ನಟ ರಾಣಾ ದಗ್ಗುಬಾಟಿ-ಮಿಹೀಕಾ ಮದುವೆ ದಿನಾಂಕ ನಿಗದಿ
Team Udayavani, Jun 1, 2020, 6:53 AM IST
ಇತ್ತೀಚೆಗಷ್ಟೆ ನಟ ರಾಣಾ ದಗ್ಗುಬಾಟಿಯವರು ತಾನು ಪ್ರೀತಿಸಿದ ಉದ್ಯಮಿ ಮಿಹೀಕಾ ಬಜಾಜ್ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಈ ಜೋಡಿಯ ಮದುವೆ ದಿನಾಂಕ ಕೂಡ ನಿಗದಿಯಾಗಿದೆ.
ರಾಣಾ ಮತ್ತು ಮಿಹೀಕಾ ಮದುವೆ ಇದೇ ವರ್ಷದ ಡಿಸೆಂಬರ್ ನಲ್ಲಿ ನಡೆಯಲಿದೆ ಎಂದು ರಾಣಾ ತಂದೆ ನಿರ್ಮಾಪಕ ಸುರೇಶ್ ಬಾಬು ತಿಳಿಸಿದ್ದಾರೆ. ಆದರೆ ಈಗ ಎರಡು ಕುಟುಂಬದವರು ಮಾತುಕತೆ ನಡೆಸಿದ್ದು, ಇನ್ನೂ ಎರಡು ತಿಂಗಳಲ್ಲಿ ಇವರ ವಿವಾಹ ಮಾಡಿ ಮುಗಿಸಲು ತೀರ್ಮಾನಿಸಿವೆ.
ಅದರಂತೆಯೇ ಆಗಸ್ಟ್ 8 ರಂದು ರಾಣಾ ಮತ್ತು ಮಿಹೀಕಾ ಮದುವೆಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ. ಇವರ ಮದುವೆ ಹೈದರಾಬಾದ್‍ನಲ್ಲಿ ಭವ್ಯ ಮಂಟಪದಲ್ಲಿ ನಡೆಯಲಿದೆ ಎಂದು ರಾಣಾ ತಂದೆ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ 19 ಹಿನ್ನೆಲೆಯಲ್ಲಿ ಸರ್ಕಾರ ಸೂಚಿರುವ ಮಾರ್ಗಸೂಚಿಯಂತೆ ಮದುವೆ ನಡೆಯಲಿದ್ದು, ಎರಡು ಕುಟುಂಬದ ಆಪ್ತರು ಮಾತ್ರ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಮೂಲಕ ಚಿತ್ರರಂಗದ ಗಣ್ಯರು ಮದುವೆಯಲ್ಲಿ ಭಾಗಿಯಾಗುವ ಸಾಧ್ಯತೆ ಕಡಿಮೆ ಇದೆ.
ಒಂದು ವೇಳೆ ಅಷ್ಟರಲ್ಲಿ ಸರ್ಕಾರ ತನ್ನ ಮಾರ್ಗಸೂಚಿಯನ್ನು ಸಡಿಲಗೊಳಿಸಿದರೆ ಅದ್ಧೂರಿಯಾಗಿ ಮದುವೆ ಮಾಡಲು ಪ್ಲಾನ್ ಮಾಡಲಾಗಿದೆ. ಅಲ್ಲದೇ ಸರ್ಕಾರ ಹೆಚ್ಚು ಜನರು ಮದುವೆಯಲ್ಲಿ ಭಾಗವಹಿಸಲು ಅನುಮತಿ ನೀಡಿದರೆ ಸಿನಿಮಾರಂಗದ ಗಣ್ಯರು ಭಾಗವಹಿಸಲಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೆ ರಾಣಾ ಅವರು ತನ್ನ ಅಭಿಮಾನಿಗಳಿಗೆ ತಾನು ಮಿಹೀಕಾ ಅವರ ಪ್ರೀತಿಯ ಬಲೆಯಲ್ಲಿ ಸಿಲುಕಿರುವುದಾಗಿ ಹೇಳಿಕೊಂಡಿದ್ದರು. ಪ್ರೀತಿಯ ಬಗ್ಗೆ ತಿಳಿಸಿದ ಒಂದೇ ವಾರದಲ್ಲಿ ರಾಣಾ ಮಿಹೀಕಾ ಅವರ ಜೊತೆ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದರು. ಇದನ್ನು ಸ್ವತಃ ಅವರೇ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕುವ ಮೂಲಕ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.