Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Team Udayavani, Nov 26, 2024, 3:06 PM IST
ಮುಂಬಯಿ: ಖ್ಯಾತ ಬಾಲಿವುಡ್ ಗಾಯಕ, ರ‍್ಯಾಪರ್ ಬಾದ್ ಶಾ (Badshah) ಒಡೆತನದ ಎರಡು ಬಾರ್ & ಕ್ಲಬ್ ಹೊರಗೆ ಬಾಂಬ್ ಸ್ಪೋಟವಾಗಿರುವ ಘಟನೆ ಮಂಗಳವಾರ (ನ.26ರಂದು) ಮುಂಜಾನೆ ನಡೆದಿದೆ.
ಚಂಡೀಗಢದ ಸೆಕ್ಟರ್ 26 ರಲ್ಲಿರುವ ಬಾದ್ ಶಾ ಮಾಲೀಕತ್ವದ ಬಾರ್ & ಕ್ಲಬ್ ಸೆವಿಲ್ಲೆ, ಡಿ ಓರಾ ಕ್ಲಬ್ ಹೊರಗೆ ಈ ಸ್ಫೋಟ ಸಂಭವಿಸಿದೆ.
ಮಂಗಳವಾರ ಮುಂಜಾನೆ 3 ಗಂಟೆಯ ಸಮಯದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಬಾರ್ ಹೊರಗೆ ಬಾಂಬ್ ಎಸೆದು ಪರಾರಿ ಆಗಿದ್ದಾರೆ. ಸ್ಫೋಟದ ಪರಿಣಾಮ ಕ್ಲಬ್‌ನಲ್ಲಿನ ಗಾಜಿನ ಕಿಟಕಿಗಳನ್ನು ಒಡೆದು ಹೋಗಿದ್ದು, ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಈ ಘಟನೆ ಬಳಿಕ 30 ಮೀ ದೂರದಲ್ಲಿರುವ ಡಿ ಓರಾ ಕ್ಲಬ್ ಮೇಲೂ ಅದೇ ರೀತಿಯ ಬಾಂಬ್ ಎಸೆದು ಪರಾರಿ ಆಗಿದ್ದಾರೆ.
ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ಎಚ್ಚೆತ್ತು ಸ್ಥಳಕ್ಕೆ ಆಗಮಿಸಿದ್ದು, ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಆಧಾರಿಸಿ ತನಿಖೆಯನ್ನು ಕೈಗೊಂಡಿದ್ದಾರೆ.
“ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದ ಕಾರಣ ಯಾವುದೇ ರೀತಿಯ ಪ್ರಾಣಕ್ಕೆ ಅಪಾಯವಾಗಿಲ್ಲವೆಂದು” ಪೊಲೀಸರು ಹೇಳಿದ್ದಾರೆ.
ಚಂಡೀಗಢಕ್ಕೆ ಇದೇ ಡಿಸೆಂಬರ್ 3ರಂದು ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ. ಇದೇ ಸಮಯದಲ್ಲಿ ಸ್ಪೋಟ ಸಂಭವಿಸಿರುವುದು ಪೊಲೀಸರು ಮತ್ತಷ್ಟು ಎಚ್ಚೆತ್ತುಕೊಳ್ಳುವಂತೆ ಮಾಡಿದೆ.
ಸಾಗೋ ಸ್ಪೈಸಿ ಸಿಂಫನಿ ಮತ್ತು ಸೈಡೆರಾ ಎಂಬ ಎರಡು ಸಂಸ್ಥೆಗಳ ಸಹ-ಮಾಲೀಕತ್ವದೊಂದಿಗೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾದ್ ಶಾ ಸೆವಿಲ್ಲೆ ಕ್ಲಬ್ ತೆರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.