ಜೂನ್ 18 ಕ್ಕೆ ಅಮಿತಾಭ್ ನಟನೆಯ “ಜುಂಡ್ ” ದೇಶಾದ್ಯಂತ ರಿಲೀಸ್
Team Udayavani, Feb 20, 2021, 5:15 PM IST
ಮುಂಬೈ: ಬಾಲಿವುಡ್ ಅಂಗಳದ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅಭಿನಯದ ಸ್ಫೋರ್ಟ್ಸ್ ಸಿನಿಮಾವಾದ “ಜುಂಡ್ ” ಚಿತ್ರದ ಬಿಡುಗಡೆಗೆ ಡೇಟ್ ನಿಗದಿಯಾಗಿದೆ. ಮುಂಬರುವ ಜೂನ್ 18 ರಂದು ಚಿತ್ರವನ್ನು ಚಿತ್ರಮಂದಿರದಲ್ಲಿ ಬಿಡುಗಡೆಗೊಳಿಸುವುದಾಗಿ ಚಿತ್ರತಂಡ ತಿಳಿಸಿದ್ದು, ಸಿನಿ ಪ್ರಿಯರಲ್ಲಿ ನಿರೀಕ್ಷೆ ಹೆಚ್ಚಿಸಿದೆ.
ಈ ಕುರಿತಾಗಿ ಟ್ವೀಟ್ ಮಾಡುವ ಮೂಲಕ ಚಿತ್ರದ ಪೋಸ್ಟರ್ ಹಂಚಿಕೊಂಡಿರುವ ನಟ ಅಮಿತಾಭ್ ಬಚ್ಚನ್ ಕೋವಿಡ್ ನಮಗೆ ಹಿನ್ನೆಡೆಯನ್ನು ನೀಡಿತ್ತು. ಆದರೆ ಇದೀಗ ಮತ್ತೆ ಪುನರಾರಂಭವನ್ನು ಪಡೆಯುತ್ತಿದ್ದೇವೆ . ಮುಂಬರುವ ಜೂನ್ 18 “ಜುಂಡ್ ” ಸಿನಿಮಾ ಚಿತ್ರ ಮಂದಿರದಲ್ಲಿ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಬಾಲಿವುಡ್ ನ ಖ್ಯಾತ ನಿರ್ದೇಶಕರಾದ ನಾಗರಾಜ್ ಪೊಪಾತ್ರಾವ್ ಮಂಜುಲೆ ಆ್ಯಕ್ಷನ್ ಕಟ್ ನಲ್ಲಿ ಮೂಡಿಬರುತ್ತಿರುವ ಸಿನಿಮಾ ಇದಾಗಿದ್ದು, ಸ್ಲಮ್ ಸೋಸರ್ (Slum Soccer) NGO ದ ಸಂಸ್ಥಾಪಕರಾಗಿರುವ ವಿಜಯ್ ಬಾರ್ಸೆ ಅವರ ಜೀವನಾಧಾರಿತ ಸಿನಿಮಾ ಇದಾಗಿರಲಿದೆ.
ಇದನ್ನೂ ಓದಿ:ಮಹಾರಾಷ್ಟ್ರ: ಖಾಸಗಿ ಕ್ಲಿನಿಕ್ ನಲ್ಲಿ ಇಬ್ಬರು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ: ವೈದ್ಯರ ಬಂಧನ
ಈ ಚಿತ್ರವನ್ನು ಕಳೆದ ವರ್ಷದ ಸೆಪ್ಟೆಂಬರ್ ನಲ್ಲಿಯೇ ಬಿಡುಗಡೆಗೊಳಿಸುವುದಕ್ಕೆ ತಯಾರಿ ನಡೆಸಿದ್ದು ಈ ನಡುವೆ ಕೋವಿಡ್ ಸೋಂಕಿನ ಪರಿಣಾಮ ಚಿತ್ರದ ಕೆಲಸಗಳು ವಿಳಂಬಗೊಂಡಿತ್ತು . ಇದೀಗ ಮುಂಬರುವ ಜೂನ್ 18 ರಂದು ಚಿತ್ರ ತೆರೆಮೇಲೆ ಬರಲಿದೆ ಎಂದು ಚಿತ್ರ ತಂಡ ತಿಳಿಸಿದೆ.
T 3818 – Covid gave us setbacks .. but it’s comeback time now! WE’RE BACK IN THEATERS .. “JHUND” releasing 18th June !!@Nagrajmanjule @itsBhushanKumar #KrishanKumar @vinodbhanu #RaajHiremath #SavitaRajH #GargeeKulkarni #MeenuAroraa @AjayAtulOnline @tandavfilms @aatpaat @TSeries pic.twitter.com/a9sHZCBTS6
— Amitabh Bachchan (@SrBachchan) February 19, 2021
ನಟ ಅಮಿತಾಭ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಸಿನಿಮಾದಲ್ಲಿ ಆಕಾಶ್ ಥೋಸರ್ , ರಿಂಕು ರಾಜಗುರು ಮುಂತಾದವರು ಬಣ್ಣ ಹಚ್ಚಿದ್ದಾರೆ.
ಈ ನಡುವೆ ‘ಗುಲಾಬೋ ಸೀತಾಬೋ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಅಮಿತಾಭ್ ಬಚ್ಚನ್ ಆ ಬಳಿಕ ಹಲವು ಸಿನಿಮಾಗಳಲ್ಲಿ ನಟಿಸಿದ್ದು, ಅವುಗಳಲ್ಲಿ ‘ಬ್ರಹ್ಮಾಸ್ತ್ರ’, “ಮೇ ಡೇ’ ಚಿತ್ರಗಳು ಬಿಡುಗಡೆಗೆ ತಯಾರಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.