ಚಿತ್ರರಂಗದ ಕಾರ್ಮಿಕರಿಗೆ ‘ಉಚಿತ ಕೋವಿಡ್ ಲಸಿಕೆ ಅಭಿಯಾನ’ ಪ್ರಾರಂಭಿಸಿದ ನಟ ಚಿರಂಜೀವಿ
Team Udayavani, Apr 21, 2021, 4:26 PM IST
ತೆಲಂಗಾಣ : ಕಳೆದ ವರ್ಷ ಕೋವಿಡ್ ಪಿಡುಗಿನ ಸಮಯದಲ್ಲಿ ಸಂಷಕ್ಟದಲ್ಲಿದ್ದ ಚಿತ್ರರಂಗದ ಸಾವಿರಾರು ಕಾರ್ಮಿಕರಿಗೆ ನೆರವಿನ ಹಸ್ತ ಚಾಚಿದ್ದ ಮೆಗಾ ಸ್ಟಾರ್ ಚಿರಂಜೀವಿ, ಇದೀಗ ಮತ್ತೊಂದು ಮಹತ್ತರವಾದ ಕಾರ್ಯ ಶುರು ಮಾಡಿದ್ದಾರೆ.
ಟಾಲಿವುಡ್‍ನ ಸೂಪರ್ ಸ್ಟಾರ್ ಚಿರಂಜೀವಿ ತೆಲುಗು ಚಿತ್ರರಂಗದ ಕಾರ್ಮಿಕರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಅಭಿಯಾನ ಪ್ರಾರಂಭಿಸಿದ್ದಾರೆ. ಚಿರಂಜೀವಿ ಅವರು ಸ್ಥಾಪಿಸಿರುವ ‘ಕರೋನಾ ಕ್ರೈಸಿಸ್ ಚಾರಿಟಿ’ ಸಂಸ್ಥೆ ಅಪೋಲೊ ಆಸ್ಪತ್ರೆಯ ಜೊತೆಗೆ ಒಪ್ಪಂದ ಮಾಡಿಕೊಂಡು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದೆ.
ಇಂದು ಟ್ವಿಟರಿನಲ್ಲಿ ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಜಿರಂಜೀವಿ, 45 ವರ್ಷ ವಯಸ್ಸು ದಾಟಿದ ಚಿತ್ರರಂಗದ ಕಾರ್ಮಿಕರು, ಸಿನಿಮಾ ಪತ್ರಕರ್ತರು ತಪ್ಪದೆ ಲಸಿಕೆ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಕಳೆದ ವರ್ಷ ಕೋವಿಡ್ ಸೋಂಕು ಕಾಣಿಸಿಕೊಂಡ ಸಂದರ್ಭದಲ್ಲಿ ಚಿರಂಜೀವಿ ಅವರು ‘ಕರೋನಾ ಕ್ರೈಸಿಸ್ ಚಾರಿಟಿ’ ಸೇವಾ ಸಂಸ್ಥೆ ಸ್ಥಾಪಿಸಿದ್ದರು. ಕೆಲಸ ಇಲ್ಲದೆ ಸಂಕಷ್ಟದಲ್ಲಿದ್ದ ಸಾವಿರಾರು ಚಿತ್ರರಂಗದ ಕಾರ್ಮಿಕರಿಗೆ ಈ ಚಾರಿಟಿ ಮೂಲಕ ಸಹಾಯ ಮಾಡಿದ್ದರು. ಪ್ರತಿ ತಿಂಗಳು ಅಗತ್ಯ ವಸ್ತುಗಳನ್ನು ಮನೆ-ಮನೆಗೆ ತಲುಪಿಸಿದ್ದರು. ತೆಲುಗು ಚಿತ್ರರಂಗದ ಹಲವು ನಟ-ನಟಿಯರು ಸಹ ‘ಕರೋನಾ ಕ್ರೈಸಿಸ್ ಚಾರಿಟಿ’ಗೆ ಹಣ ನೀಡಿ, ಚಿರಂಜೀವಿ ಅವರು ಸೇವಾ ಕಾರ್ಯಕ್ಕೆ ಕೈ ಜೋಡಿಸಿದ್ದರು.
ಈ ವರ್ಷವೂ ಕೋವಿಡ್ ಎರಡನೇ ಅಲೆ ಶುರುವಾಗಿದ್ದು, ಸಂಕಷ್ಟದಲ್ಲಿದ್ದವರ ನೆರವಿಗೆ ‘ಕರೋನಾ ಕ್ರೈಸಿಸ್ ಚಾರಿಟಿ’ ಮುಂದಾಗಿದೆ.
తెలుగు చిత్ర పరిశ్రమలోని సినీ కార్మికులని,సినీ జర్నలిస్టులని కరోనా బారి నుంచి రక్షించుకునేందుకు కరోనా క్రైసిస్ ఛారిటీ #CCC తరుపున ఉచితంగా అందరికి వాక్సినేషన్ వేయించే సదుపాయం అపోలో 247 సౌజన్యంతో చేపడుతున్నాం. Lets ensure safety of everyone.#GetVaccinated#WearMask #StaySafe pic.twitter.com/NpIhuYWlLd
— Chiranjeevi Konidela (@KChiruTweets) April 20, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.