“ಮೋಸ ಮಾಡುವವರು ಎಂದೂ ಏಳಿಗೆಯಾಗುವುದಿಲ್ಲ” ಮಾಜಿ ಪ್ರೇಯಸಿ ಸಮಂತಾಗೆ ಕುಟುಕಿದ ಸಿದ್ದಾರ್ಥ್
Team Udayavani, Oct 4, 2021, 1:57 PM IST
ಹೈದರಾಬಾದ್: ಪತಿ ನಾಗಚೈತನ್ಯ ಅವರಿಗೆ ಡಿವೋರ್ಸ್ ನೀಡಿದ ನಟಿ ಸಮಂತಾ ಅವರನ್ನು ನಟ ಸಿದ್ದಾರ್ಥ್ ಕುಟುಕಿದ್ದಾರೆ. ನಾಗಚೈತನ್ಯ ಹಾಗೂ ಸಮಂತಾ ವಿಚ್ಛೇದನ ಸುದ್ದಿ ಹೊರ ಬರುತ್ತಿದ್ದಂತೆ ಟ್ವೀಟ್ ಮಾಡಿರುವ ಸಿದ್ದಾರ್ಥ್ “ ಮೋಸ ಮಾಡುವವರು ಎಂದಿಗೂ ಏಳೆಗೆಯಾಗುವುದಿಲ್ಲ ಎಂದು ಮಾಜಿ ಪ್ರೇಯಸಿಗೆ ಟಾಂಗ್ ಕೊಟ್ಟಿದ್ದಾರೆ.
ಸಮಂತಾ ಮತ್ತು ಸಿದ್ದಾರ್ಥ್ ಮಾಜಿ ಪ್ರೇಮಿಗಳು ಎನ್ನುವುದು ಬಹುತೇಕ ಜನರಿಗೆ ಗೊತ್ತಿರದ ವಿಚಾರ. 2003 ರಲ್ಲಿ ಮೇಘನಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ನಟ, 2007 ರಲ್ಲಿ ಆಕೆಯಿಂದ ವಿಚ್ಛೇದನ ಪಡೆದರು. ನಂತರ ಸೋಹಾ ಅಲಿಖಾನ್ ಜೊತೆ ಪ್ರೀತಿಯಲ್ಲಿ ಬಿದ್ದರು. ಈಕೆಯೊಂದಿಗೆ ಬ್ರೇಕಪ್ ಮಾಡಿಕೊಂಡ ಬಳಿಕ ಶೃತಿ ಹಾಸನ್ ಅವರೊಂದಿಗೆ ಮೂರುವರೆ ವರ್ಷ ರಿಲೇಷನ್‍ಶಿಪ್‍ನಲ್ಲಿದ್ದರು ಸಿದ್ದಾರ್ಥ್. ಶೃತಿ ಹಾಸನ್ ಜೊತೆಗಿನ ಪ್ರೀತಿ ಮುರಿದು ಬಿದ್ದ ನಂತರ ಈ ನಟನಿಗೆ ಸಿಕ್ಕದ್ದೆ ಸಮಂತಾ.
ತೆಲುಗಿನ “ಜಬರ್ದಸ್ತ್” ಸಿನಿಮಾ ಸೆಟ್ಟಿನಲ್ಲಿ ಸಮಂತಾ ಹಾಗೂ ಸಿದ್ದಾರ್ಥ್ ಪರಿಚಯವಾಗುತ್ತದೆ. ಅಲ್ಲಿಂದ ಶುರುವಾದ ಇವರ ಸ್ನೇಹ ಪ್ರೀತಿಯಾಗಿ ಪ್ರಮೋಟ್ ಆಗುತ್ತದೆ. ಇವರಿಬ್ಬರೂ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಕೂಡ ಕೇಳಿ ಬಂದಿತ್ತು. ಆದರೆ, ಅಷ್ಟರಲ್ಲಾಗಲೇ ಈ ಜೋಡಿ ಬೇರೆ ಬೇರೆಯಾಗುತ್ತದೆ. ಸಿದ್ದಾರ್ಥ್ ಅವರಿಂದ ದೂರವಾದ ಸಮಂತಾ ಅವರು ನಾಗಚೈತನ್ಯ ಅವರ ಜೊತೆ ಪ್ರೀತಿಯಲ್ಲಿ ಬೀಳುತ್ತಾರೆ. 2017 ರಲ್ಲಿ ಮದುವೆಯಾಗುತ್ತಾರೆ. ಆದರೆ, ದಾಂಪತ್ಯ ಜೀವನಕ್ಕೆ ಕಾಲಿಟ್ಟ 4 ವರ್ಷದಲ್ಲಿ ವಿಚ್ಛೇದನ ಪಡೆದಿದ್ದಾರೆ.
ಸಮಂತಾ ಅವರು ತಮ್ಮ ವಿಚ್ಛೇದನ ಸುದ್ದಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಬೆನ್ನಲ್ಲೆ ಟ್ವೀಟ್ ಮಾಡಿರುವ ಸಿದ್ದಾರ್ಥ್, ಮೋಸು ಮಾಡುವವರು ಎಂದಿಗೂ ಏಳಿಗೆಯಾಗುವುದಿಲ್ಲ ಎನ್ನುವ ಪಾಠವನ್ನು ಬಾಲ್ಯದಲ್ಲಿ ನನ್ನ ಶಿಕ್ಷಕರಿಂದ ಕಲಿತೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.