ಇಟಲಿಯಲ್ಲಿ ಕೊನೆಗೂ ಮದುವೆಯಾದ ಅನುಷ್ಕಾ – ವಿರಾಟ್ ಕೊಹ್ಲಿ
Team Udayavani, Dec 11, 2017, 7:24 PM IST
ಹೊಸದಿಲ್ಲಿ : ಬಹು ಕಾಲದ ನಿರೀಕ್ಷೆ, ಕುತೂಹಲ, ಊಹಾಪೋಹಗಳಿಗೆ ಕೊನೆಗೂ ತೆರೆ ಎಂಬಂತೆ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ತಾರೆ ಅನುಷ್ಕಾ ಶರ್ಮಾ ಇಂದು ಸೋಮವಾರ ಬೆಳಗ್ಗೆ ಇಟಲಿಯ ಟಸ್‌ಕ್ಯಾನಿಯಲ್ಲಿ ಖಾಸಕಿ ಸಮಾರಂಭದಲ್ಲಿ ವಿವಾಹ ಬಂಧನಕ್ಕೆ ಒಳಪಟ್ಟರೆಂದು ಮಾಧ್ಯಮ ವರದಿಗಳು ತಿಳಿಸಿವೆ.
ಡಿಸೆಂಬರ್ ತಿಂಗಳಲ್ಲಿ ತನಗೆ ಬಿಡುವು ಬೇಕೆಂದು ವಿರಾಟ್ ಕೊಹ್ಲಿ ಅವರು ಬಿಸಿಸಿಐ ಮುಂದೆ ಮನವಿಯನ್ನು ಸಲ್ಲಿಸಿದಾಗಲೇ “ವಿರಾಟ್ – ಅನುಷ್ಕಾ’ (ವಿರುಷ್ಕಾ) ಮದುವೆಯ ಊಹಾಪೋಹಗಳು ಗರಿಗೆದರಿದ್ದವು. ಈ ಜೋಡಿ ಇಟಲಿಯ ಮಿಲಾನ್‌ನಲ್ಲಿ ಮದುವೆಯಾಗುತ್ತದೆ ಎಂಬ ವದಂತಿಗಳು ದಟ್ಟವಾಗಿ ಹರಡಿದ್ದವು. ಈ ವದಂತಿ ಕೊನೆಗೂ ನಿಜವಾಗಿ ಈ ವರೆಗಿನ ಎಲ್ಲ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ.
ಕೆಲ ದಿನಗಳ ಹಿಂದೆ ಅನುಷ್ಕಾ ಶರ್ಮಾ ಮತ್ತು ಅವರ ಕುಟುಂಬ ಸದಸ್ಯರನ್ನು ಮುಂಬಯಿ ವಿಮಾನ ನಿಲ್ದಾಣದಲ್ಲಿ ಕುತೂಹಲಿಗರು ಪತ್ತೆ ಹಚ್ಚಿದ್ದರು.
ಅದೇ ಸಂದರ್ಭದಲ್ಲಿ ಮಾಧ್ಯಮ ವರದಿಗಾರರು ಅನುಷ್ಕಾ ಅವರನ್ನು ಸುತ್ತುವರಿದು ಮದುವೆ ವದಂತಿ ಕುರಿತು ಸ್ಪಷ್ಟನೆ ಕೇಳಿದಾಗ ಆಕೆ ತುಟಿ ಬಿಚ್ಚಿರಲಿಲ್ಲ ! ಅನುಷ್ಕಾ ಜತೆಗೆ ಆಕೆಯ ಸಹೋದರ ಕರಣೇಶ್, ತಂದೆ ಅಜಯ್ ಕುಮಾರ್ ಶರ್ಮಾ ಮತ್ತು ತಾಯಿ ಆಶಿಮಾ ಕೂಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.