Ranbir Kapoor: ಧಾರ್ಮಿಕ ಭಾವನೆಗಳಿಗೆ ಧಕ್ಕೆ, ಬಾಲಿವುಡ್ ನಟ ರಣಬೀರ್ ಕಪೂರ್ʼ ವಿರುದ್ಧ ದೂರು
ಕೇಕ್ ಮೇಲೆ ಮದ್ಯ ಸುರಿದು 'ಜೈ ಮಾತಾ ದಿ' ಎಂದು ಘೋಷಣೆ ಕೂಗಿದ ನಟ
Team Udayavani, Dec 28, 2023, 8:24 AM IST
ಮುಂಬಯಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಾಲಿವುಡ್ ನಟ ರಣಬೀರ್ ಕಪೂರ್ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ದೂರು ದಾಖಲಾಗಿದೆ. ನಟ ಕ್ರಿಸ್‌ಮಸ್ ಆಚರಿಸುತ್ತಿರುವ ವಿಡಿಯೋ ವೈರಲ್ ಆದ ನಂತರ ಈ ದೂರು ದಾಖಲಾಗಿದೆ.
ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಕ್ರಿಸ್ಮಸ್ ಆಚರಿಸುತ್ತಿರುವ ವೀಡಿಯೊ ಒಂದು ವೈರಲ್ ಆಗಿದ್ದು, ಇದರಲ್ಲಿ ರಣಬೀರ್ ಕೇಕ್ ಮೇಲೆ ಮದ್ಯ ಸುರಿದು ‘ಜೈ ಮಾತಾ ದಿ’ ಎಂದು ಘೋಷಣೆಯನ್ನು ಕೂಗಿದ್ದು ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಸಂಜಯ್ ತಿವಾರಿ ಅವರು ತಮ್ಮ ವಕೀಲರಾದ ಆಶಿಶ್ ರಾಯ್ ಮತ್ತು ಪಂಕಜ್ ಮಿಶ್ರಾ ಮೂಲಕ ಘಾಟ್‌ಕೋಪರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ವಿಡಿಯೋದಲ್ಲಿ ರಣಬೀರ್ ‘ಜೈ ಮಾತಾ ದಿ’ ಎಂದು ಹೇಳುತ್ತಾ ಕೇಕ್ ಮೇಲೆ ಮದ್ಯ ಸುರಿದು ಬೆಂಕಿ ಹಚ್ಚುತ್ತಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಅವರು ಹೇಳಿದ್ದಾರೆ. ಹಿಂದೂ ಧರ್ಮದಲ್ಲಿ, ಇತರ ದೇವತೆಗಳನ್ನು ಆವಾಹನೆ ಮಾಡುವ ಮೊದಲು ಅಗ್ನಿ ದೇವರನ್ನು ಆವಾಹನೆ ಮಾಡಲಾಗುತ್ತದೆ, ಆದರೆ ಕಪೂರ್ ಮತ್ತು ಅವರ ಕುಟುಂಬ ಸದಸ್ಯರು ಇತರ ಧರ್ಮದ ಹಬ್ಬವನ್ನು ಆಚರಿಸುವಾಗ ಉದ್ದೇಶಪೂರ್ವಕವಾಗಿ ಮಾದಕ ದ್ರವ್ಯ ಸೇವಿಸಿ ‘ಜೈ ಮಾತಾ ದಿ’ ಎಂದು ಘೋಷಣೆ ಕೂಗಿದ್ದಾರೆ ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Ranbir Kapoor And Alia Bhatt 😂
How scared she looks LOL 💝https://t.co/ML1blI56MG pic.twitter.com/HF0rQ7Jeye
— Fatima Khan (@afficasm) December 26, 2023
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.