Leo: ರಿಲೀಸ್ ಗೂ ಮುನ್ನ ವಿವಾದದಲ್ಲಿ ಸಿಲುಕಿದ ದಳಪತಿ ವಿಜಯ್ ʼಲಿಯೋʼ: ನಟನ ವಿರುದ್ಧ ದೂರು
Team Udayavani, Jun 26, 2023, 3:48 PM IST
ಚೆನ್ನೈ: ದಳಪತಿ ವಿಜಯ್ ಅವರ ʼಲಿಯೋʼ ಸಿನಿಮಾ ಸದ್ಯ ಕಾಲಿವುಡ್ ನಲ್ಲಿ ಟ್ರೆಂಡಿಂಗ್ ಟಾಕ್. ಇತ್ತೀಚೆಗಷ್ಟೇ ಸಿನಿಮಾದ ಫಸ್ಟ್ ಲುಕ್ ಹಾಗೂ ಹಾಡು ರಿಲೀಸ್ ಆಗಿದ್ದು, ವಿಜಯ್ ಅಭಿಮಾನಿಗಳಿಗೆ ಡಬಲ್ ಖುಷಿ ಕೊಟ್ಟಿದೆ.
ಲೋಕೇಶ್ ಕನಕರಾಜ್ ನಿರ್ದೇಶನದ ʼಲಿಯೋʼ ವರ್ಷದ ಬಹು ನಿರೀಕ್ಷಿತ ಸಿನಿಮಾಗಳ ಸಾಲಿಗೆ ಸೇರಿದೆ. ಇತ್ತೀಚೆಗಷ್ಟೇ ವಿಜಯ್ ಹುಟ್ಟುಹಬ್ಬಕ್ಕೆ ʼಲಿಯೋʼ ಚಿತ್ರತಂಡ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದೆ. ಕೈಯಲ್ಲಿ ಸುತ್ತಿಗೆಯೊಂದನ್ನು ಹಿಡಿದುಕೊಂಡು ಮಾಸ್ ಅವತಾರದಲ್ಲಿ ವಿಜಯ್ ಕಾಣಿಸಿಕೊಂಡಿದ್ದಾರೆ. “ಪಳಗಿಸದ ನದಿಗಳ ಜಗತ್ತು, ಶಾಂತವಾದ ನೀರು ದೈವಿಕ ದೇವತೆಗಳಾಗುತ್ತವೆ ಅಥವಾ ಭಯಾನಕ ರಾಕ್ಷಸರಾಗುತ್ತವೆ.” ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ. ಈ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದರ ಜೊತೆ ಸಿನಿಮಾ ತಂಡ ʼನಾ ರೆಡಿʼ ಲಿರಿಕಲ್ ವಿಡಿಯೋ ಹಾಡನ್ನು ಕೂಡ ರಿಲೀಸ್ ಮಾಡಿದೆ. ಈ ಹಾಡು ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದೆ. ವಿಜಯ್ ಅವರ ಸ್ಟೆಪ್ ಗಳನ್ನು ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಹಾಡಿನ ಸುತ್ತ ಈಗ ವಿವಾದ ಸುತ್ತಿಕೊಂಡಿದೆ. ಅದಕ್ಕೆ ಕಾರಣ ಆರ್ ಟಿಐ ಕಾರ್ಯಕರ್ತರೊಬ್ಬರು ನೀಡಿರುವ ದೂರು.
ಕೊರುಕ್ಕುಪ್ಪೆಟ್ಟೈ ಮೂಲದ ಆರ್‌ಟಿಐ ಕಾರ್ಯಕರ್ತ ಸೆಲ್ವಂ ಹಾಡಿನಲ್ಲಿ ಡ್ರಗ್ಸ್ ಸೇವನೆ ಮತ್ತು ರೌಡಿಸಂನ್ನು ವೈಭವೀಕರಿಸುವ ದೃಶ್ಯಗಳಿವೆ ಎಂದು ಜೂನ್ 25ರಂದು ಆನ್‌ಲೈನ್‌ನಲ್ಲಿ ದೂರು ದಾಖಲಿಸಿದ್ದು, ಜು.26ರ ಬೆಳಗ್ಗೆ 10 ಗಂಟೆ ಸುಮಾರಿಗೆ ಅರ್ಜಿ ಸಲ್ಲಿಕೆಯಾಗಿದೆ. ಚಿತ್ರತಂಡದ ವಿರುದ್ಧ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಮಾದಕ ವಸ್ತುಗಳ ಬಳಕೆಯ ವಿರುದ್ಧ ಚೆನ್ನೈ ಪೊಲೀಸರು ನಗರದಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ನಟ ಕಾರ್ತಿ ಮತ್ತು ವಿಜಯ್ ಆಂಟೋನಿ ಭಾಗವಹಿಸಿದ್ದಾರೆ.
ʼಲಿಯೋʼ ಸಿನಿಮಾಕ್ಕೆ ಅನಿರುದ್ಧ್ ರವಿಚಂದರ್ ಅವರು ಮ್ಯೂಸಿಕ್ ನೀಡಿದ್ದು, ನಟಿ ತ್ರಿಷಾ ಕೃಷ್ಣನ್ 14 ವರ್ಷಗಳ ಬಳಿಕ ವಿಜಯ್ ಅವರ ಜೊತೆಯಾಗಿ ನಟಿಸಿದ್ದಾರೆ. ಸಂಜಯ್ ದತ್ ,ಅರ್ಜುನ್, ಮಿಸ್ಕಿನ್, ಮನ್ಸೂರ್ ಅಲಿ ಖಾನ್, ಗೌತಮ್ ಮೆನನ್, ಪ್ರಿಯಾ ಆನಂದ್, ಮ್ಯಾಥ್ಯೂ ಥಾಮಸ್, ಸ್ಯಾಂಡಿ ಮಾಸ್ಟರ್ ಮುಂತಾದ ನಟರು ಸಿನಿಮಾದಲ್ಲಿ ನಟಿಸಿದ್ದಾರೆ.
‘ಲಿಯೋʼ ಅಕ್ಟೋಬರ್ ವೇಳೆಗೆ ರಿಲೀಸ್ ಆಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್ ಶೇಕ್ ಗ್ಯಾರೆಂಟಿ
Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್ ನಾಮಿನೇಷನ್ ವೋಟಿಂಗ್ ವಿಸ್ತರಣೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.