‘ ಬಾಳ ಠಾಕ್ರೆ’ ಸಿನಿಮಾ ನಿರ್ಮಾಪಕಿ ಸ್ವಪ್ನಾ ಪಾಟಕರ್ ಬಂಧನ
Team Udayavani, Jun 9, 2021, 2:33 PM IST
ಮುಂಬಯಿ: ನಕಲಿ ಪಿಎಚ್ ಡಿ ಪ್ರಮಾಣ ಪತ್ರ ಬಳಸಿಕೊಂಡು ಆಸ್ಪತ್ರೆಯಲ್ಲಿ ಉದ್ಯೊಗ ಪಡೆದ ಆರೋಪದಡಿ ಮರಾಠಿ ಚಿತ್ರರಂಗದ ಸಿನಿಮಾ ನಿರ್ಮಾಪಕಿ ಸ್ವಪ್ನಾ ಪಾಟಕರ್ ಅವರನ್ನು ಮುಂಬೈ ಪೊಲೀಸರು ಮಂಗಳವಾರ ( ಜೂನ್.08) ಬಂಧಿಸಿದ್ದಾರೆ.
39 ವರ್ಷದ ಸ್ವಪ್ನಾ ಪಾಟಕರ್ ಕ್ಲಿನಿಕಲ್ ಫಿಸಿಯೋಲಜಿಯಲ್ಲಿ ಪಿಎಚ್‌ಡಿ ಮಾಡಿರುವುದಾಗಿ ದಾಖಲೆಗಳನ್ನು ತೋರಿಸಿ ಆಸ್ಪತ್ರೆಯಲ್ಲಿ ಕೆಲಸ ಪಡೆದುಕೊಂಡಿದ್ದಾರೆ. ಈಕೆಯ ವಿರುದ್ಧ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಮೇ 26ರಂದು ನಕಲಿ ಪಿಎಚ್‌ಡಿ ಹೊಂದಿರುವ ಕುರಿತು ದೂರು ದಾಖಲಾಗಿದೆ.
ವಂಚನೆ, ನಕಲು ಮತ್ತು ಮೋಸ ಮಾಡುವುದಕ್ಕಾಗಿ ನಕಲು ಮಾಡಿದ ಆರೋಪಗಳು ಸ್ವಪ್ನಾ ಅವರ ಮೇಲಿವೆ. ಐಪಿಸಿ ಕಾಯ್ದೆ 419, 420, 467 ಮತ್ತು 468 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಶಿವಸೇನೆ ಸ್ಥಾಪಕ ಬಾಳ್ ಠಾಕ್ರೆ ಅವರ ಜೀವನಚಿತ್ರ ಮರಾಠಿಯ ‘ಬಾಳ್ ಕಡು’ ಚಿತ್ರವನ್ನು ಸ್ವಪ್ನಾ ನಿರ್ಮಿಸಿದ್ದಾರೆ. ಇದು 2015ರಲ್ಲಿ ಬಿಡುಗಡೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
Life threat: ಸಲ್ಮಾನ್ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು
ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್.. ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ
MUST WATCH
ಹೊಸ ಸೇರ್ಪಡೆ
Mangaluru University: ಹೊಸ ಕೋರ್ಸ್ ಆರಂಭಕ್ಕೆ ವಿವಿ ಅನುಮತಿ ಅಗತ್ಯ
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.