ತಂದೆ-ತಾಯಿ ವಿರುದ್ಧ ದೂರು ನೀಡಿದ ನಟ ದಳಪತಿ ವಿಜಯ್
Team Udayavani, Sep 19, 2021, 8:49 PM IST
ಚೆನ್ನೈ: ತಮಿಳು ನಟ ವಿಜಯ್ ದಳಪತಿ ಅವರು ತಮ್ಮ ತಂದೆ ಹಾಗೂ ತಾಯಿ ಸೇರಿದಂತೆ 11 ಜನರ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಸ್ಥಳೀಯ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ವಿಜಯ್ ಅವರ ತಂದೆ ಖ್ಯಾತ ನಿರ್ದೇಶಕ ಎಸ್.ಎ. ಚಂದ್ರಶೇಖರ್ ಅವರು ತಮ್ಮ ಪುತ್ರನ ಅಸಮ್ಮತಿಯ ನಡುವೆಯೂ ರಾಜಕೀಯದಲ್ಲಿ ಸಕ್ರಿಯರಾಗುವ ನಿಟ್ಟಿನಲ್ಲಿ ‘ಆಲ್ ಇಂಡಿಯಾ ದಳಪತಿ ವಿಜಯ್ ಮಕ್ಕಳ್ ಇಯಕ್ಕಮ್’ ಪಕ್ಷ ಆರಂಭಿಸಿದ್ದಾರೆ. ಈ ಪಕ್ಷಕ್ಕೆ ಚಂದ್ರಶೇಖರ್ ಪ್ರಧಾನ ಕಾರ್ಯದರ್ಶಿ. ಅವರ ತಾಯಿ ಶೋಭಾ ಚಂದ್ರಶೇಖರ್ ಖಜಾಂಚಿ. ಪದ್ಮನಾಭನ್ ಪಕ್ಷದ ನಾಯಕರಾಗಿದ್ದಾರೆ. 2021ರ ಅಕ್ಟೋಬರ್ ನಲ್ಲಿ ನಡೆಯಲಿರುವ ಸ್ಥಳೀಯ ಚುನಾವಣೆಯಲ್ಲಿ ಈ ಪಕ್ಷ ಸ್ಪರ್ಧಿಸಲಿದೆ. ಈ ಹಿನ್ನೆಲೆ ತಮ್ಮ ಹೆಸರಿನಲ್ಲಿ ಯಾವುದೇ ಸಭೆ-ಸಮಾರಂಭಗಳನ್ನು ನಡೆಸಲು ಅನುಮತಿ ನೀಡದಂತೆ ವಿಜಯ್ ಅವರು ನ್ಯಾಯಾಲಯದ ಕದ ತಟ್ಟಿದ್ದಾರೆ.
ದಳಪತಿ ವಿಜಯ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ರಾಜಕೀಯದಲ್ಲಿ ತಮ್ಮ ಮತ್ತು ತಮ್ಮ ಫ್ಯಾನ್ ಕ್ಲಬ್ನ ಹೆಸರು ಬಳಕೆ ಮಾಡದಂತೆ ತಡೆಕೋರಬೇಕು ಎಂದು ವಿಜಯ್ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅವರ ಅರ್ಜಿಯ ವಿಚಾರಣೆ ಸೆಪ್ಟೆಂಬರ್ 27 ರಂದು ನಡೆಯಲಿದೆ.
ಇನ್ನು ಈ ಮೊದಲು ಕೂಡ ಮಾತನಾಡಿದ್ದ ವಿಜಯ್ ಅವರು, ನನ್ನ ತಂದೆಯ ರಾಜಕೀಯ ಪಕ್ಷಕ್ಕೆ ತಮ್ಮ ಯಾವುದೇ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದ್ದರು. ‘ನನ್ನ ತಂದೆ ನೀಡಿರುವ ರಾಜಕೀಯ ಹೇಳಿಕೆಗಳೊಂದಿಗೆ ನನಗೆ ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.