ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೈಲಿನಿಂದ ಬಿಡುಗಡೆ
Team Udayavani, Sep 21, 2021, 1:12 PM IST
ಮುಂಬೈ: ನೀಲಿ ಸಿನಿಮಾ ನಿರ್ಮಾಣ ಪ್ರಕರಣದಡಿ ಬಂಧಿತರಾಗಿದ್ದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಮಂಗಳವಾರ (ಸೆ.21) ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದರು.
ನೀಲಿ ಸಿನಿಮಾ ನಿರ್ಮಾಣ ಹಾಗೂ ಆ್ಯಪ್‍ಗಳ ಮೂಲಕ ಅವುಗಳ ಬಿಡುಗಡೆ ಆರೋಪದಡಿ ರಾಜ್ ಕುಂದ್ರಾ ಅವರನ್ನು ಕಳೆದ ಜುಲೈ ತಿಂಗಳಿನಲ್ಲಿ ಮುಂಬೈ ಅಪರಾಧ ಇಲಾಖೆಯ ಪೊಲೀಸರು ಬಂಧಿಸಿದ್ದರು. ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಮುಂಬೈ ನ್ಯಾಯಾಲಯಕ್ಕೆ ಕುಂದ್ರಾ ವಿರುದ್ಧ ಇತ್ತೀಚಿಗಷ್ಟೆ 1500 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಕುಂದ್ರಾ ಅವರು ತಮ್ಮ ಬಂಧನದ ದಿನದಿಂದ ಜಾಮೀನು ಪಡೆಯಲು ಪ್ರಯತ್ನ ನಡೆಸಿದ್ದರು. ಕೊನೆಗೆ ಸೋಮವಾರ (ಸೆ.20) ಮುಂಬೈ ಕೋರ್ಟ್ 50,000 ಶ್ಯೂರಿಟಿಯೊಂದಿಗೆ ಬೇಲ್ ಮಂಜೂರು ಮಾಡಿತು. ಈ ಹಿನ್ನೆಲೆ ಎರಡು ತಿಂಗಳ ಬಳಿಕ ಮಂಗಳವಾರ ಮುಂಬೈ ಆರ್ಥರ್ ರಸ್ತೆಯಲ್ಲಿರುವ ಜೈಲಿನಿಂದ ಹೊರ ಬಂದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸದೆ ತಮ್ಮ ಕಾರಿನಲ್ಲಿ ಹೊರಟು ಹೋದರು.
#WATCH | Businessman Raj Kundra released from Arthur Road Jail in Mumbai. He was granted bail by a Mumbai court yesterday in connection with pornography case. pic.twitter.com/NUU2mQvVbK
— ANI (@ANI) September 21, 2021
ಇನ್ನು ಸಿನಿಮಾರಂಗ ಪ್ರವೇಶದ ಕನಸು ಕಂಡ ಹುಡುಗಿಯರು ಹಾಗೂ ಮಾಡೆಲ್‍ಗಳಿಗೆ ಗಾಳ ಹಾಕುತ್ತಿದ್ದ ರಾಜ್ ಕುಂದ್ರಾ, ಅವರನ್ನು ಬಳಸಿಕೊಂಡು ನೀಲಿ ಸಿನಿಮಾ ನಿರ್ಮಿಸುತ್ತಿದ್ದರು. ಈತನ ವಿರುದ್ಧ ಶರ್ಲಿನ್ ಚೋಫ್ರಾ ಹಾಗೂ ಪೂನಂ ಪಾಂಡೆ ಸೇರಿದಂತೆ ಹಲವರು ದೂರು ಕೂಡ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.