The Kerala Story ನಟಿ ಅದಾ ಶರ್ಮಾ, ನಿರ್ದೇಶಕರ ವಾಹನ ಅಪಘಾತ
Team Udayavani, May 15, 2023, 1:42 PM IST
ಹೈದರಾಬಾದ್: ʼದಿ ಕೇರಳ ಸ್ಟೋರಿʼ ಮೂಲಕ ಗಮನ ಸೆಳೆದಿರುವ ನಟಿ ಅದಾ ಶರ್ಮಾ ಅವರು ಪ್ರಯಾಣಿಸುತ್ತಿದ್ದ ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿರುವುದು ವರದಿಯಾಗಿದೆ.
ವಿವಾದಿತ ʼದಿ ಕೇರಳ ಸ್ಟೋರಿʼ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ 130 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸಿನಿಮಾದಲ್ಲಿ ನಟಿ ಅದಾ ಶರ್ಮಾ ಅವರ ನಟನೆಗೆ ಪ್ರಶಂಸೆ ವ್ಯಕ್ತವಾಗಿದೆ. ಕೇರಳದ ಹಿಂದೂ ಹುಡುಗಿಯ ಪಾತ್ರದಲ್ಲಿ ನಟಿಸಿರುವ ಅವರು ಕಥೆಗೆ ತಕ್ಕ ಹಾಗೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಮುಸ್ಲಿಂ ಯುವತಿಯಾಗಿಯೂ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.
ಸಿನಿಮಾ ಒಂದಷ್ಟು ಕಾರಣದಿಂದ ಚರ್ಚೆಯಲ್ಲಿದೆ. ಈ ನಡುವೆ ಕೇರಳ ಸ್ಟೋರಿ ಚಿತ್ರತಂಡ ಪ್ರಯಾಣಿಸುತ್ತಿದ್ದ ವಾಹನ ಅಪಘಾತವಾಗಿದೆ ಎನ್ನುವ ಬಗ್ಗೆ ವರದಿಯಾಗಿದೆ.
ನಟಿ ಅದಾ ಶರ್ಮಾ, ನಿರ್ದೇಶಕ ಸುದೀಪ್ತೋ ಸೇನ್ ಸೇರಿದಂತೆ ಸಿನಿಮಾ ತಂಡ ಕರೀಂನಗರದಲ್ಲಿ ನಡೆಯುತ್ತಿದ್ದ ಹಿಂದೂ ಏಕತಾ ಯಾತ್ರೆಗೆ ತೆರಳುವ ವೇಳೆ ಅವರ ವಾಹನ ಅಪಘಾತಗೊಂಡಿದೆ. ಘಟನೆಯಲ್ಲಿ ನಟಿ ಹಾಗೂ ನಿರ್ದೇಶಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.
ಆರೋಗ್ಯದ ಬಗ್ಗೆ ಫ್ಯಾನ್ಸ್ ಗಳು ಚಿಂತಿಸುತ್ತಿರುವಾಗ ಸ್ವತಃ ನಟಿ ಅದಾ ಶರ್ಮಾ ಅವರೇ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ನೇಹಿತರೇ ನಾನು ಚೆನ್ನಾಗಿದ್ದೇನೆ. ನಮ್ಮ ಅಪಘಾತದ ಬಗ್ಗೆ ಹರಿದಾಡುತ್ತಿರುವ ಸುದ್ದಿಯಿಂದಾಗಿ ಸಾಕಷ್ಟು ಸಂದೇಶಗಳು ಬರುತ್ತಿವೆ. ನಾವೆಲ್ಲರೂ ಚೆನ್ನಾಗಿದ್ದೇವೆ, ಗಂಭೀರವಾದದ್ದೇನೂ ಇಲ್ಲ ಕಾಳಜಿಗಾಗಿ ಧನ್ಯವಾದಗಳೆಂದು ಅವರು ಟ್ವೀಟ್ ಮಾಡಿದ್ದಾರೆ.
ಸದ್ಯ ʼದಿ ಕೇರಳ ಸ್ಟೋರಿʼ ಸಿನಿಮಾ ರಾಜಕೀಯವಾಗಿಯೂ ಸುದ್ದಿಯಾಗುತ್ತಿದೆ. ಸಿನಿಮಾದ ಪ್ರಚಾರ ರಾಜಕೀಯವಾಗಿ ತಿರುವು ಪಡೆದುಕೊಳ್ಳುತ್ತಿದೆ.
I’m fine guys . Getting a lot of messages because of the news circulating about our accident. The whole team ,all of us are fine, nothing serious , nothing major but thank you for the concern ❤️❤️
— Adah Sharma (@adah_sharma) May 14, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.