ಗ್ರೀನ್ ಇಂಡಿಯಾ ಚಾಲೆಂಜ್‌ ನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಭಾಗಿ

ಪ್ರತಿಯೊಬ್ಬ ವ್ಯಕ್ತಿಯು ಗಿಡ ನೆಡುವ ಕಾರ್ಯಕ್ರಮದ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು

Team Udayavani, Jun 22, 2022, 9:48 PM IST

1-sfdsfdsf

ಹೈದರಾಬಾದ್ : ಬಾಲಿವುಡ್ ನಟ ಸಲ್ಮಾನ್ ಖಾನ್, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ರಾಜ್ಯಸಭಾ ಸಂಸದ ಮತ್ತು ಗ್ರೀನ್ ಇಂಡಿಯಾ ಸಂಸ್ಥಾಪಕ ಜೆ ಸಂತೋಷ್ ಕುಮಾರ್ ಅವರೊಂದಿಗೆ ಗ್ರೀನ್ ಇಂಡಿಯಾ ಚಾಲೆಂಜ್ 5.0 ನಲ್ಲಿ ಭಾಗವಹಿಸಿದ್ದಾರೆ.

ಶೂಟಿಂಗ್‌ ಗಾಗಿ ಆಗಮಿಸಿದ್ದ ಸಲ್ಮಾನ್ ಖಾನ್, ಚಿತ್ರತಂಡದೊಂದಿಗೆ ಮಂಗಳವಾರ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಸಸಿ ನೆಟ್ಟರು ಎಂದು ಸಂತೋಷ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಲ್ಮಾನ್ ಖಾನ್, ಪ್ರತಿಯೊಬ್ಬ ವ್ಯಕ್ತಿಯು ಗಿಡ ನೆಡುವ ಕಾರ್ಯಕ್ರಮದ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಮತ್ತು ಸಸಿಗಳು ದೊಡ್ಡದಾಗುವವರೆಗೆ ಅವುಗಳನ್ನು ಸಮರ್ಪಕವಾಗಿ ನೋಡಿಕೊಳ್ಳಬೇಕು. ಅತಿವೃಷ್ಟಿ, ಪ್ರವಾಹದಂತಹ ಪ್ರಾಕೃತಿಕ ವಿಕೋಪಗಳಿಂದ ಮಾನವನ ನಷ್ಟ ಅಪಾರವಾಗಿರುವುದು ವಿಷಾದನೀಯ. ನಷ್ಟವನ್ನು ಸರಿದೂಗಿಸುವ ಏಕೈಕ ಪರಿಹಾರವೆಂದರೆ ತೋಟಗಾರಿಕೆಯನ್ನು ಉತ್ತೇಜಿಸುವುದು ಎಂದು ಸಲ್ಮಾನ್ ಹೇಳಿದ್ದಾರೆ.

ಗ್ರೀನ್ ಇಂಡಿಯಾ ಚಾಲೆಂಜ್‌ಗೆ ಸೇರಲು ಮತ್ತು ದೊಡ್ಡ ಪ್ರಮಾಣದಲ್ಲಿ ಸಸಿಗಳನ್ನು ನೆಡಲು ನಟ ತಮ್ಮ ಅಭಿಮಾನಿಗಳು ಮತ್ತು ಅನುಯಾಯಿಗಳಿಗೆ ಕರೆ ನೀಡಿದ್ದಾರೆ. ಗಿಡ ನೆಡುವ ಕಾರ್ಯಕ್ರಮವನ್ನು ಕೈಗೆತ್ತಿಕೊಂಡಿರುವ ಸಂತೋಷ್ ಕುಮಾರ್ ಅವರನ್ನು ಸಲ್ಮಾನ್ ಖಾನ್ ಶ್ಲಾಘಿಸಿ, ಹಸಿರು ಹೊದಿಕೆಯನ್ನು ಸುಧಾರಿಸುವ ಸಂಸದರ ಪ್ರಯತ್ನವು ಭೂಮಿ ಮತ್ತು ಭವಿಷ್ಯದ ಪೀಳಿಗೆಯನ್ನು ರಕ್ಷಿಸಲು ಸಹಾಯ ಮಾಡುತ್ತದೆ ಎಂದರು.

ಸಂತೋಷ್ ಕುಮಾರ್ ಅವರು ದೇಶದ ಪ್ರಮುಖ ಹಸಿರು ಉಪಕ್ರಮಗಳಲ್ಲಿ ಒಂದಾದ ‘ಗ್ರೀನ್ ಇಂಡಿಯಾ ಚಾಲೆಂಜ್ (ಜಿಐಸಿ)’ ಅನ್ನು ಪ್ರಾರಂಭಿಸಿದ್ದರು. ಉಪಕ್ರಮದ ಭಾಗವಾಗಿ ಕೋಟಿಗಟ್ಟಲೆ ಸಸಿಗಳನ್ನು ನೆಡಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.