ಬ್ಲ್ಯಾಕ್ ಪ್ಯಾಂಥರ್ ಖ್ಯಾತಿಯ ಹಾಲಿವುಡ್ ಸ್ಟಾರ್ ನಟ ಚಾಡ್ ವಿಕ್ ಬೋಸ್ ಮನ್ ಇನ್ನಿಲ್ಲ
ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದರೂ ಕೂಡಾ ಬೋಸ್ ಮನ್ ಯಾವತ್ತೂ ಸಾರ್ವಜನಿಕವಾಗಿ ಆ ಬಗ್ಗೆ ಹೇಳಿಕೊಂಡಿರಲಿಲ್ಲವಾಗಿತ್ತು.
Team Udayavani, Aug 29, 2020, 1:14 PM IST
ಮಣಿಪಾಲ: ಬ್ಲ್ಯಾಕ್ ಪ್ಯಾಂಥರ್ ಖ್ಯಾತಿಯ ಹಾಲಿವುಡ್ ಹೀರೋ “ಚಾಡ್ ವಿಕ್ ಬೋಸ್ ಮನ್ (43) ತೀವ್ರ ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿರುವುದಾಗಿ ಮೂಲಗಳು ತಿಳಿಸಿವೆ.
ಬೋಸ್ ಮನ್ ಅವರು ಲಾಸ್ ಏಂಜಲೀಸ್ ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದು, ಬೋಸ್ ಮನ್ ಅವರು ಪತ್ನಿ ಹಾಗೂ ಕುಟುಂಬ ಸದಸ್ಯರು ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿರುವುದಾಗಿ ಬೋಸ್ ಮನ್ ಪ್ರಚಾರಕರ್ತ ನಿಕಿ ಅಸೋಸಿಯೇಟೆಡ್ ಪ್ರೆಸ್ ಗೆ ತಿಳಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ದೊಡ್ಡ ಕರುಳು ಕ್ಯಾನ್ಸರ್ ನಿಂದ ಬ್ಲ್ಯಾಕ್ ಪ್ಯಾಂಥರ್ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೋಸ್ ಮನ್ ಸಾವನ್ನಪ್ಪಿರುವುದಾಗಿ ಕುಟುಂಬ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ನೀನೊಬ್ಬ ನಿಜವಾದ ಹೋರಾಟಗಾರ, ಚಾಡ್ ವಿಕ್ ನಿಜಕ್ಕೂ ಎಲ್ಲದಕ್ಕೂ ಅರ್ಹ ವ್ಯಕ್ತಿಯಾಗಿದ್ದಾರೆ. ಸಿನಿಮಾಗಳ ಮೂಲಕವೇ ಎಲ್ಲರ ಪ್ರೀತಿ ಪಾತ್ರರಾಗಿದ್ದೀರಿ. ಅನಾರೋಗ್ಯದ ನಡುವೆಯೇ ಬೋಸ್ ಮನ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದರು. ಕಿಮೋ ಥೆರಪಿ ಸಂದರ್ಭದಲ್ಲಿಯೂ “ಅವೆಂಜರ್ಸ್, ಬ್ಲ್ಯಾಕ್ ಪ್ಯಾಂಥರ್, 21 ಬ್ರಿಡ್ಜ್, ಡಾ.ಬ್ಲಡ್ ಸೇರಿದಂತೆ ಹಲವಾರು ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದರು.
— Chadwick Boseman (@chadwickboseman) August 29, 2020
ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದರೂ ಕೂಡಾ ಬೋಸ್ ಮನ್ ಯಾವತ್ತೂ ಸಾರ್ವಜನಿಕವಾಗಿ ಆ ಬಗ್ಗೆ ಹೇಳಿಕೊಂಡಿರಲಿಲ್ಲವಾಗಿತ್ತು. ದಕ್ಷಿಣ ಕರೋಲಿನಾದಲ್ಲಿ ಬೋಸ್ ಮನ್ ಜನಿಸಿದ್ದು, ಹಾರ್ವರ್ಡ್ ಯೂನಿರ್ವಸಿಟಿಯಲ್ಲಿ ಪದವಿ ಪಡೆದಿದ್ದರು.
ಸಿನಿಮಾ ರಂಗಕ್ಕೆ ಕಾಲಿಡುವ ಮುನ್ನ ಬೋಸ್ ಮನ್ 2003ರಲ್ಲಿ ಟೆಲಿವಿಷನ್ ನಲ್ಲಿ ಸಣ್ಣ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. 2008ರಲ್ಲಿ ದ ಎಕ್ಸ್ ಪ್ರೆಸ್, 2012ರ ದ ಕಿಲ್ ಹೋಲ್, 2013ರಲ್ಲಿ ಬೇಸ್ ಬಾಲ್ ದಂತಕತೆ, ಜಾಕಿ ರಾಬಿನ್ ಸನ್ ಜೀವನಾಧಾರಿತ “42” ಎಂಬ ಹೆಸರಿನ ಹಾಲಿವುಡ್ ಸಿನಿಮಾದಲ್ಲಿ ನಟಿಸಿದ್ದರು. ನಂತರ ಡ್ರಾಫ್ಟ್ ಡೇ, ಗಾಡ್ಸ್ ಆಫ್ ಈಜಿಪ್ಟ್, ಕ್ಯಾಪ್ಟನ್ ಅಮೆರಿಕಾ, ಮಾರ್ಷಲ್, 2018ರಲ್ಲಿ ಬಿಡುಗಡೆ ಕಂಡಿದ್ದ ಬ್ಲ್ಯಾಕ್ ಪ್ಯಾಂಥರ್ ಬೋಸ್ ಮನ್ ಗೆ ಅಪಾರ ಜನಪ್ರಿಯತೆ ತಂದು ಕೊಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.