ಕಾಜೋಲ್ ಗೆ ಕೋವಿಡ್ ಪಾಸಿಟಿವ್: ರುಡಾಲ್ಫ್ ಮೂಗನ್ನು ಯಾರೂ ನೋಡುವುದು ಬೇಡ ಎಂದ ನಟಿ
Team Udayavani, Jan 30, 2022, 11:25 AM IST
ಮುಂಬೈ: ಕೋವಿಡ್ ವೈರಸ್ ನ ಮೂರನೇ ಅಲೆಯು ದೇಶವನ್ನು ತೀವ್ರವಾಗಿ ತಟ್ಟಿದೆ. ಇತ್ತೀಚಿನ ದಿನಗಳಲ್ಲಿ ಅನೇಕ ಜನಪ್ರಿಯ ಸೆಲೆಬ್ರಿಟಿಗಳಿಗೆ ಕೋವಿಡ್ ಪಾಸಿಟಿವ್ ಆಗಿದೆ. ಮತ್ತು ಅದರಿಂದ ಚೇತರಿಸಿಕೊಂಡಿದ್ದಾರೆ. ಕೋವಿಡ್ ವೈರಸ್‌ಗೆ ತುತ್ತಾದ ಇತ್ತೀಚಿನ ಸೆಲೆಬ್ರಿಟಿಯೆಂದರೆ ಬಾಲಿವುಡ್ ನಟಿ ಕಾಜೋಲ್.
ನಟಿ ಕಾಜೋಲ್ ಇಂದು (ಜನವರಿ 30) ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತನಗೆ ಕೋವಿಡ್ -19 ಪಾಸಿಟಿವ್ ಆಗಿರುವ ಬಗ್ಗೆ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಾಜೋಲ್ ತನ್ನ ಸ್ವಂತ ಚಿತ್ರವನ್ನು ಹಂಚಿಕೊಳ್ಳುವ ಬದಲು ತನ್ನ ಮಗಳು ನೈಸಾ ದೇವಗನ್ ಅವರ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ:ದೇಶದ ವಯಸ್ಕ ಜನಸಂಖ್ಯೆ ಶೇ.75ರಷ್ಟು ಜನರಿಗೆ ಲಸಿಕೆ ಪೂರ್ಣ: ಅಭಿನಂದನೆ ಸಲ್ಲಿಸಿದ ಪ್ರಧಾನಿ
ಕಾಜೋಲ್ ತನ್ನ ಸ್ವಂತ ಚಿತ್ರವನ್ನು ಪೋಸ್ಟ್ ಮಾಡಲು ಬಯಸಲಿಲ್ಲ ಬದಲಾಗಿ ನೈಸಾ ದೇವಗನ್ ಅವರ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಚಿತ್ರದಲ್ಲಿ ಮೆಹೆಂದಿ ಧರಿಸಿರುವ ಕೈಗಳೊಂದಿಗೆ ನೈಸಾ ಸುಂದರವಾಗಿ ಕಾಣುತ್ತಿದ್ದಾರೆ. “ನನಗೆ ಕೋವಿಡ್ ಪಾಸಿಟಿವ್ ಆಗಿದೆ, ಹೀಗಾಗಿ ನನ್ನ ರುಡಾಲ್ಫ್ ಮೂಗನ್ನು ಯಾರೂ ನೋಡಬೇಕೆಂದು ನಾನು ಬಯಸುವುದಿಲ್ಲ, ಆದ್ದರಿಂದ ನಾವು ವಿಶ್ವದ ಅತ್ಯಂತ ಸಿಹಿಯಾದ ನಗುವಿಗೆ ಅಂಟಿಕೊಳ್ಳೋಣ! ಮಿಸ್ ಯು ನೈಸಾ ದೇವಗನ್” ಎಂದು ಕಾಜಲ್ ಬರೆದುಕೊಂಡಿದ್ದಾರೆ.
View this post on Instagram
ಕಾಜೋಲ್ ಅವರು ರೇವತಿ ನಿರ್ದೇಶನದ ‘ದಿ ಲಾಸ್ಟ್ ಹುರ್ರೇ’ ಚಿತ್ರಕ್ಕೆ ಸಹಿ ಹಾಕಿದ್ದರು. ಏತನ್ಮಧ್ಯೆ, ನೈಸಾ ಪ್ರಸ್ತುತ ಸಿಂಗಾಪುರದ ಗ್ಲಿಯನ್ ಇನ್‌ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್‌ನಲ್ಲಿ ಅಂತಾರರಾಷ್ಟ್ರೀಯ ಹಾಸ್ಪಿಟಾಲಿಟಿ ಅಧ್ಯಯನ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಶಾಲಾ ಶಿಕ್ಷಣವನ್ನೂ ಸಿಂಗಾಪುರದಲ್ಲಿಯೇ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.