ತೆರೆ ಮೇಲೆ ಬರಲಿದೆ ಚೆಸ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಬಯೋಪಿಕ್
Team Udayavani, Dec 14, 2020, 9:00 PM IST
ನವದೆಹಲಿ : ಸಾಧಕರ ಜೀವನ ಚರಿತ್ರೆ ಹಾಗೂ ಯಶಸ್ಸನ್ನು ತೆರೆ ಮೇಲೆ ತರುವ ಬಯೋಪಿಕ್ ಚಿತ್ರಗಳು ಬಾಲಿವುಡ್ ನಲ್ಲಿ ಬೇಕಾದ್ದಷ್ಟು ಬಂದಿವೆ. ಸದ್ಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಭಾರತದ ವಿಶ್ವನಾಥನ್ ಆನಂದ್ ಅವರ ಜೀವನವನ್ನು ತೆರೆಮೇಲೆ ತರುವ ಸಿದ್ದತೆಯಲ್ಲಿದೆ ಬಾಲಿವುಡ್.
ಚೆಸ್ ನಲ್ಲಿ 5 ಬಾರಿ ವಿಶ್ವ ಚಾಂಪಿಯನ್ ಪಟ್ಟವನ್ನು ಗೆದ್ದಿರುವ ವಿಶ್ವನಾಥನ್ ಆನಂದ್ ಅವರ ಬದುಕಿನ ಕಥೆಯನ್ನು ದೊಡ್ಡ ಪರದೆಯಲ್ಲಿ ಪ್ರೇಕ್ಷಕರ ಮುಂದೆ ತರುವ ಬಯೋಪಿಕ್ ಅನೌನ್ಸ್ ಆಗಿದ್ದು, ಈ ಸುದ್ದಿಯನ್ನು ಬಾಲಿವುಡ್ ಸಿನಿಮಾ ವಿತರಕ ತರಣ್ ಆದರ್ಶ್ ಟ್ವೀಟರ್ ನಲ್ಲಿ ಖಚಿತಪಡಿಸಿದ್ದಾರೆ. ಚೆಸ್ ಗ್ರ್ಯಾಂಡ್ ಮಾಸ್ಟರ್ ಆನಂದ್ ಜೀವನಾಧಾರಿತ ಚಿತ್ರವನ್ನು ಮಾಡಲು ಬಾಲಿವುಡ್ ಸಜ್ಜಾಗಿದ್ದು, ಈ ಚಿತ್ರವನ್ನು ಆನಂದ್ ಎಲ್ ರೈ ನಿರ್ದೇಶಿಸಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ : ರಾಮ & ಆಂಜನೇಯ ಅವತಾರದಲ್ಲಿ ದರ್ಶನ್-ಸುದೀಪ್ : ಫೋಟೋ ವೈರಲ್
ಚಿತ್ರದ ಟೈಟಲ್ ಹಾಗೂ ಕಲಾವಿದರ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ. ಸಿನಿ ಪ್ರೇಕ್ಷಕರಲ್ಲಿ ಚಿತ್ರದ ನಾಯಕ ಯಾರು ಆಗಲಿದ್ದಾರೆ ಎನ್ನುವ ಕುತೂಹಲ ಮೂಡಿದ್ದು, ಚರ್ಚೆಯಲ್ಲಿ ಅಭಿಷೇಕ್ ಬಚ್ಬನ್ ಹೆಸರು ಮುನ್ನಡೆಯಲ್ಲಿದೆ.ಆದರೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿಯಿಲ್ಲ. ಸದ್ಯ ಆನಂದ್ ಎಲ್ ರೈ ಅವರು ಅತ್ರಂಗಿ ರೇ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದಾದ ಬಳಿಕ ಚೆಸ್ ಮಾಂತ್ರಿಕ ವಿಶ್ಬನಾಥನ್ ಆನಂದ್ ಬಯೋಪಿಕ್ ಕೈಗೆತ್ತಿಕೊಳ್ಳುವ ಸಾದ್ಯತೆಯಿದೆ.
BIOPIC ON VISWANATHAN ANAND… A biopic on #Indian chess grandmaster #ViswanathanAnand has been planned… The biopic – not titled yet – will be directed by Aanand L Rai… Produced by Sundial Entertainment [Mahaveer Jain] and Colour Yellow Productions [Aanand L Rai]. pic.twitter.com/fNBtdza2Dq
— taran adarsh (@taran_adarsh) December 13, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.