ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯ ಐಸಿಯುನಲ್ಲಿ ನಟ ಇರ್ಫಾನ್ ಖಾನ್ ಗೆ ಚಿಕಿತ್ಸೆ
ಈವರೆಗೂ ಅವರ ಧೈರ್ಯ ಮತ್ತು ಸಾಮರ್ಥ್ಯವೇ ಅವರಿಗೆ ಹೋರಾಡಲು ಶಕ್ತಿ ನೀಡಿತ್ತು.
Team Udayavani, Apr 28, 2020, 8:55 PM IST
ಮುಂಬೈ: ಬಾಲಿವುಡ್ ಖ್ಯಾತ ನಟ ಇರ್ಫಾನ್ ಖಾನ್ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರ ಪ್ರತಿನಿಧಿ ತಿಳಿಸಿರುವುದಾಗಿ ವರದಿ ಹೇಳಿದೆ.
ಇರ್ಫಾನ್ ಅವರು ದೊಡ್ಡ ಕರುಳಿನ ಸೋಂಕಿನ ಬಗ್ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ವಿವರಿಸಿದೆ. ನಟನ ಅಧಿಕೃತ ವಕ್ತಾರ ನೀಡಿರುವ ಪ್ರಕಟಣೆ ಪ್ರಕಾರ, ಹೌದು…ಇರ್ಫಾನ್ ಖಾನ್ ಅವರು ಕೋಕಿಲಾಬೆನ್ ಆಸ್ಪತ್ರೆಯ ಐಸಿಯುನಲ್ಲಿದ್ದಾರೆ. ನಾವು ಪ್ರತಿ ಸಮಯದ ವಿವರವನ್ನು ತಿಳಿಸುತ್ತೇವೆ. ಇರ್ಫಾನ್ ಅವರು ವೈದ್ಯರ ನಿಗಾದಲ್ಲಿದ್ದಾರೆ. ಈವರೆಗೂ ಅವರ ಧೈರ್ಯ ಮತ್ತು ಸಾಮರ್ಥ್ಯವೇ ಅವರಿಗೆ ಹೋರಾಡಲು ಶಕ್ತಿ ನೀಡಿತ್ತು. ಅವರಲ್ಲಿ ಅದ್ಭುತವಾದ ಇಚ್ಛಾಶಕ್ತಿ ಇದೆ. ಅವರು ಆರೋಗ್ಯದಿಂದ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಇರ್ಫಾನ್ ತಾಯಿ ಸಯೀದಾ ಬೇಗಂ(95ವರ್ಷ) ಅವರು ವಯೋಸಹಜ ಖಾಯಿಲೆಯಿಂದ ಜೈಪುರದಲ್ಲಿ ನಿಧನರಾಗಿದ್ದರು. ಆದರೆ ಪುತ್ರ ಇರ್ಫಾನ್ ಗೆ ಲಾಕ್ ಡೌನ್ ನಿಂದಾ ಮುಂಬೈನಲ್ಲಿ ಇದ್ದಿದ್ದು, ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲವಾಗಿತ್ತು.
ನಟ ಇರ್ಫಾನ್ ಖಾನ್ (54ವರ್ಷ) ಅವರು ನ್ಯೂರೋಎಂಡೋಕ್ರೈನ್ ಸಮಸ್ಯೆಯಿಂದ ಬಳಲುತ್ತಿದ್ದು, ಇದಕ್ಕಾಗಿ ತಾನು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು 2018ರಲ್ಲಿ ಘೋಷಿಸಿದ್ದರು. ಇದಕ್ಕಾಗಿ ಅವರು ವಿದೇಶಕ್ಕೆ ತೆರಳಿ ಚಿಕಿತ್ಸೆ ಪಡೆದಿದ್ದರು.
ಬಾಲಿವುಡ್ ನ ವಾರಿಯರ್, ಮಕ್ಬೂಲ್, ಹಾಸಿಲ್, ಪಾನ್ ಸಿಂಗ್ ತೋಮರ್, ರೋಗ್. ಲೈಫ್ ಆಫ್ ಪೈ, ನೇಮ್ ಸೇಕ್, ಸೇರಿದಂತೆ ಹಲವು ಚಿತ್ರಗಳ ಮೂಲಕ ಇರ್ಫಾನ್ ಚಿತ್ರಪ್ರೇಮಿಗಳ ಮನಗೆದ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್ ಶೆಟ್ಟಿಗೆ ಗಂಭೀರ ಗಾಯ
Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ
SRK: ಶಾರುಖ್ ಭೇಟಿಗೆ 95 ದಿನ ಮನೆ ಹೊರಗೆ ಕಾದು ಕೂತ ಅಭಿಮಾನಿ; ನಟ ಕೊಟ್ಟ ಉಡುಗೊರೆ ಏನು?
BʼTown: ʼಪುಷ್ಪ-2ʼಗೆ ದಾರಿ ಬಿಟ್ಟ ವಿಕ್ಕಿ ಕೌಶಲ್ ʼಛಾವಾʼ; ರಿಲೀಸ್ ಡೇಟ್ ಮುಂದೂಡಿಕೆ?
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.