ಬಾಲಿವುಡ್ ನಟಿ ಕತ್ರಿನಾ ಕೈಫ್ಗೆ ಕೋವಿಡ್-19 ಪಾಸಿಟಿವ್
Team Udayavani, Apr 6, 2021, 5:39 PM IST
ಮುಂಬೈ : ಸೆಲೆಬ್ರಿಟಿಗಳಲ್ಲಿ ಕೋವಿಡ್ ಸೋಂಕು ಮುಂದುವರೆದಿದೆ. ಇದೀಗ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರಿಗೂ ಮಹಾಮಾರಿ ಕೋವಿಡ್ ಸೋಂಕು ವಕ್ಕರಿಸಿಕೊಂಡಿದೆ.
ಈ ವಿಚಾರವನ್ನು ಸ್ವತಃ ಕತ್ರಿನಾ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದು, ನನಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ತಕ್ಷಣವೆ ಐಸೋಲೇಶನ್ ಹಾಗೂ ಹೋಮ್ ಕ್ವಾರೆಂಟೈನ್ಗೆ ಒಳಗಾಗಿದ್ದೇನೆ. ವೈದ್ಯರ ಸಲಹೆಯಂತೆ ಎಲ್ಲ ಮುನ್ನೆಚ್ಚರಿಕೆಯ ಕ್ರಮಗಳನ್ನು ಪಾಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿರುವ ಕ್ಯಾಟ್, ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ನಾನು ಚಿರಋಣಿ, ಎಲ್ಲರೂ ಸುರಕ್ಷಿತವಾಗಿ ಮನೆಯಲ್ಲಿ ಇರಿ ಎಂದು ಮನವಿ ಮಾಡಿದ್ದಾರೆ.
ಬಾಲಿವುಡ್ ನಟ ಅಕ್ಷಯ್ ಕುಮಾರ್, ಆಮೀರ್ ಖಾನ್, ಗೋವಿಂದ್, ಆರ್ ಮಾಧವನ್, ನಟಿ ಆಲಿಯಾ ಭಟ್, ಗಾಯಕ ಆದಿತ್ಯಾ ನಾರಾಯಣ್ ಅವರಲ್ಲೂ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.
ಇಂದು ಮುಂಜಾನೆ ಕುನಾಲ್ ಕಮ್ರಾ ಅವರಿಗೂ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದೆ. ಅದೇ ರೀತಿ ಸೋಮವಾರ ಬಾಲಿವುಡ್ ನಟ ವಿಕ್ಕಿ ಕೌಶಾಲ್ ಹಾಗೂ ನಟಿ ಭೂಮಿ ಪಡ್ನೆಕರ್ ಅವರಿಗೂ ಕೂಡ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.