ಹಾಲಿವುಡ್ ಸಿನಿಮಾ ಜೊತೆ ʼಜವಾನ್ʼ ಟ್ರೇಲರ್ ರಿಲೀಸ್: ಥ್ರಿಲ್ ಆದ ಶಾರುಖ್ ಪ್ಯಾನ್ಸ್
Team Udayavani, Jul 3, 2023, 1:37 PM IST
ಮುಂಬಯಿ: ʼಪಠಾಣ್ʼ ಸಿನಿಮಾದ ಬಳಿಕ ಶಾರುಖ್ ಖಾನ್ ಹಿಟ್ ಸಾಲಿನಲ್ಲಿ ನಿಂತಿದ್ದಾರೆ. ಈ ಬಾರಿ ಅವರ ಮತ್ತೊಂದು ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ʼಜವಾನ್ʼ ಗಾಗಿ ಫ್ಯಾನ್ಸ್ ಗಳು ಕಾತರದಿಂದ ಕಾಯುತ್ತಿದ್ದಾರೆ.
ʼಜವಾನ್ʼ ಸಿನಿಮಾ ಸಟ್ಟೇರಿದ ದಿನದಿಂದ ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಕಾಲಿವುಡ್ ಖ್ಯಾತ ನಿರ್ದೇಶಕ ಅಟ್ಲಿ ನಿರ್ದೇಶನ ಮಾಡಿರುವ ಸಿನಿಮಾದ ಪೋಸ್ಟರ್ ಹೈಪ್ ಕ್ರಿಯೇಟ್ ಮಾಡಿದೆ. ಇದೀಗ ಸಿನಿಮಾದ ಟ್ರೇಲರ್ ನತ್ತ ಪ್ರೇಕ್ಷಕರು ಗಮನ ಹರಿಸಿದ್ದು, ಸಿನಿಮಾದ ಟ್ರೇಲರ್ ರಿಲೀಸ್ ಡೇಟ್ ಹೊರಬಿದ್ದಿದೆ.
ʼಜವಾನ್ʼ ಸಿನಿಮಾದ ಮ್ಯೂಸಿಕ್ ರೈಟ್ಸ್ 36 ಕೋಟಿ ರೂ.ಗೆ ಮಾರಾಟವಾಗಿದೆ ಎನ್ನುವ ಹಾಟ್ ಟಾಪಿಕ್ ಚರ್ಚೆಯಲ್ಲಿರುವಾಗಲೇ ಇದೀಗ ಸಿನಿಮಾದ ಟ್ರೇಲರ್ ಹಾಲಿವುಡ್ ಸಿನಿಮಾದ ಜೊತೆಯೇ ರಿಲೀಸ್ ಆಗಲಿದೆ ಎನ್ನುವ ಸುದ್ದಿ ಸದ್ದು ಮಾಡುತ್ತಿದೆ.
ಟಾಮ್ ಕ್ರೂಸ್ ಅವರ ಹಾಲಿವುಡ್ ನ ಬಹು ನಿರೀಕ್ಷಿತ ಸಿನಿಮಾದಲ್ಲಿ ಒಂದಾಗಿರುವ ʼಮಿಷನ್ ಇಂಪಾಸಿಬಲ್ 7ʼ ಸಿನಿಮಾದ ಮಧ್ಯಂತರದಲ್ಲಿ ʼಜವಾನ್ʼ ಸಿನಿಮಾದ ಮೊದಲ ಟ್ರೈಲರ್ ಥಿಯೇಟರ್ ನಲ್ಲೇ ರಿಲೀಸ್ ಆಗಲಿದೆ ಎಂದು ವಿವಿಧ ವೆಬ್ ಸೈಟ್ ಗಳು ವರದಿ ಮಾಡಿದೆ. ಹಾಗೂ ಟ್ವೀಟ್ ಗಳು ವೈರಲ್ ಆಗಿವೆ.
ಇದನ್ನೂ ಓದಿ: Pan India: ನಂದ ಕಿಶೋರ್- ಮೋಹನ್ ಲಾಲ್ ʼವೃಷಭʼಕ್ಕೆ ಏಕ್ತಾ ಕಪೂರ್ ಸಾಥ್; ಬಜೆಟ್ ಎಷ್ಟು?
ಅಂದಹಾಗೆ ʼ ʼಮಿಷನ್ ಇಂಪಾಸಿಬಲ್ 7ʼ ಸಿನಿಮಾ ಜು.7 ರಂದು ತೆರೆಗೆ ಬರಲಿದೆ.
ʼಜವಾನ್ʼ ನಲ್ಲಿ ಶಾರುಖ್ ಖಾನ್ ಜೊತೆಗೆ ನಯನತಾರಾ, ವಿಜಯ್ ಸೇತುಪತಿ, ಪ್ರಿಯಾಮಣಿ, ಯೋಗಿ ಬಾಬು, ಸುನೀಲ್ ಗ್ರೋವರ್, ಸಾನ್ಯಾ ಮಲ್ಹೋತ್ರಾ ಸೇರಿದಂತ ಹಲವು ಜನಪ್ರಿಯ ಕಲಾವಿದರು ಅಭಿನಯಿಸಿದ್ದಾರೆ.
ದೀಪಿಕಾ ಪಡುಕೋಣೆ, ಸಂಜಯ್ ದತ್ ಮತ್ತು ವಿಜಯ್ ಅತಿಥಿ ಕಲಾವಿದರಾಗಿ ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಚಿತ್ರ ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.
ಚಿತ್ರಕ್ಕೆ ತಮಿಳಿನ ಜನಪ್ರಿಯ ಸಂಗೀತ ನಿರ್ದೇಶಕರಾದ ಅನಿರುದ್ಧ್ ರವಿಚಂದರ್ ಈ ಚಿತ್ರದ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಚಿತ್ರ ವನ್ನು ಶಾರುಖ್ ಖಾನ್ ಅವರ ಪತ್ನಿ ಗೌರಿ ಖಾನ್ ನಿರ್ಮಿಸುತ್ತಿದ್ದಾರೆ.
JAWAAN TRAILER ON BIG SCREEN WITH MISSION IMPOSSIBLE 7!
GET ready for a BLAST – #ShahRukhKhan ready to unveil the #JawanTrailer digitally soon and the same will be attached to the prints of #MissionImpossible7 in all formats (including IMAX) from July 12. Are you ready? #Jawan pic.twitter.com/QogiCMclBc
— Himesh (@HimeshMankad) July 3, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.