ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು ಮಂಜೂರು
Team Udayavani, Oct 19, 2021, 3:30 PM IST
ಹರಿಯಾಣ: ಜಾತಿ ನಿಂದನೆಯ ಆರೋಪದಡಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟಿ ಯುವಿಕಾ ಚೌಧರಿ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಆಗಿದೆ.
ಯುವಿಕಾರನ್ನು ಬಂಧಿಸುವಂತೆ ಆಗ್ರಹಿಸಿ ರಜತ್ ಕಲ್ಸನ್ ಎಂಬುವವರು ಹರಿಯಾಣದ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆಯಡಿ (ಎಸ್‌ಸಿ / ಎಸ್‌ಟಿ) ಪ್ರಕರಣ ದಾಖಲಿಸಿದ್ದರು. ಆದರಂತೆ ಸೋಮವಾರ ಯುವಿಕಾರನ್ನು ಪೊಲೀಸರು ಬಂಧಿಸಿದ್ದರು. ಇಂದು (ಮಂಗಳವಾರ) ಹರಿಯಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಹರಿಯಾಣ ಹೈಕೋರ್ಟ್, ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು ನೀಡಿದೆ. ‘ಹೈಕೋರ್ಟ್ ನಿಯಮಗಳ ಪ್ರಕಾರ ನನ್ನ ಕಕ್ಷಿದಾರರು ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದ್ದಾರೆ’ ಎಂದು ನಟಿ ಯುವಿಕಾ ಚೌಧರಿ ಪರ ವಕೀಲ ಅಶೋಕ್ ಬಿಷ್ಣೋಯ್ ಹೇಳಿದರು.
‘ಓಂ ಶಾಂತಿ ಓಂ’ ಮತ್ತು ‘ದಿ ಶೌಕೀನ್ಸ್’ ಸಹಿತ ವಿವಿಧ ಸಿನಿಮಾಗಳಲ್ಲಿ ನಟಿಸಿದ್ದ ಯುವಿಕಾ ಚೌಧರಿ, ವಿಡಿಯೊ ಬ್ಲಾಗ್ ಒಂದರಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಬಿಗ್ ಬಾಸ್ ಮಾಜಿ ಸ್ಪರ್ಧಿಯೂ ಆಗಿರುವ ಈ ನಟಿ, ವಿಡಿಯೊದಲ್ಲಿ ಜಾತಿನಿಂದನೆ ಪದ ಬಳಸಿರುವುದು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಟ್ವಿಟರ್‌ನಲ್ಲಿ ಕ್ಷಮೆ ಕೋರುವ ಮೂಲಕ ಪದದ ಅರ್ಥ ಗೊತ್ತಿರಲಿಲ್ಲ ಎಂದು ಹೇಳಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.