The Vaccine War: ‘ದಿ ವ್ಯಾಕ್ಸಿನ್ ವಾರ್’ ಟೀಸರ್ ಔಟ್; ʼಸಲಾರ್ʼ ಜೊತೆನೇ ರಿಲೀಸ್
Team Udayavani, Aug 15, 2023, 3:11 PM IST
ಮುಂಬಯಿ: ವಿವೇಕ್ ಅಗ್ನಿಹೋತ್ರಿ ಅವರ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದ ಅಧಿಕೃತ ರಿಲೀಸ್ ಡೇಟ್ ಹಾಗೂ ಟೀಸರ್ ಮಂಗಳವಾರ (ಆ.15 ರಂದು) ರಿಲೀಸ್ ಆಗಿದೆ.
‘ದಿ ಕಾಶ್ಮೀರ್ ಫೈಲ್ಸ್’ ಬಳಿಕ ವಿವೇಕ್ ಅಗ್ನಿಹೋತ್ರಿ ಅವರು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾವನ್ನು ಅನೌನ್ಸ್ ಮಾಡಿದ್ದರು. ಈ ಸಿನಿಮಾ ಕೋವಿಡ್ ವ್ಯಾಕ್ಸಿನ್ ಸುತ್ತ ಸಾಗುವ ಕಥೆಯನ್ನು ಒಳಗೊಂಡಿದೆ.
ಅದರಂತೆ 77ನೇ ಸ್ವಾತಂತ್ರ್ಯ ದಿನದಂದು ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಕುರಿತ ಪ್ರಯೋಗದ ದೃಶ್ಯದೊಂದಿಗೆ ಆರಂಭವಾಗುವ ಟೀಸರ್ ನಲ್ಲಿ ಭಾರತೀಯ ವಿಜ್ಞಾನಿಗಳು ವ್ಯಾಕ್ಸಿನ್ ಗಾಗಿ ಪಟ್ಟ ಶ್ರಮದ ಒಂದು ನೋಟವನ್ನು ತೋರಿಸಲಾಗಿದೆ.
ಸೈನ್ಸ್ ಲ್ಯಾಬ್ ನಲ್ಲಿ ವಿಜ್ಞಾನಿಯಾಗಿ ನಟಿ ಪಲ್ಲವಿ ಜೋಶಿ ಹಾಗೂ ನಾನಾ ಪಾಟೇಕರ್ ಅವರ ಪಾತ್ರವನ್ನು ತೋರಿಸಲಾಗಿದೆ. ಕೋವಿಡ್ ವ್ಯಾಕ್ಸಿನ್ ಗಾಗಿ ಭಾರತೀಯ ವಿಜ್ಞಾನಿಗಳು ಮಾಡಿದ ಪ್ರಯೋಗದ ಸುತ್ತ ಚಿತ್ರದ ಕಥೆ ಸಾಗುತ್ತದೆ ಎನ್ನುವ ಅಂಶವನ್ನು ಟೀಸರ್ ಹೇಳಲಾಗಿದೆ.
ಟೀಸರ್ ನೊಂದಿಗೆ ಸಿನಿಮಾ ತಂಡ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದು, ಇದೇ ವರ್ಷದ ಸೆ.28 ರಂದು ತೆರೆಗೆ ಬರಲಿದೆ ಎಂದು ಸಿನಿಮಾ ತಂಡ ಹೇಳಿದೆ.
ಅಚ್ಚರಿಯೆಂದರೆ ಅದೇ ದಿನ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ʼಸಲಾರ್ʼ ಸಿನಿಮಾ ಕೂಡ ರಿಲೀಸ್ ಆಗಲಿದ್ದು, ಬಾಕ್ಸ್ ಆಫೀಸ್ ನಲ್ಲಿ ಮತ್ತೊಂದು ಪೈಪೋಟಿ ಉಂಟಾಗುವ ಸಾಧ್ಯತೆಯಿದೆ.
ಈ ಸಿನಿಮಾದಲ್ಲಿ ಪಲ್ಲವಿ ಜೋಶಿ, ಅನುಪಮ್ ಖೇರ್, ನಾನಾ ಪಾಟೇಕರ್ ಮತ್ತು ಸಪ್ತಮಿ ಗೌಡ ಪ್ರಮುಖ ಪಾತ್ರಗಳಲ್ಲಿದ್ದಾರೆ. ʼಐ ಆ್ಯಮ್ ಬುದ್ಧʼ ಸಹಯೋಗದಲ್ಲಿ ಪಲ್ಲವಿ ಜೋಶಿ ಕೂಡ ಸಿನಿಮಾಕ್ಕೆ ಬಂಡವಾಳ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.