Bigg Boss: ಬಿಗ್ ಬಾಸ್ ಮನೆಯೊಳಗೆ ಎಂಟ್ರಿ ಕೊಡಲಿದ್ದಾರೆ ವಯಸ್ಕ ನಟಿ
Team Udayavani, Oct 7, 2023, 1:47 PM IST
ಮುಂಬಯಿ: ಸದ್ಯ ಕಿರುತೆರೆಯಲ್ಲಿ ಬಿಗ್ ಬಾಸ್ ಕಾರ್ಯಕ್ರಮ ಶುರುವಾಗಲು ದಿನಗಣನೆ ಬಾಕಿ ಉಳಿದಿದೆ. ಈಗಾಗಲೇ ತೆಲುಗಿನಲ್ಲಿ ಬಿಗ್ ಬಾಸ್ ಕಾರ್ಯಕ್ರಮ ಆರಂಭಗೊಂಡಿದೆ. ಇತ್ತ ಹಿಂದಿ ಹಾಗೂ ಕನ್ನಡದಲ್ಲಿ ಕಾರ್ಯಕ್ರಮ ಆರಂಭಕ್ಕೆ ದಿನಾಂಕ ನಿಗದಿ ಆಗಿದೆ.
ಹಿಂದಿ ಬಿಗ್ ಬಾಸ್ ಸೀಸನ್ 17 ರ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದೆ. ಈ ನಡುವೆ ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗಿಯಾಗಲಿದ್ದಾರೆ ಎನ್ನುವುದರ ಬಗ್ಗೆ ಚರ್ಚೆಗಳು ಶುರುವಾಗಿದ್ದು, ಕೆಲ ಸ್ಪರ್ಧಿಗಳ ಭಾಗವಹಿಸುವುದು ಖಚಿತವಾಗಿದೆ.
ಸಲ್ಮಾನ್ ನಡೆಸಿಕೊಡುವ ಕಾರ್ಯಕ್ರಮದಲ್ಲಿ ಮಾಜಿ ನೀಲಿ ಚಿತ್ರತಾರೆ ಸನ್ನಿ ಲಿಯೋನ್ ಈ ಹಿಂದೆ ಸ್ಪರ್ಧಿಯಾಗಿ ಭಾಗಿಯಾಗಿದ್ದಾರೆ. ಇದರ ಜೊತೆ ಮಾಡೆಲ್ ಪಮೇಲಾ ಆಂಡರ್ಸನ್ ಅವರು ಕೂಡ ಸೀಸನ್ 4 ನಲ್ಲಿ ಬಿಗ್ ಬಾಸ್ ಮನೆಯೊಳಗೆ ಎಂಟ್ರಿ ಕೊಟ್ಟಿದ್ದರು.
ಇದೀಗ ಮತ್ತೊಬ್ಬ ವಯಸ್ಕ ಕಂಟೆಂಟ್ ಕ್ರಿಯೇಟರ್ ರೊಬ್ಬರು ಬಿಗ್ ಬಾಸ್ ಮನೆಯೊಳಗೆ ಹೋಗಲಿದ್ದಾರೆ.
ಸಾಮಾಜಿಕ ಮಾಧ್ಯಮ ಪ್ರಭಾವಿ ಮತ್ತು ವಯಸ್ಕ ಕಂಟೆಂಟ್ ಕ್ರಿಯೇಟರ್ ಆಗಿರುವ ಇಂಡೋ – ಅಮೇರಿಕನ್ ಶಿಲ್ಪಾ ಸೇಥಿ ಅವರು ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಯಾಗಿ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ. ಇವರನ್ನು ಭಾರತದ ಕಿಮ್ ಕಾರ್ಡಶಿಯಾನ್ ಎಂದು ಕರೆಯಲಾಗುತ್ತದೆ. ಏಕೆಂದರೆ ಅವರ ರೂಪ ಹಾಗೂ ಅವರು ಹಾಕುವ ಪೋಸ್ಟ್ ಕಿಮ್ ಕಾರ್ಡಶಿಯಾನ್ ರಂತೆಯೇ ಇರುತ್ತದೆ.
ಶಿಲ್ಪಾ ಸೇಥಿ ಅವರಿಗೆ ಇನ್ಸ್ಟಾಗ್ರಾಮ್ ನಲ್ಲಿ 10 ಮಿಲಿಯನ್ ಫಾಲೋವರ್ಸ್ ಗಳಿದ್ದಾರೆ. ಅವರ ಹಾಟ್ & ಮಾದಕತೆ ಫೋಟೋಗಳು ಇಂಟರ್ ನೆಟ್ ನಲ್ಲಿ ಭಾರೀ ವೈರಲ್ ಆಗುತ್ತವೆ. ವಯಸ್ಕ ಕಂಟೆಂಟ್ ನಟಿ ಬಿಗ್ ಬಾಸ್ ಮನೆಯೊಳಗೆ ಎಂಟ್ರಿ ಆಗುವುದು ಪಕ್ಕಾ ಆಗಿದೆ ಎನ್ನಲಾಗಿದೆ.
ಶಿಲ್ಪಾ ತನ್ನನ್ನು ತಾನು ಅತ್ಯಂತ ʼಕೆಟ್ಟ ಭಾರತೀಯʼ(Baddest Indian) ಎಂದು ಕರೆದುಕೊಂಡಿದ್ದಾಳೆ.
ಯಾರೆಲ್ಲಾ ಸ್ಪರ್ಧಿಗಳು: ಬಿಗ್ ಬಾಸ್ ಸೀಸನ್ 17 ರಲ್ಲಿ ಸ್ಪರ್ಧಿಗಳಾಗಿ ಮನೆಯೊಳಗೆ ಕಾಲಿಡುವವರ ಪಟ್ಟಿ ದೊಡ್ಡಿದಿದೆ. ಅವುಗಳಲ್ಲಿ ಪ್ರಮುಖರೆಂದರೆ, ಮಾಜಿ ಮಿಸ್ ಇಂಡಿಯಾ, ಮನಸ್ವಿ ಮಾಮ್ಗೈ, ದಂಪತಿಗಳಾದ ಅಂಕಿತಾ ಲೋಖಂಡೆ ಮತ್ತು ವಿಕ್ಕಿ ಜೈನ್, ನೀಲ್ ಭಟ್ ಮತ್ತು ಐಶ್ವರ್ಯಾ ಶರ್ಮಾ ,ಇಶಾ ಮಾಳವಿಯಾ ಮತ್ತು ಅಭಿಷೇಕ್ ಕುಮಾರ್, ಯೂಟ್ಯೂಬರ್ ದಂಪತಿ ಅರ್ಮಾನ್ ಮಲಿಕ್ ಮತ್ತು ಪಾಯಲ್ ಮಲಿಕ್ ಕೂಡ ಬಿಗ್ ಬಾಸ್ ಮನೆಗೆ ಎಂಟ್ರಿ ಆಗಲಿದ್ದಾರೆ.
ಇದೇ ಅ.15 ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.