ಪದ್ಮಾವತಿ ಅಲ್ಲ ಪದ್ಮಾವತ್: ಅಂತೂ ಸಿಕ್ಕಿತು CBFC ಸರ್ಟಿಫಿಕೇಟ್
Team Udayavani, Dec 30, 2017, 3:49 PM IST
ಹೊಸದಿಲ್ಲಿ : ಐತಿಹಾಸಿಕ ಕಥಾ ಚಿತ್ರ ಪದ್ಮಾವತಿಗೆ ಕೇಂದ್ರ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದೆ; ಆದರೆ ಚಿತ್ರದ ಹೆಸರನ್ನು ಪದ್ಮಾವತ್ ಎಂದು ಬದಲಾಯಿಸುವಂತೆ ಸೂಚಿಸಿದೆ.
ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಮತ್ತು ಶಾಹೀದ್ ಕಪೂರ್ ನಟನೆಯ ಪದ್ಮಾವತಿ ಚಿತ್ರ ಸೆಟ್ಟಿಗೆ ಹೋದಂದಿನಿಂದಲೂ ವಿವಾದಕ್ಕೆ ಗುರಿಯಾಗುತ್ತಲೇ ಬಂದಿತ್ತು. ಇತಿಹಾಸವನ್ನು ತಿರುಚಲಾಗಿದೆ ಎಂಬ ಕಾರಣವನ್ನು ಆರೋಪಿ ರಾಜಸ್ಥಾನದ ರಾಜಪೂತ ಕರಣಿ ಸೇನೆ ಚಿತ್ರ ಬಿಡುಗಡೆಗೆ ಬಹಿಷ್ಕಾರ ಹಾಕಿ ದೇಶಾದ್ಯಂತ ಉಗ್ರ ಪ್ರತಿಭಟನೆಗೆ ಕಿಡಿ ಹಚ್ಚಿತ್ತು.
ಸಂಜಯ್ ಲೀಲಾ ಭನ್ಸಾಲಿ ಅವರ ಈ ಐತಿಹಾಸಿಕ ವಿವಾದಿತ ಕಥಾ ಚಿತ್ರವು ಈ ಮೊದಲು 2017ರ ಡಿ.1ರಂದು ತೆರೆ ಕಾಣುವುದೆಂದು ಹೇಳಲಾಗಿತ್ತು. ಆದರೆ ಸಕಾಲದಲ್ಲಿ CBFC ಸರ್ಟಿಫಿಕೇಟ್ ಪಡೆಯುವಲ್ಲಿ ವಿಫಲವಾಗಿತ್ತು. ಪರಿಣಾಮವಾಗಿ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿತ್ತು.
ಡಿಸೆಂಬರ್ 28ರಂದು CBFC ಪರಿಶೀಲನಾ ಸಮಿತಿ ಸಭೆ ನಡೆದು ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ನೀಡಲು ತೀರ್ಮಾನವಾಯಿತು; ಆದರೆ ಚಿತ್ರದ ಹೆಸರನ್ನು ಪದ್ಮಾವತಿಗೆ ಬದಲು ಪದ್ಮಾವತ್ ಎಂದು ಬದಲಾಯಿಸುವಂತೆ ಚಿತ್ರ ನಿರ್ಮಾಪಕರಿಗೆ ಸೂಚಿಸಲಾಯಿತು.
ಸಂಜಯ್ ಲೀಲಾ ನಿರ್ದೇಶನದ ಪದ್ಮಾವತಿ ಚಿತ್ರದಲ್ಲಿ ನಟಿ ದೀಪಿಕಾ ಪಡುಕೋಣೆ ರಾಣಿ ಪದ್ಮಾವತಿ ಪಾತ್ರವನ್ನೂ ಶಾಹೀದ್ ಕಪೂರ್ ಮಹಾರಾವಲ್ ರತನ್ ಸಿಂಗ್ ಪಾತ್ರವನ್ನೂ ರಣವೀರ್ ಸಿಂಗ್ ಅಲಾವುದ್ದೀನ್ ಖೀಲ್‌ಜಿ ಪಾತ್ರವನ್ನೂ ನಿರ್ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.