ರಾಣಿ ಲಕ್ಷ್ಮೀಬಾಯಿ ಗೆಟಪ್‌ನಲ್ಲಿ ಅನುಷ್ಕಾ ಶೆಟ್ಟಿ


Team Udayavani, Aug 30, 2019, 5:00 AM IST

f-22

ಬಾಹುಬಲಿ ಮತ್ತು ಭಾಗಮತಿ ಚಿತ್ರಗಳ ನಂತರ ಯಾವ ಚಿತ್ರಗಳಲ್ಲೂ ಕಾಣಿಸಿಕೊಂಡಿರದ ಸೌತ್‌ ಸುಂದರಿ ಅನುಷ್ಕಾ ಶೆಟ್ಟಿ ಈಗ ಮತ್ತೂಂದು ಬಿಗ್‌ ಬಜೆಟ್‌ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುವ ಸಿದ್ಧತೆಯಲ್ಲಿದ್ದಾರೆ.

ಹೌದು, ಭಾಗಮತಿ ಚಿತ್ರದ ನಂತರ ಅನುಷ್ಕಾ ಶೆಟ್ಟಿ, ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸೈರಾ ಚಿತ್ರ ಚಿತ್ರೀಕರಣದ ವೇಳೆಯಲ್ಲಿಯೇ ಅನುಷ್ಕಾ ಶೆಟ್ಟಿ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ, ಎಂಬ ಸುದ್ದಿ ಹರಿದಾಡಿದ್ದರೂ, ಚಿತ್ರತಂಡವಾಗಲಿ, ಅನುಷ್ಕಾ ಶೆಟ್ಟಿ ಅವರಾಗಲಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಹಾಗಾಗಿ, ಇದು ಅಂತೆ-ಕಂತೆ ಸುದ್ದಿ ಇರಬಹುದು ಎಂದು ಅಭಿಮಾನಿಗಳು ಕೂಡ ಸುಮ್ಮನಾಗಿದ್ದರು. ಆದರೆ ಈಗ ಈ ಸುದ್ದಿ ನಿಜವಾಗಿದೆ. ಸೈರಾ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಅಭಿನಯಿಸುತ್ತಿರುವ ವಿಷಯವನ್ನು ಸ್ವತಃ ಸೈರಾ ಚಿತ್ರತಂಡವೇ ಸ್ಪಷ್ಟಪಡಿಸಿದೆ.

ಸದ್ಯ ಭರದಿಂದ ಸೈರಾ ಚಿತ್ರದ ಪ್ರಮೋಶನ್‌ ಕೆಲಸಗಳಲ್ಲಿ ನಿರತ ವಾಗಿರುವ ಚಿತ್ರತಂಡ, ಇತ್ತೀಚೆಗೆ ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಈ ಅಂಶವನ್ನು ರಿವೀಲ್‌ ಮಾಡಿದೆ. ಅಲ್ಲದೆ ಸೈರಾ ಚಿತ್ರ ದಲ್ಲಿ ಅನುಷ್ಕಾ ಶೆಟ್ಟಿ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದಾರೆ ಎಂಬ ಸಂಗತಿಯನ್ನು ಬಿಚ್ಚಿಟ್ಟಿದೆ.

ಸೈರಾ ಚಿತ್ರತಂಡ ನೀಡಿರುವ ಮಾಹಿತಿಯ ಪ್ರಕಾರ, ಅನುಷ್ಕಾ ಶೆಟ್ಟಿ ಸೈರಾ ಚಿತ್ರದಲ್ಲಿ 1857ರ ದಂಗೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಣಿ ಲಕ್ಷ್ಮೀ ಬಾಯಿ ಪಾತ್ರದಲ್ಲಿ ಕಾಣಿಸಿ ಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಸೈರಾ ಚಿತ್ರದ ನಿರ್ಮಾಪಕ ರಾಮ್‌ ಚರಣ್‌, ಚಿತ್ರದ ಆರಂಭದಲ್ಲಿ ರಾಣಿ ಲಕ್ಷ್ಮೀಬಾಯಿ ಯುದ್ಧಭೂಮಿಯಲ್ಲಿ ಗಾಯಗೊಂಡ ಸೈನಿಕರಿಗೆ ಉಯಲವಾಡ ನರಸಿಂಹ ರೆಡ್ಡಿ ಅವರ ಸ್ಫೂರ್ತಿದಾಯಕ ಕಥೆಯನ್ನು ಹೇಳುವ ಮೂಲಕವೇ ಚಿತ್ರ ಪ್ರಾರಂಭವಾಗುತ್ತದೆ. ಚಿತ್ರದ ಕಥೆಗೆ ಪ್ರಮುಖ ತಿರುವು ನೀಡುವ ಅತಿಥಿ ಪಾತ್ರದಲ್ಲಿ ಅನುಷ್ಕಾ ಕಾಣಿಸಿಕೊಳ್ಳುತ್ತಿದ್ದಾರೆ. ಅನುಷ್ಕಾ ಅವರನ್ನು ಈ ಗೆಟಪ್‌ನಲ್ಲಿ ತೆರೆಯ ಮೇಲೆ ನೋಡಲು, ಅಭಿಮಾನಿಗಳ ಜೊತೆ ಚಿತ್ರತಂಡ ಕೂಡ ಕಾತುರವಾಗಿದೆ’ ಎಂದು ಹೇಳಿದ್ದಾರೆ.

ಇನ್ನು ಸೈರಾ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಅವರ ಪಾತ್ರದ ಬಗ್ಗೆ ಸೈರಾ ನಾಯಕ ನಟ ತೆಲುಗಿನ ಮೆಗಾಸ್ಟಾರ್‌ ಚಿರಂಜೀವಿ ಕೂಡ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಇನ್ನು ಸೈರಾ ಚಿತ್ರದಲ್ಲಿ ಚಿರಂಜೀವಿ ಅವರೊಂದಿಗೆ ಅಮಿತಾಬ್‌ ಬಚ್ಚನ್‌, ಕಿಚ್ಚ ಸುದೀಪ್‌, ವಿಜಯ್‌ ಸೇತುಪತಿ, ತಮನ್ನಾ, ಜಗಪತಿ ಬಾಬು, ನಯನತಾರಾ ಹೀಗೆ ಅನೇಕ ಸ್ಟಾರ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಒಟ್ಟಾರೆ ಸೈರಾ ಚಿತ್ರ ಅಕ್ಟೋಬರ್‌ ಮೊದಲ ವಾರ ತೆಲುಗು, ಕನ್ನಡ, ತಮಿಳು, ಮಲೆಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಅದ್ದೂರಿಯಾಗಿ ತೆರೆಗೆ ಬರುತ್ತಿದ್ದು, ಚಿತ್ರದಲ್ಲಿ ಅನುಷ್ಕಾ ಗೆಟಪ್‌, ಲುಕ್‌ ಹೇಗಿರಲಿದೆ ಅನ್ನೋದು ಚಿತ್ರ ಬಿಡುಗಡೆಯಾದ ಮೇಲಷ್ಟೆ ಗೊತ್ತಾಗಲಿದೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.