ-ಪುಣೆ ಎಕ್ಸ್‌ಪ್ರೆಸ್ ವೇಯಲ್ಲಿ ನಟಿ ಮಲೈಕಾ ಅರೋರಾ ಕಾರು ಅಪಘಾತ ನಡೆದಿದೆ. ಮಲೈಕಾ ಅರೋರಾ ಅವರು ಡ್ರೈವರ್ ಮತ್ತು ಅಂಗರಕ್ಷಕನ ಜೊತೆ ಪ್ರಯಾಣಿಸುತ್ತಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.